
ಸೋಮವಾರಪೇಟೆ ಮಾ.8 NEWS DESK : ವಿದ್ಯಾ ಇನ್ಸಿಟ್ಯೂಟ್ ಆಫ್ ಹೆಲ್ತ್‍ಕೇರ್ ಟ್ರೈನಿಂಗ್ ಸೆಂಟರ್ ನ ಪೋಷಕರ ಸಭೆ ನರ್ಸಿಂಗ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೊಡ್ಡಮಳ್ತೆ ಹೊನ್ನಮ್ಮ ತಾಯಿ ದೇವಾಲಯ ಸಮಿತಿ ಅಧ್ಯಕ್ಷ ಡಿ.ಎ.ಉದಯ ಉದ್ಘಾಟಿಸಿ ಮಾತನಾಡಿ, ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ರೈತಾಪಿ ಜನರು ಹೆಚ್ಚಾಗಿದ್ದಾರೆ. ನಗರ ಪ್ರದೇಶದ ಪ್ರತಿಷ್ಠಿತ ಕಾಲೇಜಿನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಕಷ್ಟಸಾಧ್ಯ. ತಾಲ್ಲೂಕಿನ ಮಟ್ಟಿಗೆ ವಿದ್ಯಾ ನರ್ಸಿಂಗ್ ಕಾಲೇಜು ಒಂದೇ ಇರುವುದು. ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ, ಹೆಚ್ಚಿನ ಅಂಕಗಳಿಸಿ, ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಕಲಿಕೆಯಿಂದ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಿಕ್ಕಿದ ಸಮಯವನ್ನು ವ್ಯರ್ಥ ಮಾಡದೆ ಕಲಿಯುವುದಕ್ಕೆ ಮೀಸಲಿಡಬೇಕು ಎಂದು ಕಿವಿಮಾತು ಹೇಳಿದರು. ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳಾ ಸುಬ್ರಮಣಿ, ಇನ್ಸಿಟ್ಯೂಟ್‍ನ ವ್ಯವಸ್ಥಾಪಕರಾದ ಕೆ.ಈ. ಸುಲೈಮಾನ್, ಪ್ರಾಂಶುಪಾಲರಾದ ಅಲೀಮ ಸುಲೈಮಾನ್ ಇದ್ದರು. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ನ.ಲ.ವಿಜಯ, ಪ್ರಾಧ್ಯಾಪಕರಾದ ಮಂಜುಳಾ ಸಂತೋಷ್ ಅವರನ್ನು ಸನ್ಮಾನಿಸಲಾಯಿತು.









