Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿವಿಧತೆಯಲ್ಲಿ ಏಕತೆ ಘೋಷವಾಕ್ಯದೊಂದಿಗೆ ಶ್ರೀ ಕೋದಂಡ ರಾಮೋತ್ಸವ ಆಚರಣೆ : ಮಹಿಳಾ ಸಮಿತಿಯಿಂದ ಹಬ್ಬಕ್ಕೆ ಭರದ ಸಿದ್ಧತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿವಿಧತೆಯಲ್ಲಿ ಏಕತೆ ಘೋಷವಾಕ್ಯದೊಂದಿಗೆ ಶ್ರೀ ಕೋದಂಡ ರಾಮೋತ್ಸವ ಆಚರಣೆ : ಮಹಿಳಾ ಸಮಿತಿಯಿಂದ ಹಬ್ಬಕ್ಕೆ ಭರದ ಸಿದ್ಧತೆ*

ಮಾರ್ಚ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.19 : ಮಡಿಕೇರಿ ನಗರದ ಶ್ರೀ ಮಲ್ಲಿಕಾರ್ಜುನ ಬಡಾವಣೆಯಲ್ಲಿರುವ ಶ್ರೀ ಕೋದಂಡರಾಮ ದೇವಾಲಯದ ರಾಮೋತ್ಸವ ಸಮಿತಿಯ ವತಿಯಿಂದ ಈ ಬಾರಿ ವಿವಿಧತೆಯಲ್ಲಿ ಏಕತೆ ಎಂಬ ಘೋಷವಾಕ್ಯದೊಂದಿಗೆ 35ನೇ ವರ್ಷದ ರಾಮನವಮಿಯ ರಾಮೋತ್ಸವ ಹಾಗೂ ದೇವಾಲಯದ ದ್ವಿತೀಯ ವರ್ಷದ ಪ್ರತಿಷ್ಠಾಪನಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶ್ರೀ ಕೋದಂಡ ರಾಮೋತ್ಸವ ಮಹಿಳಾ ಸಮಿತಿ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಸಮಿತಿಯ ಅಧ್ಯಕ್ಷರಾದ ಭಾರತಿ ರಮೇಶ್, ಏ.5 ಮತ್ತು 6 ರಂದು ನಡೆಯುವ ರಾಮೋತ್ಸವ ಹಾಗೂ ಮಹಿಳಾ ಸಮಿತಿಯ ಪಾತ್ರದ ಕುರಿತು ಮಾಹಿತಿ ನೀಡಿದರು. ಎಲ್ಲಾ ದೇವಾಲಯಗಳ ಮತ್ತು ಸಂಘ ಸಂಸ್ಥೆಗಳ ಪ್ರಮುಖರು, ಕಾರ್ಯಕರ್ತರು, ಹಾಗೂ ಸುತ್ತಮುತ್ತಲಿನ ಎಲ್ಲಾ ಸಮುದಾಯಗಳ ಜನರು, ಭಕ್ತರನ್ನು ಒಗ್ಗೂಡಿಸಿಕೊಂಡು ರಾಮೋತ್ಸವವನ್ನು ಆಚರಿಸಲಾಗುತ್ತಿದ್ದು, ಉಪಸಮಿತಿಗಳನ್ನು ರಚಿಸಲಾಗಿದೆ. ಮಹಿಳಾ ಸಮಿತಿಯು ಬಹಳ ಮುಖ್ಯವಾದ ಜವಾಬ್ದಾರಿಯನ್ನು ನಿಭಾಯಿಸಲಿದೆ. ಮಹಿಳಾ ಸಮಿತಿಯಲ್ಲಿರುವವರು ವಿವಿಧ ದೇವಾಲಯ, ಸಂಘ ಸಂಸ್ಥೆಗಳಲ್ಲಿ ಸೇವೆಸಲ್ಲಿಸಿದವರಾಗಿದ್ದು, ರಾಮೋತ್ಸವದ ಮೂಲಕ ಶ್ರೀ ರಾಮನ ಸೇವೆ ಮಾಡಲು ಉತ್ತಮ ಅವಕಾಶ ದೊರೆತ್ತಿದೆ. ಮಹಿಳಾ ಸಮಿತಿಯು ಅನೇಕ ಉಪ ಸಮಿತಿಗಳನ್ನು ರಚಿಸಿಕೊಂಡಿದ್ದು, ಕಳಶ ಸಮಿತಿಯ ಅಧ್ಯಕ್ಷರಾಗಿ ಲಿಖಿತಾ ಸುರೇಂದ್ರ, ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪೂರ್ಣಿಮಾ ಜಗದೀಶ್, ಭಜನಾ ಸಮಿತಿಯ ಅಧ್ಯಕ್ಷರಾಗಿ ವಿಶಾಲಾಕ್ಷಿ ಸುಕುಮಾರ್, ಪ್ರಸಾದ ಸಮಿತಿಯ ಅಧ್ಯಕ್ಷರಾಗಿ ವಿದ್ಯಾ ವೆಂಕಟರಾಮನ್ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಏ.5 ಮತ್ತು 6 ರಂದು ಭಕ್ತಿಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಏ.5ರಂದು ಕೇಸರಿಮಯವಾದ ಅದ್ಭುತ ಮೆರವಣಿಗೆ ಸಾಗಲಿದೆ. ಮಹಿಳೆಯರು ಹಾಗೂ ಮಕ್ಕಳಿಗಾಗಿ ಕ್ರೀಡಾ ಸಮಿತಿ ರಚನೆಗೊಂಡಿದ್ದು, ಆಟೋಟಗಳ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿದೆ. ಎರಡು ದಿನಗಳ ರಾಮೋತ್ಸವದಲ್ಲಿ 10 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದು, ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಭಾರತಿ ರಮೇಶ್ ಮಾಹಿತಿ ನೀಡಿದರು. ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಜಯಂತಿ ಶೆಟ್ಟಿ ಅವರು ಮಾತನಾಡಿ ಏ.5 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಶ್ರೀ ಕೋದಂಡರಾಮ ದೇವಾಲಯದವರೆಗೆ ರಾಮದೇವರ ಮೆರವಣಿಗೆ ನಡೆಯಲಿದೆ. ಭಜನಾ ತಂಡ, ಚಂಡೆ ವಾದ್ಯ, ವಿವಿಧ ಕಲಾ ತಂಡಗಳು, ಕಳಶ ಹೊತ್ತ ಮಹಿಳೆಯರು ಹಾಗೂ ಭಕ್ತರು ವಾದ್ಯಗೋಷ್ಠಿಗಳೊಂದಿಗೆ ನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ತೆರಳಲಿದ್ದಾರೆ ಎಂದರು. ಮೆರವಣಿಗೆ ದೇವಾಲಯವನ್ನು ತಲುಪಿದ ನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದ್ದು, ಎಲ್ಲಾ ಸಮುದಾಯಗಳ ಸಾಂಪ್ರದಾಯಿಕ ಕಲೆಗಳು ಪ್ರದರ್ಶನಗೊಳ್ಳಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಏ.5 ಮತ್ತು 6 ರಂದು ಎರಡು ದಿನ ಸಂಜೆ ನಡೆಯಲಿದೆ. ಏ.6 ರಂದು ಬೆಳಿಗ್ಗೆ ಗಣಪತಿ ಹೋಮ, ಪ್ರತಿಷ್ಠಾಪನಾ ಉತ್ಸವ ಮತ್ತು ರಾಮೋತ್ಸವದ ಪ್ರಯುಕ್ತ ವಿಶೇಷ ಪೂಜೆ ಮತ್ತು ಮಹಾಪೂಜೆ ಜರುಗಲಿದೆ ಎಂದು ತಿಳಿಸಿದರು.
ಭಜನಾ ಸಮಿತಿಯ ಮಹಿಳಾ ಅಧ್ಯಕ್ಷರಾದ ವಿಶಾಲಾಕ್ಷಿ ಸುಕುಮಾರ್ ಮಾತನಾಡಿ ಶ್ರೀಕೋದಂಡ ರಾಮೋತ್ಸವಕ್ಕೆ 12 ಕ್ಕೂ ಹೆಚ್ಚು ಭಜನಾ ತಂಡಗಳು ವಿಶೇಷ ಮೆರುಗು ನೀಡಲಿದ್ದು, ಉತ್ಸವದಲ್ಲಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಉಪಾಧ್ಯಕ್ಷರಾದ ಸುಜಾತ ಜಗದೀಶ್ ಮಾತನಾಡಿ ಏ.5ರಂದು ಶ್ರೀರಾಮನ ಮೆರವಣಿಗೆ ಸಂದರ್ಭ ಕಳಶ ಹೊತ್ತ ಮಹಿಳೆಯರು ಕೇಸರಿ ವಸ್ತçಧಾರಿಗಳಾಗಿ ಸಾಗಲಿದ್ದಾರೆ ಎಂದರು.
ಮತ್ತೊಬ್ಬ ಉಪಾಧ್ಯಕ್ಷರಾದ ಸರಿತಾ ಅಯ್ಯಪ್ಪ ಮಾತನಾಡಿ ಎರಡು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಾ.25 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಆಸಕ್ತ ತಂಡಗಳು ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಮಹೇಶ್ (9663326204) ಅವರನ್ನು ಸಂಪರ್ಕಿಸುವ0ತೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮಹಿಳಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಿತಾ ಸುಧಾಕರ್ ಮಾತನಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.