Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ

ಮಾರ್ಚ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಮಾ.22 NEWS DESK : ನಾಲ್ಕು ಗೋಡೆಗಳ ನಡುವೆ ಸಿಲುಕಿಕೊಂಡಿದ್ದ ಮಹಿಳೆಗೆ ಇದೀಗ ಸ್ವಾವಲಂಬಿಯಾಗಿ ತನ್ನ ಪ್ರತಿಭೆಯನ್ನು ಹೊರಹೊಮ್ಮಿಸಲು ಹಲವು ಅವಕಾಶಗಳಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳ ಬೇಕಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ ಭೂಮಿಕಾ ಮಹಿಳಾ ಹಿತ ರಕ್ಷಣಾ ಸಮಿತಿಯ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಡುಗೆ ಮನೆಯಿಂದ ಅಂತರಿಕ್ಷದ ತನಕ ಇದೀಗ ಮಹಿಳೆಯರು ತಮ್ಮ ಸಾಧನೆ ಪ್ರದರ್ಶನ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಜ್ಞಾನವಿಕಾಸ ವೇದಿಕೆ ಮೂಲಕ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಈ ಮೂಲಕ ಲಕ್ಷಾಂತರ ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಯಾವುದೇ ಸಂದರ್ಭ ಮಹಿಳೆಯರು ತಮ್ಮ ಜವಾಬ್ದಾರಿಯನ್ನು ಮರೆಯದೆ ಕೌಟುಂಬಿಕ ಸಾಮರಸ್ಯವನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋಗಬೇಕಾಗಿದೆ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಕಾರ್ಯಕ್ರಮಗಳ ಮೂಲಕ ಮಹಿಳೆಯರಿಗೆ ಅರಿವು ಜಾಗೃತಿ ಮೂಡಿಸಲು ಸಾಧ್ಯ. ಮಹಿಳೆ ಕುಟುಂಬದಲ್ಲಿ ಪ್ರತಿಯೊಬ್ಬರ ಬಗ್ಗೆ ಜವಾಬ್ದಾರಿ ವಹಿಸುತ್ತಾರೆ.  ಸಂಘಟನೆಗಳ ಮೂಲಕ ಪರಸ್ಪರ ಉತ್ತಮ ಸಂಬಂಧ ಹೊಂದಲು ಸಾಧ್ಯ ಎಂದರಲ್ಲದೆ ಈ ಮೂಲಕ ಪ್ರತಿಯೊಬ್ಬರಿಗೂ ಧೈರ್ಯ ತುಂಬುವಂತಾಗಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿ ಪಿ ಶಶಿಧರ್ ಹೆಣ್ಣು ಮಗು ಇಲ್ಲದ ಕುಟುಂಬ ಪರಿಪೂರ್ಣವಲ್ಲ ಎಂದರು. ಸಂಸಾರ ಕಟ್ಟುವ ಕೈಗಳಿಗೆ ಹಿಂದಿನ ಕಾಲದಲ್ಲಿ ಆಚರಣೆ ಹೆಸರಿನಲ್ಲಿ ಶೋಷಣೆಗಳು ನಡೆಯುತ್ತಿದ್ದವು. ಭ್ರೂಣದಿಂದ ಬೂದಿ ತನಕ ಹೆಣ್ಣು ನಿರಂತರ ಶೋಷಣೆಗೆ ಒಳಗಾಗುತ್ತಿದ್ದ ಕಾಲವೊಂದಿತ್ತು ಇದೀಗ ಹಲವು ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯನ್ನು ಕಾಣುವುದು ಸಂತಸದ ವಿಷಯ ಎಂದರು. ಸಮಾಜದಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸುವುದು ಉತ್ತಮ ಕಾರ್ಯ ಎಂದು ಅವರು ಹೇಳಿದರು. ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಮಿಕಾ ಮಹಿಳಾ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷೆ ಜೆ ಫಿಲೋಮಿನಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿ ಕೊಂಡಿರುವ ವೈದ್ಯೆ ಡಾ.ದೀಪಿಕಾ ಮೂರ್ತಿ, ಉದ್ಯಮಿ ಲಿಪಿಕಾ ನಾಣಯ್ಯ, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಆಶಾ ಕಾರ್ಯಕರ್ತೆ ತಾಲೂಕು ಅಧ್ಯಕ್ಷೆ ಶಾಂತಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಂತಕುಮಾರಿ ಅವರು ಜಲ ದಿನಾಚರಣೆಯ ಮಹತ್ವದ ಬಗ್ಗೆ ಮಾಹಿತಿ ಒದಗಿಸಿದರು.  ಕಾರ್ಯದರ್ಶಿ ಪದ್ಮ ವರದಿ ವಾಚನ, ಪಾರ್ವತಿ ಮತ್ತು ತಂಡದಿಂದ ಪ್ರಾರ್ಥನೆ, ಗೌರವಾಧ್ಯಕ್ಷರಾದ ಪದ್ಮಾವತಿ ಪರಮೇಶ್  ಸ್ವಾಗತಿಸಿದರು. ಗೌರವ ಸಲಹೆಗಾರರದ ವನಿತಾ ಚಂದ್ರಮೋಹನ್ ಕಾರ್ಯಕ್ರಮ ನಿರೂಪಣೆ, ಉಪಾಧ್ಯಕ್ಷರಾದ ಜಯಲಕ್ಷ್ಮಿ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಅ.21 : ಕರ್ತವ್ಯದ ವೇಳೆ ದೇಶದ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಪ್ರಾಣತ್ಯಾಗ ಮಾಡಿದ ಪೊಲೀಸ್‌…

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.