Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*
  • *ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*
  • *ಆಟೋ ಹಾಗೂ ಮಾಂದಲ್ ಪಟ್ಟಿ ಬಾಡಿಗೆ ವಾಹನ ದರ ಪರಿಷ್ಕರಣೆ : ಉಪ ಸಮಿತಿ ರಚನೆಗೆ ನಿರ್ಧಾರ*
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜನೌಷಧಿ ಕೇಂದ್ರ ದಿನಾಚರಣೆ : ದೂರದೃಷ್ಟಿ ಯೋಜನೆಯಿಂದ ಕೋಟ್ಯಂತರ ಜನರಿಗೆ ಅನುಕೂಲ : ಸಂಸದ ಯದುವೀರ್‌*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಜನೌಷಧಿ ಕೇಂದ್ರ ದಿನಾಚರಣೆ : ದೂರದೃಷ್ಟಿ ಯೋಜನೆಯಿಂದ ಕೋಟ್ಯಂತರ ಜನರಿಗೆ ಅನುಕೂಲ : ಸಂಸದ ಯದುವೀರ್‌*

ಮಾರ್ಚ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು, ಮಾ.8 NEWS DESK : ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನ ಕೆ.ಆರ್‌. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಡ ಹಾಗೂ ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರಿಗೆ ಜನೌಷಧಿ ಕೇಂದ್ರಗಳಿಂದ ಭಾರಿ ಪ್ರಯೋಜನಗಳಾಗಿವೆ. ಜನೌಷಧಿಗಳ ಬಳಕೆ ಮತ್ತು ಉಪಯೋಗಗಳ ಬಗ್ಗೆ ಈಗಾಗಲೇ ಸಾಕಷ್ಟು ಅಭಿಯಾನ ನಡೆಸಲಾಗಿದೆ ಎಂದು ಒಡೆಯರ್‌ ತಿಳಿಸಿದರು. ಜನೌಷಧಿ ಕೇಂದ್ರಗಳು ಆರಂಭವಾದ ನಂತರ ಮಧ್ಯಮ ವರ್ಗದವರ ಮೇಲೆ ಹೆಚ್ಚಿನ ಹೊರೆ ಆಗುತ್ತಿಲ್ಲ. ಈ ಮೊದಲು ಔಷಧಿಗಳಿಗೆ ಹೆಚ್ಚು ವ್ಯಯಿಸುತ್ತಿದ್ದ ಜನರು ಈಗ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳನ್ನು ಖರೀದಿ ಮಾಡುವ ಮೂಲಕ ಸಾಕಷ್ಟು ಹಣ ಉಳಿಸುತ್ತಿದ್ದಾರೆ ಎಂದು ಹೇಳಿದರು. ಕಡಿಮೆ ಬೆಲೆಯಿಂದಾಗಿ ಬಡ ರೋಗಿಗಳಿಗೆ ಜನೌಷಧಿ ಕೇಂದ್ರಗಳು ಅನುಕೂಲವಾಗಿದೆ. ಜನೌಷಧಿ ಮಳಿಗೆಗಳಲ್ಲಿ ಬಿಪಿ, ಷುಗರ್‌, ಅಸಿಡಿಟಿ ಹಾಗೂ ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಔಷಧ ಲಭ್ಯವಾಗುತ್ತಿದೆ. ಇತ್ತೀಚೆಗೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ಸಿಗುತ್ತಿದೆ ಎಂದು ಸಂಸದರು ತಿಳಿಸಿದರು. ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನೌಷಧಿ ಕೇಂದ್ರಗಳಿಗೆ ನೂತನ ಸ್ಪರ್ಶ ನೀಡಿದರು. ಈಗ ಲಕ್ಷಾಂತರ ಜನೌಷಧಿ ಕೇಂದ್ರಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಿವೆ. ನಮ್ಮ ಕೇಂದ್ರ ಬಿಜೆಪಿ ಸರ್ಕಾರದ ಜನಪರ ಕಾಳಜಿಗಳಿಗೆ ಇದು ಸಾಕ್ಷಿಯಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.

ಮಡಿಕೇರಿಯಲ್ಲಿ ಜನೌಷಧಿ ಕೇಂದ್ರ ದಿನಾಚರಣೆ :: ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದ ಯದುವೀರ್‌ ಒಡೆಯರ್‌ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರಗಳ ದಿನಾಚರಣೆಯಲ್ಲಿ ಪಾಲ್ಗೊಂಡರು. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಜನೌಷಧಿ ಕೇಂದ್ರಕ್ಕೆ ಹೆಚ್ಚು ಜನರು ಭೇಟಿ ನೀಡುತ್ತಿದ್ದು, ಇಲ್ಲಿನ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಜನಪರ ಹಾಗೂ ಜನೋಪಯೋಗಿ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಸದಾ ಮುಂದಾಗಿದೆ. ಮುಂದಿನ ದಿನಗಳಲ್ಲಿ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಾಗಲಿದೆ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚು ಜನೌಷಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

 

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.18 : ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ ಹಾಗೂ ಅದರ…

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*

ಏಪ್ರಿಲ್ 18, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*

ಏಪ್ರಿಲ್ 18, 2026

*ಆಟೋ ಹಾಗೂ ಮಾಂದಲ್ ಪಟ್ಟಿ ಬಾಡಿಗೆ ವಾಹನ ದರ ಪರಿಷ್ಕರಣೆ : ಉಪ ಸಮಿತಿ ರಚನೆಗೆ ನಿರ್ಧಾರ*

ಏಪ್ರಿಲ್ 18, 2026

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.