
ಮಡಿಕೇರಿ ಮಾ.11 NEWS DESK : ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ಮಾ.12 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಚಾ.ವಿ.ಸ.ನಿ.ನಿ.,ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಗೋಣಿಕೊಪ್ಪಲು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಾ.12 ರಂದು ಮಧ್ಯಾಹ್ನ 2.30 ಗಂಟೆಯಿಂದ 3.30 ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಚಾ.ವಿ.ಸ.ನಿ.ನಿ., ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆ ಮತ್ತು ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.









