Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.24 ರಂದು ಮಾಜಿ ಸೈನಿಕರ ಬೃಹತ್ ಸಮಾವೇಶ : ಭೂಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಉಪಸ್ಥಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.24 ರಂದು ಮಾಜಿ ಸೈನಿಕರ ಬೃಹತ್ ಸಮಾವೇಶ : ಭೂಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಉಪಸ್ಥಿತಿ*

ಮಾರ್ಚ್ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.21 NEWS DESK : ದಕ್ಷಿಣ ವಲಯದ ಭೂಸೇನಾ ಮುಖ್ಯಸ್ಥರಾದ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಪಿವಿಎಸ್‍ಎಂ, ಎವಿಎಸ್‍ಎಂ ಅವರ ಉಪಸ್ಥಿತಿಯಲ್ಲಿ ನಿವೃತ್ತ ಸೈನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಬೃಹತ್ ಸಮಾವೇಶ ಮಾ.24 ರಂದು ನಗರದಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ನಿವೃತ್ತ ಮೇಜರ್ ಓ.ಎಸ್.ಚಿಂಗಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ನಗರದ ಕ್ರಿಸ್ಟಲ್ ಕೋರ್ಟ್ ಸಂಭಾಂಗಣದಲ್ಲಿ ಸಮಾವೇಶ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಇದರಲ್ಲಿ ಜಿಲ್ಲೆಯ ನಿವೃತ್ತ ಸೈನಿಕರು, ಅವರ ಅವಲಂಬಿತರು ಪಾಲ್ಗೊಳ್ಳಲಿದ್ದಾರೆ. ನೆರೆಯ ಕೇರಳ ವಿಭಾಗದ ಮಾಜಿ ಸೈನಿಕರು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ಹೇಳಿದರು. ಕಳೆದ ಸಾಲಿನಲ್ಲಿ ಗೋಣಿಕೊಪ್ಪಲಿನಲ್ಲಿ ಸಮಾವೇಶ ನಡೆದಿತ್ತು, ಈ ಬಾರಿ ಮಡಿಕೇರಿಯಲ್ಲಿ ನಡೆಯುತ್ತಿದೆ. ರಾಷ್ಟ್ರಕ್ಕೆ ಇಬ್ಬರು ಜನರಲ್‍ಗಳನ್ನು ಮತ್ತು ಅಸಂಖ್ಯ ವೀರಯೋಧರನ್ನು ನೀಡಿದ ಕೊಡಗಿನಲ್ಲಿ ಸೈನಿಕ ಪರಂಪರೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಭಾರತೀಯ ಸೈನ್ಯದ ದಕ್ಷಿಣ ಪ್ರಾಂತದ ಮುಖ್ಯಸ್ಥರು ಪ್ರತಿ ವರ್ಷ ಕೊಡಗಿನಲ್ಲಿ ಸಮಾವೇಶವನ್ನು ಆಯೋಜಿಸುತ್ತಿರುವುದಾಗಿ ತಿಳಿಸಿದರು. ಕೊಡಗಿನಲ್ಲಿ ನೆಲೆಸಿರುವ ಮಾಜಿ ಯೋಧರು, ವೀರನಾರಿಯರು,  ಮಾಸಿಕ ಪಿಂಚಣಿ, ಸೇವೆ ಸಲ್ಲಿಸಿದ ದಾಖಲೆಗಳಲ್ಲಿನ ಲೋಪ ದೋಷ, ಪಿಂಚಣಿ ಪಡೆಯುವಲ್ಲಿ ಹಲ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳಿಗೆ ಸಮಾವೇಶದ ಸಂದರ್ಭ ಸ್ಥಳದಲ್ಲೆ ಪರಿಹಾರ ದೊರಕುವ ವಿಶ್ವಾಸವಿದ್ದು, ಅದಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಸಮಾವೇಶದಲ್ಲಿ ಕಲ್ಪಿಸಲಾಗುತ್ತಿದೆಯೆಂದು ವಿವರಿಸಿದರು. ಸಮಾವೇಶ ನಡೆಯುವ ಕ್ರಿಸ್ಟಲ್ ಕೊರ್ಟ್ ಸಭಾಂಗಣದಲ್ಲಿ ಭಾರತೀಯ ಸೇನೆಯ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದವರಿಗೆ, ಅವರವರ ವಿಭಾಗದಲ್ಲಿನ ದಾಖಲೆಗಳನ್ನು ಸರಿಪಡಿಸಿಕೊಳ್ಳುವ ಸಲುವಾಗಿ, ಭಾರತೀಯ ಸೇನೆಯ 8 ವಿಭಾಗಗಳ ಅಧಿಕಾರಿಗಳು ಅಂದು ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 9 ಗಂಟೆಯಿಂದಲೆ ಮಾಜಿ ಸೈನಿಕರು ತಮ್ಮ ತಮ್ಮ ವಿಭಾಗಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸ್ಥಳದಲ್ಲೆ ಸರಿಪಡಿಸಿಕೊಳ್ಳಬಹುದಾಗಿದೆ. ಎಂದರು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರ ಮಾಸಿಕ ಪಿಂಚಣಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರದ ‘ಸಿಸ್ಟಂ ಆಫ್ ಪೆನ್ಶನ್ ಅಡ್ಮಿನಿಸ್ಟ್ರೇಷನ್ ರಕ್ಷಾ’ ಎನ್ನುವ ಯೋಜನೆಯಡಿ ತರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾವೇಶದಂದು ಸ್ಪರ್ಶ್ ಅಧಿಕಾರಿಗಳು ಮಾಜಿ ಸೈನಿಕರಿಗೆ ಲಭ್ಯರಿರುತ್ತಾರೆ. ಇವರ ಬಳಿ ತಮ್ಮ ಮಾಸಿಕ ಪಿಂಚಣಿಯ ಯಾವುದೇ ಸಮಸ್ಯೆ, ಗೊಂದಲಗಳಿಗೆ ಪರಿಹಾರವನ್ನು ಕಂಡು ಕೊಳ್ಳುವ ಅವಕಾಶವಿರುವುದಾಗಿ ಮೇಜರ್ ಚಿಂಗಪ್ಪ ತಿಳಿಸಿದರು. ಮಾಜಿ ಸೈನಿಕರಿಗಾಗಿ ಆಯೋಜಿತವಾಗಿರುವ ಈ ಸಮಾವೇಶದಲ್ಲಿ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರು, ವೀರ ನಾರಿಯರು, ಅವಲಂಭಿತರಲ್ಲದೆ ಸೈನ್ಯದಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾದವರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಭಾರತೀಯ ಭೂ ಸೇನಾ ದಕ್ಷಿಣ ವಲಯ(ಸದರ್ನ್ ಕಮಾಂಡ್)ದ ಸೇನಾ ಮುಖ್ಯಸ್ಥರಾದ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಅವರು ಅಂದು ಬೆಳಗ್ಗೆ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕಕ್ಕೆ ಮೊದಲು ಭೇಟಿ ನೀಡಲಿದ್ದಾರೆ. ಬಳಿಕ ಬೆ.10 ಗಂಟೆಯ ನಂತರ ಸಮಾವೇಶದಲ್ಲಿ ಪಾಲ್ಗೊಂಡು ಮಾಜಿ ಸೈನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭ ಸೈನ್ಯದ ಇತರೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಗೌರವ ಕಾರ್ಯದರ್ಶಿ ಸುಬೇದಾರ್ ಮೇಜರ್ ವಾಸಪ್ಪ ಅಗರಿಮನೆ(ನಿವೃತ್ತ), ನಿರ್ದೇಶಕರುಗಳಾದ ಹವಾಲ್ದಾರ್ ಕುಟ್ಟಂಡ ನಂದಾ ಮಾದಪ್ಪ(ನಿವೃತ್ತ), ಹವಾಲ್ದಾರ್ ಮಾದೆಯಂಡ ನಾಚಪ್ಪ(ನಿವೃತ್ತ), ಸುಬೇದಾರ್ ಮೇಜರ್ ನಾಟೋಳಂಡ ಸೋಮಯ್ಯ(ನಿವೃತ್ತ) ಹಾಗೂ ಹವಾಲ್ದಾರ್ ಕೂಪದಿರ ಮುತ್ತಣ್ಣ(ನಿವೃತ್ತ) ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.