Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಒಂದೇ ಬಾರಿಗೆ ಮೂರು ‘ವಿಶ್ವ ದಾಖಲೆ’ ಬರೆದ ಮದೆನಾಡಿನ ಸಿಂಚನ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಒಂದೇ ಬಾರಿಗೆ ಮೂರು ‘ವಿಶ್ವ ದಾಖಲೆ’ ಬರೆದ ಮದೆನಾಡಿನ ಸಿಂಚನ

ಮಾರ್ಚ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಮಾ.12 : ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ಶ್ರೀ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ಗೆ ಒಳಪಟ್ಟ ಬಿಜಿಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಬಿ.ಕೆ.ಸಿಂಚನ, ಯೋಗಾಸನದ ಮೂರು ಪ್ರಕಾರಗಳಲ್ಲಿ ವಿಶಿಷ್ಟ ಸಾಧನೆಯೊಂದಿಗೆ ಗೋಲ್ಡ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ತನ್ನ ಹೆಸರನ್ನು ದಾಖಲಿಸಿ ಅಪೂರ್ವ ಸಾಧನೆಗೈದಿದ್ದಾಳೆ. ಮಧ್ಯಪ್ರದೇಶದ ಇಂದೋರ್‌ನ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಏಷಿಯಾ ವಿಭಾಗದ ಮುಖ್ಯಸ್ಥರು ಹಾಗೂ ತೀರ್ಪುಗಾರರಾಗಿ ಪಾಲ್ಗೊಂಡಿದ್ದ ಡಾ.ಮನೀಶ್ ಬಿಷ್ಣೋಯ್ ಅವರ ಸಮ್ಮುಖದಲ್ಲಿ ಶಾಲೆಯ ಆವರಣದಲ್ಲಿ ಸಿಂಚನ ಯೋಗಾಸನಗಳನ್ನು ಪ್ರದರ್ಶಿಸಿ ವಿಶ್ವ ದಾಖಲೆ ಬರೆದರು. ಈ ಸಂದರ್ಭ ಡಾ.ಮನೀಶ್ ಬಿಷ್ಣೋಯ್ ಅವರು, ‘ಡಿಂಪಾಸನ’ದಲ್ಲಿ 14 ಮೀಟರ್‌ನ್ನು ಕ್ರಮಿಸುವ ಮೂಲಕ ಸಿಂಚನ ತನ್ನ ಹೆಸರಿನಲ್ಲೇ ಇದ್ದ 10 ಮೀಟರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ಮಾಡಿದ್ದಾಳೆ. ‘ಉರಭ್ರಾಸನ’ದಲ್ಲಿ 1.04 ನಿಮಿಷ ಏಕಸ್ಥಿತಿಯಲ್ಲಿ ಇರುವ ಮೂಲಕ ಹಾಗೂ ‘ಮೃಗ ಮುಖಾಸನ’ದಲ್ಲಿ 1.45 ನಿಮಿಷ ಏಕಸ್ಥಿತಿಯಲ್ಲಿ ಇರುವ ಮೂಲಕ ಈಕೆ ವಿಶ್ವದಾಖಲೆಯ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿರುವುದಾಗಿ ಘೋಷಿಸಿದರು. ::: ಒಂದೇ ಬಾರಿಗೆ ಮೂರು ‘ವಿಶ್ವ ದಾಖಲೆ’ ::: ಯುಎಸ್‌ನ್ನು ಮುಖ್ಯ ನೆಲೆಯನ್ನಾಗಿ ಹೊಂದಿರುವ ಗೋಲ್ಡ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ, ವಿಶ್ವದ ಅಪರೂಪದ ವಿದ್ಯಮಾನಗಳನನ್ನು ದಾಖಲಿಸಿಕೊಂಡು ಬರುತ್ತಿದೆ. 11 ವರ್ಷದ ಬಾಲಕಿ ಒಂದೇ ಬಾರಿಗೆ ಮೂರು ವಿಶ್ವ ದಾಖಲೆ ಮಾಡಿರುವುದು  ಅಪರೂಪದಲ್ಲಿ ಅಪರೂಪದ ವಿದ್ಯಮಾನವೆಂದು  ಡಾ.ಮನೀಶ್ ಬಿಷ್ಣೋಯ್ ಅಭಿಪ್ರಾಯಪಟ್ಟರು.
::: ಪ್ರಮಾಣ ಪತ್ರ ಪ್ರದಾನ ::: ಯೋಗಾಸನದಲ್ಲಿ ಮೂರು ವಿಶ್ವ ದಾಖಲೆ ಮಾಡಿದ್ದಕ್ಕಾಗಿ ಡಾ.ಮನೀಶ್ ಬಿಷ್ಣೋಯ್ ಅವರು ಬಿ.ಕೆ.ಸಿಂಚನಗಳಿಗೆ, ಅತಿಥಿ ಗಣ್ಯರ ಸಮ್ಮುಖದಲ್ಲಿ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು. ::: ನಮ್ಮ ಹೆಮ್ಮೆ ::: ಸಿಂಚನಳ ವಿಶ್ವ ದಾಖಲೆಯನ್ನು ಸಾಕ್ಷೀಕರಿಸಿದ ಶ್ರೀ ಆದಿ ಚುಂಚನಗಿರಿ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ಮಾತನಾಡಿ, ನಮ್ಮ ಶಾಲೆಯ ಬಾಲಕಿ ವಿಶ್ವ ದಾಖಲೆ ಮಾಡಿರುವುದು ಹೆಮ್ಮೆಯೇ ಆಗಿದೆ. ತಂದೆ ತಾಯಿ ಹಾಗೂ ಶಿಕ್ಷಕರ ಮಾರ್ಗದರ್ಶನದೊಂದಿಗೆ ಈಕೆ ಮತ್ತಷ್ಟು ಸಾಧನೆಗಳನ್ನು ಮಾಡುವಂತಾಗಲಿ ಎಂದು ಹಾರೈಸಿದರು.ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಇದೊಂದು ಅಪರೂಪದ ಕ್ಷಣ. ಸಿಂಚನಳ ವಿಶ್ವದಾಖಲೆ ಈ ನಾಡಿಗೆ, ರಾಜ್ಯಕ್ಕೆ ಹೆಮ್ಮೆ ತರುವ ವಿಚಾರವಾಗಿದೆ. ಯೋಗಾಸನವನ್ನು ಇಡೀ ವಿಶ್ವಕ್ಕೆ ‘ಯೋಗ ದಿನ’ದ ಆರಂಭದ ಮೂಲಕ ಪ್ರಧಾನಿ ಮೋದಿ ಅವರು ಪರಿಚಯಿಸಿದ್ದು, ಇದನ್ನು ಟೀಕಿಸುತ್ತಿದ್ದವರು ಇಂದು ಯೋಗಾಸನಕ್ಕೆ ಮಾರುಹೋಗಿದ್ದಾರೆ. ಯೋಗಾಸನದ ಮೂಲಕ ಆರೋಗ್ಯದೊಂದಿಗೆ ಏಕಾಗ್ರತೆಯನ್ನು ಕಂಡುಕೊಳ್ಳಲು ಸಾಧ್ಯವಿದ್ದು, ಪ್ರತಿಯೊಬ್ಬರು ಇದರತ್ತ ಆಸಕ್ತರಾಗುವಂತೆ ಕರೆ ನೀಡಿದರು. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಬಾಲಕಿಯ ಸಾಧನೆಗೆ ಶುಭ ಹಾರೈಸಿದರು. ಸಿಂಚನಳ ತಾಯಿ ರೇಣುಕ, ತಂದೆ ಬಿ.ಸಿ.ಕೀರ್ತಿಕುಮಾರ್ ಹಾಗೂ ವೇದಿಕೆಯಲ್ಲಿ ಶಾಲೆಯ ವಿಶ್ರಾಂತ ಪ್ರಾಂಶುಪಾಲ ಬಿ.ಆರ್.ಜೋಯಪ್ಪ, ಡಿಸಿಪಿಐ ರಂಗಧಾಮಪ್ಪ, ನಿವೃತ್ತ ಉಪನ್ಯಾಸಕ ಶಿವರಾಂ, ಆಯುಷ್ ಇಲಾಖೆಯ ಡಾ.ಅರುಣ್ ಉಪಸ್ಥಿತರಿದ್ದರು. ಇದೇ ಸಂದರ್ಭ ಅತಿಥಿ ಗಣ್ಯರನ್ನು ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ಸನ್ಮಾನಿಸಿ ಗೌರವಿಸಿದರು. ಯೋಗ ಗುರು ಕೆ.ಕೆ.ಮಹೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಿಂಚನಳ ವಿಶ್ವ ದಾಖಲೆಯ ಯೋಗ ಪ್ರದರ್ಶನವನ್ನು ಗ್ರಾಮಸ್ಥರು, ಶಾಲಾ ಶಿಕ್ಷಕ ವೃಂದ ಹಾಗೂ ಮಕ್ಕಳು ಕುತೂಹಲದಿಂದ ವೀಕ್ಷಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.16: ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 18ರ ಭಾನುವಾರದಂದು ಘೋಷಿಸಲಾಗಿದ್ದ ಸ್ಥಳೀಯ…

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.