
ಮಡಿಕೇರಿ ಮಾ.10 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಾಗೂ ಸುಲೋಚನಾ ಡಾ. ಎಂ.ಜಿ.ನಾಗರಾಜ್ ದಂಪತಿ ದತ್ತಿ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಸಾಹಿತ್ಯ, ಕಲೆ, ಜಾನಪದ, ಪರಿಸರ ಮತ್ತು ಪುರಾತತ್ವ ಕುರಿತ ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾ.11 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಮಡಿಕೇರಿಯ ಎಫ್.ಎಂ.ಸಿ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ವಿಭಾಗದ ಮಾಜಿ ಮುಖ್ಯಸ್ಥ ಡಾ.ಕೋಡಿರ ಲೋಕೇಶ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿರಾಜಪೇಟೆಯ ಸಂತ ಅನಮ್ಮ ಪದವಿ ಕಾಲೇಜಿನ ಉಪನ್ಯಾಸಕರಾದ ಪ್ರತಿಮಾ ರೈ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ, ಖ್ಯಾತ ಸಂಶೋಧಕರು ಹಾಗೂ ದತ್ತಿದಾನಿ ಡಾ. ಎಂ.ಜಿ.ನಾಗರಾಜ್, ಮಡಿಕೇರಿ ಎಫ್.ಎಂ.ಸಿ ಕಾಲೇಜು ಪ್ರಾಂಶುಪಾಲ ಡಾ.ಮೇಜರ್ ಬಿ.ರಾಘವ, ಎಫ್.ಎಂ.ಸಿ ಕಾಲೇಜು ಹಿಂದಿ ವಿಭಾಗ ಮುಖ್ಯಸ್ಥ ಡಾ.ಶ್ರೀಧರ್ ಹೆಗಡೆ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕೊಡಗಿನ ಜನಪದ ಕಲೆ ದೇವರ ಕಾಡುಗಳು ಮತ್ತು ಪುರಾತತ್ವ ಸಂಸ್ಕೃತಿ ಕುರಿತು ವಿಚಾರಗೋಷ್ಠಿ ಏರ್ಪಡಿಸಲಾಗಿದ್ದು, ಅಧ್ಯಕ್ಷತೆಯನ್ನು ಕೊಡಗು ವಿಶ್ವವಿದ್ಯಾಲಯದ ಕನ್ನಡ ಅದ್ಯಾಪಕರಾದ ಡಾ. ಜ಼ಮೀರ್ ಅಹಮದ್ ವಹಿಸಲಿದ್ದಾರೆ. ಕೊಡಗಿನ ಜಾನಪದ ಕಲೆ ಕುರಿತು ಸಾಹಿತಿ, ಪತ್ರಕರ್ತರು ನಿವೃತ್ತ ಪ್ರಾಂಶುಪಾಲರಾದ ಡಾ. ಜೆ ಸೋಮಣ್ಣ ಮಾತನಾಡಲಿದ್ದಾರೆ. ಕೊಡಗಿನ ದೇವರ ಕಾಡುಗಳ ಕುರಿತು ಅರಣ್ಯ ಕಾಲೇಜಿನ ಮಾಜಿ ಮುಖ್ಯಸ್ಥರಾದ ಡಾಕ್ಟರ್ ಸಿ ಜಿ ಕುಶಾಲಪ್ಪ ಮಾತನಾಡಲಿದ್ದಾರೆ. ಕೊಡಗಿನ ಪುರಾತತ್ವ ಸಂಸ್ಕೃತಿ ಕುರಿತು ಪುರಾತತ್ವ ಇಲಾಖೆಯ ಸಹ ನಿರ್ದೇಶಕರಾದ ಶ್ರೀಮತಿ ರೇಖಾ ರವರು ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲೆಯ ಆಯ್ದ ಕವಿಗಳ ಕವಿಗೋಷ್ಠಿ ಯನ್ನು ಏರ್ಪಡಿಸಲಾಗಿದ್ದು, ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಜಿಲ್ಲೆಯ ಹಿರಿಯ ಸಾಹಿತಿಗಳಾದ ಶ್ರೀ ಬಿ.ಎ.ಶಂಷೂದ್ದೀನ್ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ನೆರವೇರಿಸಲಿದ್ದಾರೆ. ಗೋಷ್ಠಿಯ ಆಶಯ ನುಡಿಯನ್ನು ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಯನಾ ಕಷ್ಯಪ್ ನಡೆಸಿಕೊಂಡಲಿದ್ದಾರೆ. ಕವಿಗೋಷ್ಠಿಯಲ್ಲಿ ಲೀಲಾವತಿ ತೋಡಿಕಾನ, ಶ್ವೇತಾ ರವೀಂದ್ರ, ಡಾ. ಕಾವೇರಿ ಪ್ರಕಾಶ್, ಪುಷ್ಪಲತಾ ಶಿವಪ್ಪ,, ವಿಮಲಾ ದಶರಥ್, ರೇವತಿ ರಮೇಶ್, ಕೆ.ಜಿ.ಅರ್ಪಿತಾ, ಗಿರೀಶ್ ಕಿಗ್ಗಾಲು, ಟಾಮಿ ಥೋಮಸ್ ನಾ ಕನ್ನಡಿಗ, ವಿ.ಎಸ್ ವೈಲೇಶ್, ರಂಜಿತ್ ಕವಲಪಾರ ಹಾಗೂ ಜಗದೀಶ್ ಜೋಡಬೀಟಿ ಭಾಗವಹಿಸಲಿದ್ದಾರೆ. ಅಪರಾಹ್ನ 3 ಗಂಟೆಗೆ ಸಮರೊಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತ ಶಯನ ವಹಿಸಲಿದ್ದಾರೆ. ಸಮಾರೋಪ ಭಾಷಣವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್ ನೆರವೇರಿಸಲಿದ್ದಾರೆ. ಮಡಿಕೇರಿಯ ಪೊಲೀಸ್ ವೃತ್ತ ನಿರೀಕ್ಷಕರಾದ ಪಿ.ಕೆ.ರಾಜು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರಶಂಸನಾ ಪತ್ರ ವಿತರಣೆ ಮಾಡಲಿದ್ದಾರೆ. ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










