Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಳ : ಗಂಭೀರವಾಗಿ ಪರಿಗಣಿಸಲು ಕಾಡ್ಯಮಾಡ ಗಿರೀಶ್ ಗಣಪತಿ ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಳ : ಗಂಭೀರವಾಗಿ ಪರಿಗಣಿಸಲು ಕಾಡ್ಯಮಾಡ ಗಿರೀಶ್ ಗಣಪತಿ ಒತ್ತಾಯ

ಮಾರ್ಚ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮಾ.20 NEWS DESK : ಅಸ್ಸಾಂ ವಲಸೆ ಕಾರ್ಮಿಕರಿಂದ ಕೊಡಗಿನ ವಾತಾವರಣದ ನೆಮ್ಮದಿಯಲ್ಲಿ ಕಲುಷಿತ ಕಾಣುತ್ತಿದೆ ಎಂದು ಪೊನ್ನಂಪೇಟೆ ತಾಲ್ಲೂಕು ಕೃಷಿ ಸಮಾಜದ ಗೌರವ ಕಾರ್ಯದರ್ಶಿ, ತಾಲ್ಲೂಕು ಬಗರ್‍ಹುಕಂ ಸಮಿತಿ ಮಾಜಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಲಸೆ ಕಾರ್ಮಿಕರು ಈ ನೆಲದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಲೆಕ್ಕವಿಲ್ಲದಷ್ಟು ಕಾರ್ಮಿಕರ ಆಗಮನವಾಗುತ್ತಿರುವ ಪರಿಣಾಮ ಹೆಚ್ಚು ಹೆಚ್ಚು ಸಮಸ್ಯೆಗಳು ಉದ್ಭವಿಸುತ್ತಿದೆ. ಕಾಫಿ ತೋಟ ಇನ್ನಿತರ ಕೆಲಸ ಕಾರ್ಯಗಳಿಗಾಗಿ ಕಾರ್ಮಿಕರಾಗಿ ಜಿಲ್ಲೆಗೆ ಆಗಮಿಸಿರುವ ವಲಸಿಗರು ಈ ಭಾಗದಲ್ಲಿ ಸ್ವಂತ ನೆಲೆ ಕಂಡುಕೊಳ್ಳಲು ಮುಂದಾಗುತ್ತಿದ್ದಾರೆ. ಕೆಲಸ ನಿರ್ವಹಿಸಲು ಬಂದವರು ಇತ್ತೀಚಿನ ಬೆಳವಣಿಗೆಯಲ್ಲಿ ಗೋಣಿಕೊಪ್ಪ ಸಂತೆಗಳಲ್ಲಿ ವ್ಯಾಪಾರಿಗಳಾಗಿ ಬದಲಾಗುತ್ತಿರುವುದು ಸಹ ನಾವು ಕಾಣಬಹುದಾಗಿದೆ. ಇದು ಮುಂದಿನ ದಿನಗಳಲ್ಲಿ ಆತಂಕಕಾರಿಯಾದ ಬೆಳವಣಿಗೆಯಾಗಿದೆ ಎಂದರು. ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ ಸಲ್ಲ. ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಬೇಕಾಗಿದೆ. ತೋಟದ ಮಾಲೀಕರು ತಮ್ಮ ತೋಟದಲ್ಲಿನ ಕಾರ್ಮಿಕರ ಬಗ್ಗೆ ಪೂರ್ಣ ಮಾಹಿತಿಯನ್ನು ಒದಗಿಸಿಕೊಡಬೇಕಾಗಿದೆ. ಇಲ್ಲವಾದಲ್ಲಿ ಉಂಟಾಗುವ ಅನಾಹುತ, ಆಘಾತಗಳಿಗೆ ಹೊಣೆಗಾರಾಗಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದು ಚಿಂತನೆ ವ್ಯಕ್ತಪಡಿಸಿದ್ದಾರೆ. ಕೊಡಗಿನಲ್ಲಿರುವ ಅಸ್ಸಂ ಕಾರ್ಮಿಕರು ಈಗಾಗಲೇ ಸಣ್ಣಪುಟ್ಟ ದಾಂದಲೆಗಳನ್ನು ನಡೆಸುತ್ತಿದ್ದು, ಕಾಫಿ, ಕಾಳಮೆಣಸುಗಳ ಕಳ್ಳತನಕ್ಕೆ ಮುಂದಾಗುತ್ತಿದ್ದಾರೆ. ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಸಂತೆಯ ದಿನಗಳಲ್ಲಿ ಇಲ್ಲಿನ ಸ್ಥಳೀಯರ ಮೇಲೆ ಹಲ್ಲೆಗೂ ಮುಂದಾಗುತ್ತಿರುವ ಘಟನೆಗಳು ನಡೆಯುತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದೆ ಇದ್ದರೆ ಮುಂದಿನ ಬೆಳವಣಿಗೆಯಲ್ಲಿ ಬಹುದೊಡ್ಡ ಅಪಾಯವನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು. ಅಸ್ಸಾಂ ಕಾರ್ಮಿಕರೆಂದು ಹೇಳಿಕೊಳ್ಳುವ ಮೂಲತಃ ಬಾಂಗ್ಲಾದೇಶದವರ ನುಸುಳುವಿಕೆಯು ಕೊಡಗಿನ ಕಾರ್ಮಿಕರ ವಲಸೆ ಪರಿಸ್ಥಿತಿಯಲ್ಲಿ ಗೋಚರಿಸುತ್ತಿದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಕೊಡಗಿಗೆ ಆಗಮಿಸುವ ವಲಸೆ ಕಾರ್ಮಿಕರ ಬಗ್ಗೆ ಜಿಲ್ಲಾಡಳಿತ, ಶಾಸಕರುಗಳು ಗಂಭೀರವಾಗಿ ಪರಿಗಣಿಸಿ ಗ್ರಾಮಮಟ್ಟದಲ್ಲಿ ಪೊಲೀಸ್ ಬೂತ್‍ಗಳನ್ನ ತೆರೆದು ಕಾರ್ಮಿಕರ ನೋಂದಾವಣೆಗೆ ಮುಂದಾಗಬೇಕು ಮತ್ತು ಅವರಿಗೆ ತಾತ್ಕಾಲಿಕ ಕಾರ್ಮಿಕರು ಎಂಬ ಗುರುತಿನ ಚೀಟಿಯನ್ನು ನೀಡಿ ವಲಸೆ ಬಂದ ಕಾರ್ಮಿಕರ ಅಂಕಿ ಅಂಶವನ್ನು ಪಡೆದುಕೊಳ್ಳಬೇಕು. ವಲಸೆ ಕಾರ್ಮಿಕರಿಂದ ಮಾಲೀಕರಿಗೆ ಎದುರಾಗಬಹುದಾದ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಬೇಕಾದ ಅಗತ್ಯತೆ ಇದೆ ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.22 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ ಬಿದ್ದಿದೆ. ದಶಮಂಟಪಗಳ ಶೋಭಾಯಾತ್ರೆಯಲ್ಲಿ ಶ್ರೀ…

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.