Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಗ್ಗಳದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಸಮಾರೋಪ : ವಿದ್ಯಾರ್ಥಿಗಳು ತಮ್ಮ ಭವಿಷ್ಯ ತಾವೇ ರೂಪಿಸಿಕೊಳ್ಳಬೇಕು : ಪೂಜಾ ಸಜೇಶ್* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೆಗ್ಗಳದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಸಮಾರೋಪ : ವಿದ್ಯಾರ್ಥಿಗಳು ತಮ್ಮ ಭವಿಷ್ಯ ತಾವೇ ರೂಪಿಸಿಕೊಳ್ಳಬೇಕು : ಪೂಜಾ ಸಜೇಶ್* 

ಮಾರ್ಚ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮಾ.11 NEWS DESK : ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು ಎಂದು ಸಮಾಜ ಸೇವಕಿ ಹಾಗೂ ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಮುಖ್ಯಸ್ಥೆ ಪೂಜಾ ಸಜೇಶ್ ಸಲಹೆ ನೀಡಿದರು. ಹೆಗ್ಗಳದಲ್ಲಿ ಏಳು ದಿನಗಳ ಕಾಲ ನಡೆದ ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳು ಆದರ್ಶ ಪುರುಷರತತ್ವ ಸಿದ್ಧಾಂತಗಳನ್ನು ಅನುಸರಿಸಬೇಕು. ನಮ್ಮ ಭವಿಷ್ಯ ದ ಅಭಿವೃದ್ಧಿ ನಮ್ಮಿಂದಲೇ ಆಗಿದೆ. ಪರಸ್ಪರ ಸ್ನೇಹ, ಸಹಕಾರವಿದ್ದಾಗ ಮಾತ್ರ ಸಮಾಜ ಸೇವೆಗೆ ಅರ್ಥ ಬರುತ್ತದೆ. ಸಮಾಜದ ಸೇವೆಯು ಪುಣ್ಯ ಕೆಲಸ ಮಾಡಿದಂತೆ ಎಂದ ಅವರು, ಗುರು ಹಿರಿಯರನ್ನು ಗೌರವಿಸಿ ಎಂದು ಕರೆ ಕೊಟ್ಟರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು,  ಗ್ರಾಮದ ಸರ್ವ ಜನರ ಸಹಕಾರದಿಂದ ಶಿಬಿರವು ಯಶಸ್ವಿಯಾಗಿ ನಡೆದಿದೆ. ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತದನ್ನು ಜೀವನದಲ್ಲಿ ಅಳವಡಿಸುವುದರ ಮೂಲಕ ಶಿಸ್ತು ಬದ್ದ ಜೀವನವನ್ನು ನಡೆಸಿ ಎಂದು ಕರೆ ನೀಡಿದರು. ಸ್ಥಳೀಯರು ಹಾಗೂ ಭಾರತೀಯ ಭೂ ಸೇನೆಯ ನಿವೃತ ಕ್ಯಾಪ್ಟನ್ ಬಿ.ವಿ.ಭವಾನಿಶಂಕರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ದೃಢ ನಿರ್ಧಾರ ಕೈಗೊಳ್ಳಲು ಇಂತಹ ಶಿಬಿರಗಳು ಪ್ರಮುಖವಾಗಿದೆ. ವಿದ್ಯಾರ್ಥಿಗಳು ಶಿಸ್ತು ಹಾಗೂ ಪ್ರಾಮಾಣಿಕತೆ ಕಲಿಯಲು ಎನ್ ಎಸ್ ಎಸ್ ಉತ್ತಮ ವೇದಿಕಯಾಗಿದೆ ಎಂದರು. ಇಲ್ಲಿ ಕಲಿತದನ್ನು ಶ್ರದ್ಧೆಯಿಂದ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹೇಳಿದರು.  ಗೋಣಿಕೊಪ್ಪಲು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಪಟ್ಟಡ ಪೂವಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜದ ಸೇವೆಯನ್ನು ಮಾಡಲು ಎನ್ ಎಸ್ ಎಸ್ ಉತ್ತಮ ಅವಕಾಶವನ್ನು ನೀಡುತ್ತದೆ. ಉತ್ತಮ ಆರೋಗ್ಯ, ತ್ಯಾಗದ ಮನೋಭಾವನೆ, ಮಾಡುವ ಕೆಲಸದಲ್ಲಿ ಗೌರವವಿದ್ದಲ್ಲಿ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ. ವಿದ್ಯಾರ್ಥಿ ದಿಸೆಯಿಂದಲೇ ಉತ್ತಮ ಸಂವಹನ ಕೌಶಲ್ಯ ಹಾಗೂ ವೃತ್ತಿ ಕೌಶಲ್ಯ ಗಳನ್ನು ಅಳವಡಿಸಿಕೊಳ್ಳಿ ಎಂದು ಕರೆ ನೀಡಿದರು. ಬೆಟೋಳಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬಿ.ಮಣಿ ಶಿಬಿರದಲ್ಲಿ ವಿದ್ಯಾರ್ಥಿಗಳು ಮಾಡಿದ ಶ್ರಮದಾನ, ಸ್ವಚ್ಛತಾ ಅಭಿಯಾನ, ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಹೆಗ್ಗಳ ಸ. ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕಿ ಹೇಮಲತಾ ಮಾತನಾಡಿ, ನಮ್ಮ ಶಾಲೆಯಲ್ಲಿ ಎನ್ ಎಸ್ ಎಸ್ ಶಿಬಿರ ನಡೆದಿರುವುದು ಸಂತಸ ತಂದಿದೆ. ಸ್ವಯಂ ಸೇವಾ ವಿದ್ಯಾರ್ಥಿಗಳ ಸಮಯಪಾಲನೆ, ಶಿಸ್ತು, ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ ಸಂಸ್ಥೆಯ ವತಿಯಿಂದ ಪ್ರತಿವರ್ಷವೂ ಎನ್ ಎಸ್ ಎಸ್ ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು ಈ ವರ್ಷವೂ ಸಹ ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಶಿಬಿರವು ಯಶಸ್ವಿಯಾಗಿ ನಡೆದಿದೆ. ಇದರಲ್ಲಿ ನಮ್ಮ ವಿದ್ಯಾರ್ಥಿಗಳ ಶ್ರಮ ಅಡಗಿದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ರಾಜೇಶ್, ಉಪನ್ಯಾಸಕಿ ವಿಲೀನ, ಬೆಟೋಳಿ ಗ್ರಾಮ ಪಂಚಾಯತ್ ಸದಸ್ಯರು, ಎಸ್ ಡಿ ಎಂ ಸಿ ಸದಸ್ಯರು, ಎಲ್ಲಾ ಸ್ವಯಂ ಸೇವಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿ ಗುಂಪುಗಳಿಗೆ ಅತಿಥಿಗಳು ಬಹುಮಾನವನ್ನು ನೀಡಿದರು. ನಿವೃತ್ತ ಕ್ಯಾಪ್ಟನ್ ಭವಾನಿಶಂಕರ್  ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಸ್ವಾಮಿ ಜಗದಾತ್ಮಾನಂದಜೀ ಅವರ “ಬದುಕಲು ಕಲಿಯಿರಿ” ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ಎನ್ ಎಸ್ ಎಸ್ ಘಟಕದ ಹಾಗೂ ತಂಡಗಳ ನಾಯಕರು ಶಿಬಿರದ ಅನುಭವವನ್ನು ವೇದಿಕೆಯಲ್ಲಿ ಹಂಚಿಕೊಂಡರು. ಈ ಸಂದರ್ಭ ನಿವೃತ ಕ್ಯಾಪ್ಟನ್ ಬಿ. ವಿ. ಭವಾನಿ ಶಂಕರ್, ಪೂಜಾ ಸಜೇಶ್, ಹೇಮಲತ ಹಾಗೂ ಬಿ.ಆರ್.ರಾಜೇಶ್  ಅವರನ್ನು ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಎನ್ ಎಸ್ ಎಸ್ ಅಧಿಕಾರಿ ಬಿ. ಎನ್. ಶಾಂತಿಭೂಷಣ್ ಪ್ರಾಸ್ತಾವಿಕ ನುಡಿ ಹಾಗೂ ಸ್ವಾಗತಿಸಿ, ವಿದ್ಯಾರ್ಥಿನಿ ನಿಶಿ ನಿರೂಪಿಸಿ, ವಿದ್ಯಾರ್ಥಿನಿ ಪ್ರಕೃತಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.