Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ವೀರಶೈವ ಪರಂಪರೆಗೆ ಶ್ರೀರೇಣುಕಾಚಾರ್ಯರ ಪಾತ್ರ ಮಹತ್ತರ : ಆರ್.ಐಶ್ವರ್ಯ*
ಇತ್ತೀಚಿನ ಸುದ್ದಿಗಳು

*ಕೊಡಗು : ವೀರಶೈವ ಪರಂಪರೆಗೆ ಶ್ರೀರೇಣುಕಾಚಾರ್ಯರ ಪಾತ್ರ ಮಹತ್ತರ : ಆರ್.ಐಶ್ವರ್ಯ*

March 13, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.13 NEWS DESK : ವೀರಶೈವ ಪರಂಪರೆಯನ್ನು ಪಸರಿಸುವಲ್ಲಿ ಶ್ರೀ ರೇಣುಕಾಚಾರ್ಯರ ಪಾತ್ರ ಮಹತ್ತರವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಂದು ಶ್ರೀ ನಗರದ ಗಾಂಧಿ ಭವನದಲ್ಲಿ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರದ ಸನಾತನ ಸಂಸ್ಕೃತಿಯಲ್ಲಿ ದ್ವೈತ, ಅದ್ವೈತ, ವಿಶಿಷ್ಟ ಅದ್ವೈತ ಎಂಬ ಸಿದ್ಧಾಂತಗಳು ಪ್ರಚಲಿತದಲ್ಲಿದ್ದು, ಇತಿಹಾಸದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದೆ. ಜಾತಿ, ಮತ, ಭಾಷೆ, ಪ್ರದೇಶ ಎಂಬ ಸಂಕುಚಿತ ಸಂಕೋಲೆಗಳನ್ನು ಮೀರಿ ಮಾನವ ಧರ್ಮದ ಉನ್ನತಿಗೆ ರೇಣುಕಾಚಾರ್ಯರು ಶ್ರಮಿಸಿದ್ದಾರೆ ಎಂದು ಪ್ರತಿಪಾದಿಸಿದರು. ಯಾವುದೇ ಜಾತಿ ಜನಾಂಗದಲ್ಲಿ ಹುಟ್ಟಿದ ವ್ಯಕ್ತಿ ತನ್ನ ಸತ್ಯ, ಶುದ್ಧ ಆಚರಣೆಯಿಂದ ಸದ್ಗುರುವಿಗೆ ಶರಣಾತಿ ಗುರು ನೀಡಿದ ಬೋಧಾಮೃತವನ್ನು ಅಳವಡಿಸಿಕೊಂಡು ಜೀವನದಲ್ಲಿ ಉನ್ನತ್ತಕ್ಕೆ ಏರಲು ಸಾಧ್ಯ ಎಂದು ರೇಣುಕಾಚಾರ್ಯರು ತಿಳಿಸಿದ್ದಾರೆ ಎಂದರು. ಆಧುನಿಕತೆ, ವಿಜ್ಞಾನ, ಪರಿವರ್ತನೆ ಯುಗದಲ್ಲಿ ಸಾಕಷ್ಟು ಬದಲಾವಣೆ ಮತ್ತು ಸುಧಾರಣೆಗಳಾಗುತ್ತಿದ್ದು, ಮನುಷ್ಯನ ಆತ್ಮ ಜ್ಞಾನವನ್ನು ಹೆಚ್ಚಿಸುವುದಕ್ಕೆ ಹಲವು ಮಾರ್ಗದರ್ಶನ ಇವೆ. ಅಂತಹ ದಾರ್ಶನಿಕರ ಜಗತ್ತಿನಲ್ಲಿ ಬಹು ಪ್ರಾಚೀನ ಕಾಲದಿಂದ ಜೀವಾತ್ಮ, ಪರಮಾತ್ಮ, ಜಗತ್ತು. ಬಂಧ ಮತ್ತು ಮೋಕ್ಷ ಎಂಬ ಪಂಚ ವಿಷಯಗಳ ಕುರಿತು ಚಿಂತನೆಗಳು ನಡೆಯುತ್ತವೆ ಎಂದರು.
ಶ್ರೀ ಜಗದ್ಗರು ರೇಣುಕಾಚಾರ್ಯರು ಹತ್ತಿರದ ತೆಲಂಗಾಣ ರಾಜ್ಯದ ನಲಗೊಂಡ ಜಿಲ್ಲೆಯ ಕೊಲ್ಲಿ ಪಾಕೀಯ ಸ್ವಯಂಭೂ ಸೋಮೇಶ್ವರ ಲಿಂಗದಿಂದ ಪಾಲ್ಗುಣ ಶುದ್ಧ ತ್ರಯೋದಶಿಯಂದು ಅವತರಿಸಿದ್ದಾರೆ. ಆ ದಿನವನ್ನೇ ಪ್ರತೀ ವರ್ಷ ಎಲ್ಲೆಡೆ ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವವಾಗಿ ಆಚರಿಸಲಾಗುತ್ತದೆ ಎಂದರು. ಯುಗ ಯುಗಗಳ ನಂಟು ಬೆಸೆದುಕೊಂಡಿರುವ ಪಂಚ ಆಚಾರ್ಯರ ಪರಂಪರೆಯಲ್ಲಿ ಜಗದ್ಗುರು ರೇಣುಕಾಚಾರ್ಯರು ಪ್ರಾಚೀನ ಕಾಲದಲ್ಲಿ ಅಸ್ಪøಶ್ಯತೆಯನ್ನು ತೊಡೆದು ಸರ್ವಜನಾಂಗಕ್ಕೂ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಕ್ರಾಂತಿ ಪುರುಷ ಎಂದು ಆರ್.ಐಶ್ವರ್ಯ ಹೇಳಿದರು.
ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ಮಾತನಾಡಿ ಮಲಯಾಚಲದಲ್ಲಿದ್ದ ಅಗಸ್ತ್ಯಮುನಿಗೆ ಶಿವಾದ್ವೈತ ಸಿದ್ಧಾಂತ ಉಪದೇಶಿಸಿ, ಭದ್ರಾನದಿ ತೀರದಲ್ಲಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ ಸಂಸ್ಥಾಪಿಸಿದ ಜಗದ್ಗುರು ರೇಣುಕಾಚಾರ್ಯರು ಭೂಗರ್ಭ ಸಂಜಾತ ಶ್ರೀರುದ್ರಮುನಿದೇವರಿಗೆ ಉತ್ತರಾಧಿಕಾರ ದಯಪಾಲಿಸಿದ ನಂತರ ಈವರೆಗೆ ಬಾಳೆಹೊನ್ನೂರಿನ ಶ್ರೀರಂಭಾಪುರಿ ಪೀಠದಲ್ಲಿ 120 ಜಗದ್ಗುರುಗಳು ವೀರ ಸಂಹಾಸನವನ್ನು ಆರೋಹಣ ಮಾಡಿದ್ದಾರೆ ಎಂದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯಿಂದ ಸ್ಥಳನಾಮ ಅಧ್ಯಯನ ಮತ್ತು ಮಾಹಿತಿ ಸಂಗ್ರಹಕ್ಕೆ ಚಾಲನೆ*
Next Article *ಯುವ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.