Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚೇರಂಬಾಣೆ, ಕಾರುಗುಂದ ಗೌಡ ಸಮಾಜದಲ್ಲಿ ವಿಶ್ವ ಮಹಿಳಾ ದಿನಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೇರಂಬಾಣೆ, ಕಾರುಗುಂದ ಗೌಡ ಸಮಾಜದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಮಾರ್ಚ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಮಾ.10 NEWS DESK : ಚೇರಂಬಾಣೆ, ಕಾರುಗುಂದ ಗೌಡ ಸಮಾಜದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ, ಮಹಿಳಾ ದಿನಾಚರಣೆಯನ್ನು ಇದೇ ಮೊದಲ ಬಾರಿಗೆ ಸಮಾಜದ ವತಿಯಿಂದ ಆಯೋಜಿಸಿದ್ದು, ಸಮಾಜದ ಸರ್ವತೋಮುಖ ಬೆಳವಣಿಗೆಗೆ ಮಹಿಳೆಯರು ನೀಡುತ್ತಿರುವ ಸಹಕಾರವನ್ನು ಸ್ಮರಿಸಿಕೊಂಡರು. ಚೇರಂಬಾಣೆ ಗೌಡ ಸಮಾಜ ಲೋಕಾರ್ಪಣೆಗೊಂಡು ಎರಡು ವರ್ಷ ಕಳೆದಿದ್ದರೂ ಇದರಲ್ಲಿ ಯಾವುದೇ ಉಪಸಮಿತಿಗಳು ಇರುವುದಿಲ್ಲ ಇನ್ನು ಮುಂದೆ ಮಹಿಳಾ ಒಕ್ಕೂಟ ಹಾಗೂ ಯುವ ಒಕ್ಕೂಟ ರಚನೆಯಾದಲ್ಲಿ ಸಮಾಜಕ್ಕೆ ಇನ್ನಷ್ಟು ಬಲ ಸಿಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.  ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಮಹಿಳೆಯರ ಸಾಧನೆಯನ್ನು ಗುರುತಿಸುವ ದಿನ ವಿಶ್ವ ಮಹಿಳಾ ದಿನ ತೊಟ್ಟಿಲ ತೂಗುವ ಕೈ ದೇಶವನ್ನಾಳುವುದು ಎನ್ನುವ ಮಾತಿಗೆ ಉದಾಹರಣೆಯಂತೆ ಇಂದು ದೇಶದ ಅತ್ಯುನ್ನತ ಪದವಿಯಲ್ಲಿ ಮಹಿಳೆಗೆ ಸ್ಥಾನಮಾನ ದೊರೆತಿರುವುದು ಸಾಕ್ಷಿಯಾಗಿದೆ. ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಚಾಪು ಮೂಡಿಸಿ ಪುರುಷ ಪ್ರಧಾನ ಸಮಾಜದಲ್ಲಿ ಪ್ರತಿ ಪುರುಷನ ಹಿಂದೆ ನೆರಳಾಗಿ ಮಹಿಳೆ ಪ್ರತಿಯೊಂದು ಹಂತದಲ್ಲೂ ತನ್ನ ನಿಲುವನ್ನು ತೋರಿಸುತ್ತಿದ್ದಾಳೆ. ಹಾಗಾಗಿ ಸನ್ಮಾನ ಪ್ರಶಸ್ತಿ ಪುರಸ್ಕಾರಗಳು ಹೆಚ್ಚಿನ ಪಾಲು ಮಹಿಳೆಯದ್ದೇ ಆಗುತ್ತಿವೆ. ಸ್ತ್ರೀ ಯನ್ನು ಕವಿ ನದಿ, ಪರಿಸರ, ಹೊನ್ನು, ಮಣ್ಣಿಗೆ ಹೋಲಿಸಿದ್ದಾರೆ. ಆದ್ದರಿಂದ ಹೆಣ್ಣಿಲ್ಲದೆ ವಿಶ್ವ ನಶ್ವರ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯದರ್ಶಿ ಬೆಳ್ಯನ ಚಂದ್ರಪ್ರಕಾಶ್ ಮಾತನಾಡಿ, ಮೂರು ವರ್ಷಗಳಿಂದ ಈ ಭಾಗದಲ್ಲಿ ಮಹಿಳಾ ಒಕ್ಕೂಟ ರಚನೆ ಯಾಗಬೇಕೆಂದು ಆಲೋಚಿಸಿದ್ದು, ಇಂದು ಸದವಕಾಶ ಒದಗಿ ಬಂದಿದೆ. ಮಹಿಳಾ ಒಕ್ಕೂಟ ರಚನೆಯಾದಲ್ಲಿ ಸಮಾಜದ ಬಲ ಹೆಚ್ಚುತ್ತದೆ ಹಾಗೂ ಸಂಘಟನೆಯು ಉತ್ತಮವಾಗುತ್ತದೆ ಎಂದು ಕಿವಿಮಾತು ಹೇಳಿದರು ಸಮಾಜದ ಉಪಾಧ್ಯಕ್ಷ ಕೇಕಡ ದಿನೇಶ್ ಮಾತನಾಡಿ, ಮಹಿಳಾ ದಿನಾಚರಣೆಯ ಶುಭ ಸಂದರ್ಭದಲ್ಲಿ ಸಮಾಜದ ಉಪಸಮಿತಿಯಂತೆ ಮಹಿಳಾ ಒಕ್ಕೂಟ ರಚನೆಯಾಗಿರುವುದು ಅಭಿವೃದ್ಧಿಯ ಸಂಕೇತ ಎಂದು ನೂತನ ಸಮಿತಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೌಡ ಸಮಾಜದ ನಿರ್ದೇಶಕರಾದ ನೆಯ್ಯಣಿ ಹೇಮಲತಾ ತಾರೆಂದ್ರ,  ಕೊಡಗನ ತೀರ್ಥ ಪ್ರಸಾದ್, ಎಡಿಕೇರಿ ಪ್ರವೀಣ್, ಹಿರಿಯರಾದ ಬೈಮನ ವಿಜಯಲಕ್ಷ್ಮಿ ಸೇರಿದಂತೆ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಮಾಜದ ಕಾರ್ಯದರ್ಶಿ ಚಂದ್ರಪ್ರಕಾಶ್ ಸ್ವಾಗತಿಸಿ ನೂತನ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ ಸರ್ವರನ್ನು ವಂದಿಸಿದರು.  ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ವರದಿ  : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Related Posts

ಭಾಗಮಂಡಲ : ಅ.26 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ

ಅಕ್ಟೋಬರ್ 23, 2026

ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆ

ಅಕ್ಟೋಬರ್ 23, 2026

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026

ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆ

ಅಕ್ಟೋಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.23 : ಕೊಡಗು ಜಿಲ್ಲೆಯ ಅಹಿಂದ ಸಮುದಾಯದ ಪ್ರಮುಖರು ಹಾಗೂ ಪ್ರಗತಿಪರರು ಸಭೆ ಸೇರಿ ಅಹಿಂದ…

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ ನಡೆಯಲಿ: ರಾಜೇಶ್; ಪಾಲಿಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ; 100ಕ್ಕೂ ಅಧಿಕ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಭಾಗಿ

ಅಕ್ಟೋಬರ್ 23, 2026

ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅಧಿಕಾರ ಸ್ವೀಕಾರ

ಅಕ್ಟೋಬರ್ 23, 2026

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.