Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 ಪಂದ್ಯಾವಳಿ ಏ.1 ರಿಂದ ಆರಂಭ : ಆಟಗಾರರ ಆಯ್ಕೆ ಪ್ರಕ್ರಿಯೆ ಪೂರ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 ಪಂದ್ಯಾವಳಿ ಏ.1 ರಿಂದ ಆರಂಭ : ಆಟಗಾರರ ಆಯ್ಕೆ ಪ್ರಕ್ರಿಯೆ ಪೂರ್ಣ*

ಮಾರ್ಚ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.11 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 ಪಂದ್ಯಾವಳಿ ಏ.1 ರಿಂದ ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಟಿ-20 ಮಾದರಿಯಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಸೀಸನ್ 1 ರ ಪ್ರಾಂಚೈಸಿಗಳು ಮುಂದುವರೆಯಲಿದ್ದು, ಇವರೊಂದಿಗೆ ಮತ್ತಷ್ಟು ಪ್ರಾಂಚೈಸಿಗಳು ಪಾಲ್ಗೊಳ್ಳಲಿದ್ದಾರೆ. ಕ್ಯಾಶ್ ಬಿಡ್ಡಿಂಗ್ ಮೂಲಕ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಇತ್ತೀಚೆಗೆ ಮೈಸೂರಿನ “ದಿ ರೂಸ್ಟ್” ಹೊಟೇಲ್ ಸಭಾಂಗಣದಲ್ಲಿ ನಡೆಯಿತು. 10 ಪ್ರಾಂಚೈಸಿಗಳು 175 ಆಟಗಾರರ ಆಯ್ಕೆಯಲ್ಲಿ ತೊಡಗಿಸಿಕೊಂಡರು. ಈ ಬಾರಿಯ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯಲ್ಲಿ ರಣಜಿ ಆಟಗಾರರು ಹಾಗೂ ಓಮನ್ ದೇಶಕ್ಕೆ ಆಟವಾಡಿದ ಆಟಗಾರರು ಕೂಡ ಪಾಲ್ಗೊಳ್ಳುತ್ತಿರುವುದು ವಿಶೇಷ. ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಅಧ್ಯಕ್ಷ ಪೊರುಕೊಂಡ ಸುನಿಲ್, ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ಏ.1 ರಿಂದ 15 ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ನೇರ ಪ್ರಸಾರ ಕೂಡ ಇರುತ್ತದೆ ಎಂದರು.   ಕಳೆದ ವರ್ಷ ಮಡಿಕೇರಿಯಲ್ಲಿ ನಡೆಸಿದ ಸಿಸನ್ 1ರ ಸಫಲತೆಯನ್ನು ಪರಿಗಣಿಸಿ ಟಾಟಾ ಕಾಫಿ ಸಂಸ್ಥೆ ಸೀಸನ್ 2 ಪಂದ್ಯಾವಳಿಯನ್ನು ನಡೆಸಲು ಮೈದಾನವನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಸಿಸನ್ 1ರ ಆಟಗಾರರೊಬ್ಬರಿಗೆ ಪ್ರತಿಷ್ಠಿತ ಸಂಸ್ಥೆಯೊಂದು ಉದ್ಯೋಗ ನೀಡಿದೆ. ಕೊಡಗಿನ ಕ್ರೀಡಾ ಪ್ರತಿಭೆಗಳು ಲೆದರ್ ಬಾಲ್ ಕ್ರಿಕೆಟ್ ನಲ್ಲಿ ತೊಡಗಿಸಿಕೊಂಡರೆ ಉತ್ತಮ ಭವಿಷ್ಯವಿದೆ. ಈ ಕಾರಣಕ್ಕಾಗಿಯೇ ಕೂರ್ಗ್ ಕ್ರಿಕೆಟ್ ಫೌಂಡೇಶನ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಉತ್ತೇಜನ ನೀಡುತ್ತಿದೆ. ಕಳೆದ ಬಾರಿ 160 ಆಟಗಾರರು ಪಾಲ್ಗೊಂಡಿದ್ದು, ಈ ಬಾರಿ 175ಕ್ಕೂ ಅಧಿಕ ಕ್ರೀಡಾಪಟುಗಳು ಆಡಲಿದ್ದಾರೆ ಎಂದು ತಿಳಿಸಿದರು.  ಸೀಸನ್-2ರ ವಿಜೇತರಿಗೆ ಪ್ರಥಮ ಬಹುಮಾನ 2 ಲಕ್ಷ, ದ್ವಿತೀಯ 1 ಲಕ್ಷ, ತೃತೀಯ 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುವುದು. ಪ್ರತಿ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಗೆ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಅಂತಿಮ ಪಂದ್ಯಾವಳಿಯಲ್ಲಿ 19 ತರಹದ ಟ್ರೋಫಿಗಳನ್ನು ನಗದು ಬಹುಮಾನದೊಂದಿಗೆ ವಿತರಿಸಲಾಗುವುದು. ಹಲವಾರು ಕ್ಲಬ್ ಗಳೊಂದಿಗೆ ಸಂಪರ್ಕದಲ್ಲಿದ್ದು, ಸೀಸನ್ 1 ರಲ್ಲಿ ನಾಲ್ವರು ಆಟಗಾರರನ್ನು ಕ್ಲಬ್ ಗಳಿಗೆ ಪರಿಚಯಿಸಲಾಗಿದೆ. ಸೀಸನ್ 2ರಲ್ಲಿ ಕೂಡ ರಾಜ್ಯ ಮತ್ತು ಹೊರ ರಾಜ್ಯದ ಕ್ಲಬ್ ಗಳಿಗೆ ಆಟಗಾರರನ್ನು ಪರಿಚಯಿಸಲಾಗುವುದು ಎಂದು ಪೊರುಕೊಂಡ ಸುನಿಲ್ ಮಾಹಿತಿ ನೀಡಿದರು. ಫೌಂಡೇಶನ್ ನ ಉಪಾಧ್ಯಕ್ಷ ಪಾಲಚಂಡ ಜಗನ್ ಉತ್ತಪ್ಪ ಮಾತನಾಡಿ, ಇಂದು ಲೆದರ್ ಬಾಲ್ ಕ್ರಿಕೆಟ್ ಗಿಂತ ಟೆನ್ನಿಸ್ ಬಾಲ್ ಕ್ರಿಕೆಟ್ ಹೆಚ್ಚಾಗಿ ನಡೆಯುತ್ತಿದೆ. ಪರಿಣಾಮ ಲೆದರ್ ಬಾಲ್ ಆಟಗಾರರು ವಂಚಿತರಾಗುತ್ತಿರುವುದಲ್ಲದೆ, ಇತರ ಕ್ರೀಡಾ ಪ್ರತಿಭೆಗಳು ಟೆನ್ನಿಸ್ ಬಾಲ್ ಪಂದ್ಯಾವಳಿಗೆ ಸೀಮಿತವಾಗುತ್ತಿದ್ದಾರೆ. ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಈ ಪಂದ್ಯಾವಳಿ ನಡೆಸುತ್ತಿದ್ದು, ಕೊಡಗಿನ ಕ್ರೀಡಾಪಟುಗಳಿಗೆ ಇದು ವರದಾನವಾಗಿದೆ ಎಂದು ಅಭಿಪ್ರಾಯಪಟ್ಟರು. ಪಂದ್ಯಾವಳಿಯ ಸಂಚಾಲಕ ಚಂಡೀರ ರಚನ್ ಚಿಣ್ಣಪ್ಪ, ವ್ಯವಸ್ಥಾಪಕ ಚೆರುಮಂದಂಡ ಸೋಮಣ್ಣ, ನಿರ್ದೇಶಕರಾದ ಮಡ್ಲಂಡ ದರ್ಶನ್ ಪೆಮ್ಮಯ್ಯ, ಕೀತಿಯಂಡ ಗಣಪತಿ, ಅಣ್ಣಳಮಾಡ ರಾಯ್ ಚಿಣ್ಣಪ್ಪ, ಕುಲ್ಲೇಟಿರ ಶಾಂತ ಕಾಳಪ್ಪ, ಬಲ್ಲಂಡ ರೇಣ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.