Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೊದ್ದೂರಿನಲ್ಲಿ ಪ್ರತಿಭಟನಾ ಸಭೆ : ಅಕ್ರಮ ಶೆಡ್ ಗಳನ್ನು ತೆರವುಗೊಳಿಸಲು ರೈತ ಸಂಘ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೊದ್ದೂರಿನಲ್ಲಿ ಪ್ರತಿಭಟನಾ ಸಭೆ : ಅಕ್ರಮ ಶೆಡ್ ಗಳನ್ನು ತೆರವುಗೊಳಿಸಲು ರೈತ ಸಂಘ ಆಗ್ರಹ*

ಮಾರ್ಚ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.15 : ನಿವೇಶನದ ಬೇಡಿಕೆ ಮುಂದಿಟ್ಟುಕೊAಡು ಕೆಲವರು ಹೋರಾಟದ ಹೆಸರಿನಲ್ಲಿ ಕೃಷಿಕರ ಭೂಮಿಗೆ ಅಕ್ರಮ ಪ್ರವೇಶ ಮಾಡಿ ಶೆಡ್‌ಗಳನ್ನು ನಿರ್ಮಿಸಿಕೊಂಡು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮತ್ತು ಅಕ್ರಮ ಶೆಡ್‌ಗಳನ್ನು ತಕ್ಷಣ ತೆರವುಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಸೋಮವಾರಪೇಟೆಯ ನಮ್ಮ ಭೂಮಿ ನಮ್ಮ ಹಕ್ಕು ರೈತ ಹೋರಾಟ ಸಮಿತಿ ಹಾಗೂ ಹೊದ್ದೂರು ರೈತ ಸಂಘಗಳು ಹೊದ್ದೂರಿನ ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಪ್ರತಿಭಟನಾ ಸಭೆ ನಡೆಸಿತು. ಸಭೆೆಯಲ್ಲಿ ಪಾಲ್ಗೊಂಡ ರೈತ ಸಂಘದ ಪ್ರಮುಖರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಹೊದ್ದೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಹೆಚ್.ಎ.ಹಂಸ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು. ಕೃಷಿಕರ ಜಮೀನಿನಲ್ಲಿ ನಿರ್ಮಿಸಲಾಗಿರುವ ಅಕ್ರಮ ಶೆಡ್‌ಗಳನ್ನು 15 ದಿನಗಳ ಒಳಗೆ ತೆರವುಗೊಳಿಸಬೇಕು, ರೈತರ ಮನೆ ಖಾತೆ ಬದಲಾವಣೆ, ಹೋಂ ಸ್ಟೇ ದೃಢೀಕರಣ ಪತ್ರ ಮತ್ತಿತರ ದಾಖಲೆಗಳ ವಿಲೇವಾರಿಯಲ್ಲಿ ವಿಳಂಬ ತೋರುತ್ತಿರುವ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯನ್ನು ವರ್ಗಾವಣೆಗೊಳಿಸಬೇಕು. ಪಂಚಾಯ್ತಿಯ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರ ವಿರುದ್ಧ ಅಕ್ರಮ ಶೆಡ್ ನಿರ್ಮಾಣ ಸೇರಿದಂತೆ ವಿವಿಧ ಆರೋಪಗಳು ಇರುವ ಹಿನ್ನೆಲೆಯಲ್ಲಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾ ಗೊಳಿಸಬೇಕು. ಪಂಚಾಯ್ತಿ ಅನುದಾನದಲ್ಲಿ ಕೃಷಿಕರಿಗೆ ಆಗುತ್ತಿರುವ ತಾರತಮ್ಯ ಸರಿಪಡಿಸಬೇಕು, ಹೊದ್ದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದನಕರುಗಳ ಸಂಖ್ಯೆಗೆ ಅನುಗುಣವಾಗಿ ಗೋಮಾಳ ಜಮೀನು ಮಂಜೂರು ಮಾಡಬೇಕು, ಕೃಷಿಕರ ಮನೆಗಳಿಗೆ ಮತ್ತು ಕೃಷಿ ಯಂತ್ರೋಪಕರಣ ಸಾಗಾಟಕ್ಕೆ ರಸ್ತೆ ನಿರ್ಮಿಸಬೇಕು, ಹೊದ್ದೂರು ಗ್ರಾಮದಲ್ಲಿ ಈಗಾಗಲೇ 9 ಕಾಲೋನಿಗಳಿದ್ದು, ಜನಸಂಖ್ಯೆ 2 ಸಾವಿರಕ್ಕೆ ಏರಿರುವುದರಿಂದ ಇನ್ನು ಮುಂದೆ ನಿವೇಶನ ರಹಿತರಿಗೆ ನಿವೇಶನ ಕಾಯ್ದಿರಿಸಬಾರದು ಎಂದು ಒತ್ತಾಯಿಸಲಾಗಿದೆ. ರೈತರ ಜಮೀನಿಗೆ ಅಕ್ರಮವಾಗಿ ಪ್ರವೇಶ ಮಾಡಿದವರನ್ನು 15 ದಿನಗಳ ಒಳಗೆ ತೆರವುಗೊಳಿಸದಿದ್ದಲ್ಲಿ ಪಿತ್ರಾರ್ಜಿತ ಆಸ್ತಿಗಳ ಮೂಲಕ ಹಾದು ಹೋಗುವ ರಸ್ತೆಗಳನ್ನು ಮುಟ್ಟುಗೋಲು ಹಾಕಿಕೊಂಡು ಕೃಷಿ ಚಟುವಟಿಕೆಗಳಿಗೆ ಬಳಸಲಾಗುವುದೆಂದು ಮನವಿ ಪತ್ರದಲ್ಲಿ ಎಚ್ಚರಿಸಲಾಗಿದೆ. ಹೊದ್ದೂರು ರೈತ ಸಂಘದ ಅಧ್ಯಕ್ಷ ಜಗತ್ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ, ಸೋಮವಾರಪೇಟೆ ರೈತ ಹೋರಾಟ ಸಮಿತಿಯ ಅಧ್ಯಕ್ಷ ಚಕ್ರವರ್ತಿ ಸುರೇಶ್, ಮಡಿಕೇರಿ ತಾ.ಪಂ ಮಾಜಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಮತ್ತಿತರ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ…

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.