Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಗೆ ಪದವಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಗೆ ಪದವಿ ಪ್ರದಾನ*

ಮಾರ್ಚ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ. 16 – ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಶಿಸ್ತು, ಜೀವನಮೌಲ್ಯಗಳನ್ನು ಸರಿಯಾದ ರೀತಿಯಲ್ಲಿ ಕಲಿಸಿಕೊಡಬೇಕು. ಸ್ವಚ್ಚಂದ ಜೀವನದ ಬಗೆಗಿನ ಎಚ್ಚರಿಕೆಯನ್ನೂ ಇಂದಿನ ಮಕ್ಕಳಿಗೆ ತಿಳಿಹೇಳುವುದು ಅಗತ್ಯ ಎಂದು ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಕಿವಿಮಾತು ಹೇಳಿದರು. ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಯುಕೆಜಿ ವಿದ್ಯಾಥಿ೯ಗಳಿಗೆ ಪದವಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹುಟ್ಟಿಂದನಿಂದಲೇ ಮಕ್ಕಳನ್ನು ಅತಿಯಾದ ಪ್ರೀತಿಯಿಂದ ಪೋಷಕರು ಸಲಹುತ್ತಾ ಮಕ್ಕಳು ಮಾಡಿದ್ದೆಲ್ಲವೂ ಸರಿ ಎಂದು ಭಾವಿಸುತ್ತಾರೆ. ಇದರಿಂದಾಗಿ ಸ್ವಚ್ಚಂದತೆಯನ್ನು ಹೆಚ್ಚಾಗಿಯೇ ಮಕ್ಕಳು ಬೆಳೆಸಿಕೊಂಡು ಸಮಾಜದಲ್ಲಿ ದಾರಿ ತಪ್ಪುವ ಸಾಧ್ಯತೆಯೂ ಹೆಚ್ಚಾಗಿದೆ. ಇಂಥ ಸಂದಭ೯ ಜೀವನಮೌಲ್ಯ, ಶಿಸ್ತನ್ನು ಕೂಡ ಸರಿಯಾದ ರೀತಿಯಲ್ಲಿ ಸರಿಯಾದ ವಯಸ್ಸಿನಲ್ಲಿಯೇ ಕಲಿಸುವ ಮೂಲಕ ತಮ್ಮ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಸಾಧ್ಯ ಎಂದು ಅನಂತಶಯನ ಹೇಳಿದರು. ತಮ್ಮ ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆ, ಶಿಕ್ಷಕ ವಗ೯ದ ಬಗ್ಗೆ ಪೋಷಕರು ನಂಬಿಕೆ ಹೊಂದಿರಬೇಕು. ಶಿಕ್ಷಣ ಸಂಸ್ಥೆಗಳೇ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಕೇಂದ್ರಗಳೆಂದು ಮರೆಯಬಾರದು ಎಂದು ಕಿವಿಮಾತು ಹೇಳಿದ ಅನಂತಶಯನ, ಕೊಡಗು ವಿದ್ಯಾಲಯವು ಆದ್ಯಾತ್ಮಿಕ ಸಾಧಕ ಸದ್ಗುರು ಜಾಕ್ ಸುಬ್ಬಯ್ಯ ಅವರಿಂದ ಸ್ಥಾಪಿಸಲ್ಪಟ್ಟ ಕಾರಣದಿಂದ ಇಂದಿಗೂ ಈ ಸಂಸ್ಥೆಯು ಸದಾ ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರಾಗಿದೆ ಎಂದು ಶ್ಲಾಘಿಸಿದರು. ಸಾಧಿಸುವ ಛಲವಿದ್ದಲ್ಲಿ ಯಾವುದೇ ವ್ಯಕ್ತಿಯೂ ಎಷ್ಟೇ ಎತ್ತರದ ಬೆಟ್ಟ, ಗುಡ್ಡಗಳನ್ನು ಸಲೀಸಾಗಿ ಏರಬಲ್ಲ. ಎಷ್ಟೇ ದೂರದವರೆಗೂ ಸಮುದ್ರದಲ್ಲಿ ಈಜಬಲ್ಲ,ಗಗನದಲ್ಲಿ ಹಾರಬಲ್ಲ ಸಾಮಥ್ಯ೯ ಹೊಂದಬಲ್ಲ ಎಂದು ಹೇಳಿದ ಅನಂತಶಯನ, ಛಲ ಹಾಗೂ ಕಠಿಣ ಪರಿಶ್ರಮ ಇಂಥ ಸಾಧನೆಗೆ ಅತ್ಯಗತ್ಯ ಎಂದು ಹೇಳಿದರು. ದೊಡ್ಡ ಮಟ್ಟದ ಸಾಧನೆಯ ಕನಸುಗಳನ್ನು ಕಾಣಿ ಎಂದು ಕರೆ ನೀಡಿದ ಅವರು, ಬೆಟ್ಟಗುಡ್ಡಗಳು ಅವುಗಳ ಎಚ್ಚರದಿಂದ ಮಾತ್ರವೇ ದೊಡ್ಡವು ಎನಿಸಿಕೊಂಡಿಲ್ಲ. ಬದಲಿಗೆ ಅವುಗಳು ಮಾನವನಿಗೆ ಒಡ್ಡುವ ಸವಾಲಿನಿಂದಾಗಿ ನಿಜವಾಗಿಯೂ ಅವುಗಳು ಹಿರಿಯದ್ದಾಗಿವೆ ಎಂದು ಹೇಳಿದರು. ಎಂದಿಗೂ ಪುಟ್ಟ ಮಕ್ಕಳು ಇತರರೊಂದಿಗೆ ಜಗಳವಾಡದೇ ಗೆಳೆತನ ಕಾಪಾಡಿಕೊಳ್ಳಿ , ಗೆಳೆತನವೇ ಜೀವನದ ಬಹುದೊಡ್ಡ ಸಂಪತ್ತಾಗಿದೆ ಎಂಬುದನ್ನು ಮರೆಯದಿರಿ ಎಂದೂ ಅನಂತಶಯನ ಪುಟಾಣಿಗಳಿಗೆ ಕಿವಿಮಾತು ಹೇಳಿದರು. ಕಾಯ೯ಕ್ರಮದಲ್ಲಿ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ, ವ್ಯವಸ್ಥಾಪಕರಾದ ರವಿ ಪಿ.  ವೇದಿಕೆಯಲ್ಲಿದ್ದರು. ವಿದ್ಯಾಥಿ೯ನಿ ಶಾವಿ೯ ಭರತ್ ಸ್ವಾಗತಿಸಿ, ಸ್ಟಿಫಾನಿಯಾ ಸ್ಟ್ಯಾನಿ, ಆಂಚಲ್ ಅಯ್ಯಪ್ಪ ಮತ್ತು ಶಾವಿ೯ಕ್ ಅನುಭವ ಹಂಚಿಕೊಂಡ ಕಾಯ೯ಕ್ರಮದಲ್ಲಿ ಶಿಕ್ಷಕಿ ವೀಣಾ ಎಂ.ಎಂ.ನಿರೂಪಿಸಿ, ಶಿಕ್ಷಕಿಯರಾದ ಟಿ.ಪಿ.ರಮ್ಯ ಹಾಗೂ ಬಿ.ಬಿ.ಭಾರತಿ ನಿವ೯ಹಿಸಿದರು. ಐಶಾನಿ ವಂದಿಸಿದರು. ಯುಕೆಜಿ ವಿದ್ಯಾಥಿ೯ಗಳಿಂದ ಅತ್ಯಾಕಷ೯ಕ ಸಾಂಸ್ಕೖತಿಕ ಕಾಯ೯ಕ್ರಮಗಳು ಮನಸೆಳೆದವು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.