Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*
  • *ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೊಬೈಲ್ ಚಟಕ್ಕೆ ಬಲಿಯಾಗಿ ಎಷ್ಟೋ ಹೆಣ್ಣು ಮಕ್ಕಳು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೊಬೈಲ್ ಚಟಕ್ಕೆ ಬಲಿಯಾಗಿ ಎಷ್ಟೋ ಹೆಣ್ಣು ಮಕ್ಕಳು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ*

ಮಾರ್ಚ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.11 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದೊಂದಿಗೆ 2024-25ನೇ ಸಾಲಿನ “ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ನಿಯಮ-2006ರ ಅನುಷ್ಟಾನದಲ್ಲಿ ಭಗಿದಾರ ಇಲಾಖೆಗಳ ಪಾತ್ರ ಕುರಿತು ಎರಡು ದಿನಗಳ ಓರಿಯಂಟೇಷನ್ ತರಬೇತಿ ಕಾರ್ಯಗಾರ”ವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಇವರು ಉದ್ಘಾಟಿಸಿ ಮಾತನಾಡಿ ಎಲ್ಲಾ ಹೆಣ್ಣು ಮಕ್ಕಳು ಪೂಜಿಸಲ್ಪಡುವವರಾಗಿದ್ದು, ಇವರಲ್ಲಿ ಅಷ್ಟದೇವತೆಗಳು ನೆಲೆಸುತ್ತಾರೆ. ಪ್ರತಿ ಮನೆಯ ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು, ಸಮಾಜದಲ್ಲಿ ಮಹಿಳೆಯರಿಗೆ ಇರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿ ಮನೆಯಲ್ಲೂ ಹೆಣ್ಣು ಮಕ್ಕಳನ್ನು ಗೌರವಿಸಬೇಕು ಎಂದು ಹೇಳಿದರು. ಸ್ತ್ರೀಶಕ್ತಿ ಒಕ್ಕೂಟದ ರಾಜ್ಯಧ್ಯಕ್ಷರಾದ ರೆಹನಾ ಸುಲ್ತಾನ ಅವರು ಮಾತನಾಡಿ ಮಹಿಳೆಯರು ಮನೆಯಿಂದ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಮಹಿಳೆಯರು ಸಮಾಜ ಸೇವೆಗೆ ಹೆಚ್ಚು ಒತ್ತು ನೀಡಿ ಸಮಾಜ ಸೇವೆಯಲ್ಲಿ ತೊಡಗೋಣ ಎಂದು ಹೇಳಿದರು. ಪೊನ್ನಂಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾದ ಪೂಣಚ್ಚ ಅವರು ಮಾತನಾಡಿ ತಾಲ್ಲೂಕು ಮಟ್ಟದಲ್ಲಿ ಶಿಶು ಅಭಿವೃದ್ದಿ ಯೋಜನಾ ಇಲಾಖೆಯಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ನೊಂದ ಮಹಿಳೆಯರಿಗೆ ಆಪ್ತ ಸಮಾಲೋಚನೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನಃಶಾಸ್ತçಜ್ಞಯಾದ ಡಾ.ಯಾಮಿನಿ ಮಾತನಾಡಿ ಮಹಿಳೆಯರು ಇಂದು ಸಮಾಜದಲ್ಲಿ ಉತ್ತಮ ಸ್ಥಾನಮಾನದಲ್ಲಿದ್ದು ಹಾಗೂ ಆರ್ಥಿಕವಾಗಿ ಸಬಲರಾಗಿದ್ದು ಅಲ್ಲದೆ ಸಹನಾಮಯಿಯಾಗಿರುವುದು ನಾವು ಕಾಣಬಹುದು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ ಮಾತನಾಡಿ ಮಹಿಳೆಯರಿಗೆ ಕಾನೂನಾತ್ಮಕ ಅಂಶಗಳು, ಆರೋಗ್ಯ ಸೇವೆಗಳು, ಕೌಟುಂಬಿಕ ದೌರ್ಜನ್ಯ ಈ ಎಲ್ಲಾ ಮಾಹಿತಿಯನ್ನು ತಿಳಿಸಲು ಕಾರ್ಯಗಾರ ಏರ್ಪಡಿಸಲಾಗಿದ್ದು, ಎಲ್ಲಾ ತರಬೇತುದಾರರು ಈ ಸೌಲಭ್ಯವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ವಕೀಲರು ಮೀನಕುಮಾರಿಯವರು ಮಾತನಾಡಿ ಮಕ್ಕಳ ಮೇಲೆ ನಡೆಸುವ ಲೈಂಗಿಕ ದೌರ್ಜನ್ಯ, ಕೌಟುಂಬಿಕ ದೌರ್ಜನ್ಯ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ದೌರ್ಜನ್ಯ ತಡೆ ಕಾಯ್ದೆ 2013ರ ಕುರಿತು ಮಾಹಿತಿ ನೀಡಿದರು. ನಂತರ ಮೊತ್ತೊರ್ವ ಸಂಪನ್ಮೂಲ ವ್ಯಕ್ತಿಯಾದ ಪೋಲಿಸ್ ಇಲಾಖೆಯ ಸುಮತಿಯವರು ಮಾತನಾಡಿ ಮಹಿಳೆಯರಿಗೆ ಯಾವುದೇ ರೀತಿಯ ಸಮಸ್ಯೆಗಳಾದ್ದಲ್ಲಿ 112 ಗೆ ಕರೆ ಮಾಡಬೇಕು. ಮಹಿಳೆಯರು, ಹೆಣ್ಣು ಮಕ್ಕಳು ಜಾಗ್ರತೆಯಿಂದ ಇರಬೇಕು. ಮೊಬೈಲ್ ಚಟಕ್ಕೆ ಬಲಿಯಾಗಿ ಎಷ್ಟೋ ಹೆಣ್ಣು ಮಕ್ಕಳು ತಮ್ಮ ಸಂಸಾರೀಕ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ಕಂಡುಬರುತ್ತಿದೆ. ಆದರೆ ಸರ್ಕಾರ ಮಹಿಳೆಯರ ರಕ್ಷಣೆ ಮತ್ತು ಸುಭದ್ರತೆಗೆ ಹಲವಾರು ಯೋಜನೆಗಳನ್ನು ಮಹಿಳೆಯರಿಗಾಗಿ ಜಾರಿಗೊಳಿಸಿದ್ದು ಅವುಗಳಲ್ಲಿ ಮಹಿಳಾ ಸಾಂತ್ವನಾ, ಮಹಿಳಾ ಸಹಾಯವಾಣಿ, ಮಹಿಳಾ ಸಬಲೀಕರಣ ಘಟಕ, ಸಖಿ ಸೆಂಟರ್ ಇವುಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಯಿತು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನೆರವೇರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಸವಿತ ಸ್ವಾಗತಿಸಿದರು, ಉಪ ನಿರ್ದೇಶಕರ ಕಚೇರಿ ಹಿರಿಯ ಮೇಲ್ವಿಚಾರಕಿಯಾದ ಜಯಂತಿ ವಂದಿಸಿದರು. ಸಖಿ ಒನ್ ಸ್ಟಾಪ್ ಸೆಂಟರ್ ಕುಮುದ ಪ್ರಾರ್ಥಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*

ಸೆಪ್ಟೆಂಬರ್ 30, 2026

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಪೊಲೀಸ್ ನ್ಯೂಸ್

ಮಂಗಳೂರು, NEWS DESK ಸೆ.30 : ಮಂಗಳೂರಿನ ಹೊರವಲಯದ ಕಳವಾರ್ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ…

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.