Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ನದಿ ಮಲೀನತೆ : ನದಿ ಪಾತ್ರ ಒತ್ತುವರಿ ತಡೆಯಲು ತಂಡ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ನದಿ ಮಲೀನತೆ : ನದಿ ಪಾತ್ರ ಒತ್ತುವರಿ ತಡೆಯಲು ತಂಡ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಮಾರ್ಚ್ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಮಾ.21 NEWS DESK :  “ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು.  ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು. ಕಾವೇರಿ ನದಿ ಮಲೀನತೆ ಹಾಗೂ ಒತ್ತುವರಿ ಬಗ್ಗೆ ಕೇಳಿದಾಗ, “ಈ ನೆಲ,‌ಜಲ, ಇತಿಹಾಸ, ಪರಂಪರೆ ಉಳಿಸಲು ಏನು ಬೇಕೋ ಅದೆಲ್ಲವನ್ನು ನಾವು ಮಾಡುತ್ತೇವೆ. ನಿಮ್ಮ (ಮಾಧ್ಯಮಗಳ) ಸಲಹೆ ಇದ್ದರೂ ಸ್ವೀಕರಿಸುತ್ತೇವೆ” ಎಂದು ಉತ್ತರಿಸಿದರು.

ನೀರಿನ ಸದ್ಬಳಕೆ ಕುರಿತು ಅರಿವು; ಒಂದು ವಾರಗಳ ಕಾಲ ಅಭಿಯಾನ ::  “ವಿಶ್ವ ಜಲದಿನದ ಅಂಗವಾಗಿ ಒಂದು ಒಂದು ವಾರಗಳ ಕಾಲ ಜಲ ಸಂರಕ್ಷಣೆ ಅಭಿಯಾನ ನಡೆಯಲಿದೆ. ನೀರಿನ ದುರ್ಬಳಕೆ ತಡೆಗಟ್ಟಿ, ಸದ್ಬಳಕೆ ಮಾಡುವಂತೆ ಜಾಗೃತಿ ಮೂಡಿಸುವುದೇ ಕಾವೇರಿ ಆರತಿ ಉದ್ದೇಶ” ಎಂದು ತಿಳಿಸಿದರು. ಕಳೆದ ವರ್ಷ ಉತ್ತಮ ಮಳೆಯಾದಂತೆ ಈ ವರ್ಷವೂ ಉತ್ತಮವಾಗಿ ಮಳೆಯಾಗಿ ಜನರ ಬದುಕು ಹಸನಾಗಲಿ ಎಂದು ತಲಕಾವೇರಿಯಲ್ಲಿ ಪೂಜೆ ಸಲ್ಲಿಸುತ್ತಿದ್ದೇನೆ” ಎಂದರು.

ಕಾವೇರಿ ಆರತಿಗೆ ಹಣ ಮೀಸಲು ::  “ನದಿ ತೀರದಲ್ಲಿ ಕಾವೇರಿ ಆರತಿ ಆಯೋಜಿಸಲು ಈಗಾಗಲೇ ಹಣ ಮೀಸಲಿಡಲಾಗಿದೆ. ಎಷ್ಟು ದಿನಗಳಿಗೆ ಒಮ್ಮೆ ಆರತಿ ಮಾಡಬೇಕು ಎನ್ನುವ ತೀರ್ಮಾನವನ್ನು ಮುಂದೆ ತಿಳಿಸಲಾಗುವುದು. ಆರತಿ ವೇಳೆ ಕೊಡಗಿನ ಕಲಾವಿದರೂ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಮುಜರಾಯಿ, ನೀರಾವರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರಿಗೆ ಸೂಚನೆ ನೀಡಲಾಗಿದೆ” ಎಂದರು.

“ನೀರನ್ನು ದುರ್ಬಳಕೆ ಮಾಡುವುದಿಲ್ಲ, ಸುಖಾಸುಮ್ಮನೆ ಖರ್ಚು ಮಾಡುವುದಿಲ್ಲ ಎಂದು ಜನರಿಗೆ ಅರಿವು ಮೂಡಿಸಲಾಗುವುದು ಹಾಗೂ ಪ್ರತಿಜ್ಞಾವಿಧಿ ಭೋದಿಸಲಾಗುವುದು. ಇದಕ್ಕೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿಯನ್ನು ಆಯೋಜಿಸಲಾಗಿದೆ. ಜನರು ಆನ್ ಲೈನ್ ಮೂಲಕವೂ ನೀರನ್ನು ಉಳಿಸುತ್ತೇನೆ ಎಂದು ಪ್ರತಿಜ್ಞೆ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಬಹುದು. ಎಲ್ಲಾ ಸಾರ್ವಜನಿಕರು, ರಾಜಕಾರಣಿಗಳು ಇದರಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದರು. “ಈ ಹಿಂದೆ ತಲಕಾವೇರಿಗೆ ಬಂದು ಪೂಜೆ ಸಲ್ಲಿಸಿ ಸಿದ್ದರಾಮಯ್ಯ ಅವರು, ನಾನು ಹಾಗೂ ಪಕ್ಷದ ಅನೇಕ ನಾಯಕರ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ಮಾಡಲಾಯಿತು. ಬೆಂಗಳೂರಿಗೆ ಕಾವೇರಿ ಕುಡಿಯುವ ನೀರಿನ 5 ನೇ ಹಂತವೂ ಈಗ ಕಾರ್ಯರೂಪಕ್ಕೆ ಬಂದಿದೆ. ಇದೆಲ್ಲವೂ ಸಾಧ್ಯವಾಗಿರುವುದು ಕಾವೇರಿ ನದಿಯಿಂದ. ಕೆಆರ್ ಎಸ್ ಬಾಗಿನ ಸಮರ್ಪಣೆ ವೇಳೆ ಕಾವೇರಿ ಆರತಿ ಮಾಡುವುದಾಗಿ ನಾನು ಮಾತು ಕೊಟ್ಟಿದ್ದೆ ಅದಕ್ಕೂ ಸಿದ್ದತೆಗಳು ನಡೆಯುತ್ತಿದೆ” ಎಂದರು. ಆಡಳಿತ ಪಕ್ಷಕ್ಕೆ ಇಬ್ಬರು ಶಾಸಕರನ್ನು ಕೊಟ್ಟಿರುವ ಕೊಡಗಿನ ಮಹಾಜನತೆಗೆ ಸಾಷ್ಟಾಂಗ ನಮಸ್ಕಾರಗಳು. ಕೊಡಗಿನಿಂದ ಹರಿಯುವ ಕಾವೇರಿ ನೀರು ಬೆಂಗಳೂರಿನ ಜನರ ಬದುಕಿನಲ್ಲಿ ಸಂತೋಷ ಉಂಟು ಮಾಡಿದೆ.‌ ಕೊಡಗು ಇಡೀ ರಾಜ್ಯಕ್ಕೆ, ತಮಿಳುನಾಡಿಗೆ ಆಶ್ರಯ. ದಕ್ಷಿಣ ಭಾರತದ ಜೀವನದಿ.‌ ಆದ ಕಾರಣ ಮೊದಲ ಪೂಜೆ ತಲಕಾವೇರಿಯಲ್ಲಿ ಸಲ್ಲಬೇಕು. ಆದ್ದರಿಂದ ಇಲ್ಲಿಂದ ನೀರನ್ನು ತೆಗೆದುಕೊಂಡು ಹೋಗಿ ಕಾವೇರಿ ಆರತಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ತಮಿಳುನಾಡಿಗೆ ಪ್ರಯಾಣ ::  “ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ವಿರೋಧಿಸಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ನಾಳೆ (ಶನಿವಾರ) ಕರೆದಿರುವ ಸಭೆಯಲ್ಲಿ ನಾನು ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿ ಭಾಗವಹಿಸುತ್ತಿದ್ದೇವೆ” ಎಂದು ತಿಳಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ…

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.