Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಶಾಸಕದ್ವಯರ ಪ್ರಯತ್ನದಿಂದ ಕೊಡಗಿಗೆ ಹೆಚ್ಚು ಅನುದಾನ : ಜೆ.ಎಲ್.ಜನಾರ್ಧನ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶಾಸಕದ್ವಯರ ಪ್ರಯತ್ನದಿಂದ ಕೊಡಗಿಗೆ ಹೆಚ್ಚು ಅನುದಾನ : ಜೆ.ಎಲ್.ಜನಾರ್ಧನ್

ಮಾರ್ಚ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.13 NEWS DESK : ಶಾಸಕದ್ವಯರ ನಿರಂತರ ಪ್ರಯತ್ನದಿಂದ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆತ್ತಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಬಗರ್ ಹುಕುಂ ತಾಲ್ಲೂಕು ಸಮಿತಿ ಸದಸ್ಯ ಜೆ.ಎಲ್.ಜನಾರ್ಧನ್ ತಿಳಿಸಿದ್ದಾರೆ.  ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ- ಸೋಮವಾರಪೇಟೆ ಜನತೆಯ ದಶಕಗಳ ಕನಸು ನನಸಾಗಿದೆ. ಮಡಿಕೇರಿ- ದೋಣಿಗಲ್ ನಡುವೆ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ 900 ಕೋಟಿ ರೂ. ಯೋಜನೆಯನ್ನು ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದೆ. ಇದಕ್ಕೆ ಕಾರಣಕರ್ತರಾದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಭಿನಂದನಾರ್ಹರು. ಜನರ ಹಲವು ವರ್ಷಗಳ ಬೇಡಿಕೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿದೆ. ಮಡಿಕೇರಿ – ದೋಣಿಗಲ್ -ಮಾದಾಪುರ – ಸೋಮವಾರಪೇಟೆ – ಶನಿವಾರಸಂತೆ – ಕೊಡ್ಲಿಪೇಟೆಯ 95 ಕಿ.ಮೀ ಅಂತರದ ಮಾರ್ಗ ಸರ್ವಋತು ರಸ್ತೆಯಾಗಿ ಅಭಿವೃದ್ಧಿಯಾಗಲಿದೆ. ಇದು ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.  ಕುಶಾಲನಗರ ತಾಲ್ಲೂಕು ಆಸ್ಪತ್ರೆಯ ನವೀಕರಣ, ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ 12 ಬುಡಕಟ್ಟು ಸಮುದಾಯಗಳ 47,859 ಕುಟುಂಬಗಳಿಗೆ 120 ಕೋಟಿ ರೂ. ವೆಚ್ಚದಲ್ಲಿ ಪೌಷ್ಟಿಕ ಆಹಾರದ ಕಿಟ್ ಗಳ ವಿತರಣೆ, ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಿಂದ 7ನೇ ತರಗತಿಯನ್ನು ಪ್ರಾರಂಭಿಸಲಾಗುವುದು. ಕೊಡಗು ಜಿಲ್ಲೆಯ ಐದು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು. ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಸೋಲಿಗ, ಹಲಸರು, ಜೇನು ಕುರುಬ, ಗೌಡಲು, ಸಿದ್ಧಿ, ಕುಡಿಯ, ಮಲೆಕುಡಿಯ, ಕಾಡುಕುರುಬ, ಇರುಳಿಗ, ಕೊರಗ, ಬೆಟ್ಟಕುರುಬ, ಯರವ, ಪಣಿಯನ್ ಇತ್ಯಾದಿ ಪರಿಶಿಷ್ಟ ಪಂಗಡದ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸರ್ಕಾರ ಘೋಷಿಸಿದೆ. ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ 13 ಬುಡಕಟ್ಟು ಜನಾಂಗಗಳಾದ ಜೇನು ಕುರುಬ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡಲು, ಸಿದ್ಧಿ, ಬೆಟ್ಟಕುರುಬ, ಕಾಡುಕುರುಬ, ಕುಡಿಯ ಮತ್ತು ಮಲೆಕುಡಿಯ ಈ ಜನಾಂಗಗಳಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಿದೆ. ಭಾರೀ ಮಳೆಯಿಂದಾಗಿ ಹಾನಿ ಒಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ ಸರ್ಕಾರ 3 ಕೋಟಿ ರೂ. ಒದಗಿಸಿದೆ. ಮಾನವ-ಆನೆ ಸಂಘರ್ಷವನ್ನು ತಡೆಗಟ್ಟಲು 2015 ರಿಂದ ಇಲ್ಲಿಯವರೆಗೆ 392 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಗಳನ್ನು ನಿರ್ಮಿಸಲಾಗಿದೆ. ಇನ್ನೂ 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳಿಗಾಗಿ 2025-26ನೇ ಸಾಲಿನಲ್ಲಿ 60 ಕೋಟಿ ರೂ. ಮೀಸಲಿರಿಸಲಾಗಿದೆ. ಇದು ವರದಾನವಾಗಿರುವ ದಾಖಲೆಯ ಬಜೆಟ್ ಆಗಿದ್ದು, ಇದೆಲ್ಲವೂ ಕೊಡಗು ಜಿಲ್ಲೆಯ ಶಾಸಕದ್ವಯರ ನಿರಂತರ ಪ್ರಯತ್ನದ ಫಲವಾಗಿದೆ. ಜನಪರ ಕಾಳಜಿಯ ಶಾಸಕರುಗಳಿಂದ ಜಿಲ್ಲೆಯ ಅಭಿವೃದ್ಧಿ ವೇಗವನ್ನು ಪಡೆದುಕೊಳ್ಳುತ್ತಿದ್ದು, ರಾಜ್ಯ ಸರ್ಕಾರ ಕೂಡ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಜೆ.ಎಲ್.ಜನಾರ್ಧನ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಅ.22 NEWS DESK : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 33ನೇ ವರ್ಷದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.