Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು

*ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

March 25, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.25 NEWS DESK : ಮುಸಲ್ಮಾನರಿಗೆ ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮಾಜಿ ಶಾಸಕರುಗಳು, ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಗಳು ಸಂಪುಟದಿಂದಲೆ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಸಂವಿಧಾನದ ರಕ್ಷಕರು ತಾವೆನ್ನುವ ಕಾಂಗ್ರೆಸ್ ಪರಿಶಿಷ್ಟರು ಮತ್ತು ಡಾ.ಅಂಬೇಡ್ಕರ್ ಅವರುಗಳ ಹೆಸರನ್ನು ಹೇಳುತ್ತಲೆ ಅವರನ್ನು ತುಳಿಯುವ ಕೆಲಸವನ್ನು ಈ ಹಿಂದಿನಿಂದಲು ಮಾಡಿಕೊಂಡು ಬಂದಿದೆ ಎಂದು ಆರೋಪಿಸಿದರು.  ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಮಾತನಾಡಿ, ಅಲ್ಪಸಂಖ್ಯಾತರಿಗೆ ಗಣನೀಯ ಸವಲತ್ತು ಒದಗಿಸುವ ಸಿದ್ದರಾಮಯ್ಯ ಅವರ ಬಡ್ಜೆಟ್ ಅವರೇ ಹೇಳುವಂತೆ ಚರಿತ್ರಾರ್ಹವಾದ ಬಡ್ಜೆಟ್ ಎಂದು ವ್ಯಂಗ್ಯವಾಡಿದರು.  ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗುವ ಮೂಲಕ ಸಮಾಜವನ್ನು ಒಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದನ್ನು ಅಲ್ಪಸಂಖ್ಯಾತರು ಅರಿತುಕೊಳ್ಳಬೇಕು, ಅವರ ಮಾತಿಗೆ ಮರುಳಾಗಬಾರದು. ಧರ್ಮದ ಆಧಾರದಲ್ಲಿ ಮೀಸಲಾತಿ ಎಂದಿಗೂ ಸಾಧ್ಯವಿಲ್ಲ. ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯ ಈ ಬಗ್ಗೆ ಸ್ಪಷ್ಟನೆಗಳನ್ನು ನೀಡಿದೆ. ಅಗತ್ಯತೆಗಳಿಗೆ ತಕ್ಕಂತೆ ಸಂವಿಧಾನಕ್ಕೆ ತಿದ್ದುಪಡಿಗಳನ್ನಷ್ಟೆ ಮಾಡಬಹುದು. ಇಲ್ಲಿಯವರೆಗೆ ಸಂವಿಧಾನಕ್ಕೆ ತಂದಿರುವ ಸುಮಾರು 106 ತಿದ್ದುಪಡಿಗಳಲ್ಲಿ, ಎಂಭತ್ತಕ್ಕೂ ಹೆಚ್ಚಿನ ತಿದ್ದುಪಡಿಗಳನ್ನು ತಂದಿರುವುದು ಕಾಂಗ್ರೆಸ್ ಎಂದು ಟೀಕಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದೆ, ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಕೇವಲ ಒಂದು ವರ್ಗವನ್ನಷ್ಟೆ ಕೇಂದ್ರೀಕರಿಸಿ ಇತರರ ಬಗ್ಗೆ ತಾರತಮ್ಯ ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸುವುದಾಗಿ ತಿಳಿಸಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ರಾಜ್ಯ ಮಹಿಳಾ ಮೋರ್ಚಾ ಪ್ರಮುಖರಾದ ರೀನಾ ಪ್ರಕಾಶ್, ಮಹಿಳಾ ಬಿಜೆಪಿ ಮಾಜಿ ಅಧ್ಯಕ್ಷೆ ಯಮುನಾ ಚಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ತಳೂರು ಕಿಶೋರ್ ಕುಮಾರ್, ಪ್ರಮುಖರಾದ ಕೆ.ಎಸ್.ರಮೇಶ್, ಕನ್ನಂಡ ಸಂಪತ್, ಎಸ್.ಸಿ.ಸತೀಶ್, ನಾಗೇಶ್ ಕುಂದಲ್ಪಾಡಿ, ಬಿ.ಕೆ.ಜಗದೀಶ್, ಬಿ.ಕೆ.ಅರುಣ್ ಕುಮಾರ್, ಪಿ.ಎಂ.ರವಿ, ಸಜಿಲ್ ಕೃಷ್ಣನ್, ಅರುಣ್ ಶೆಟ್ಟಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

::: ಹುಲ್ಲು ಹೊತ್ತೊಯ್ದ ಪೊಲೀಸರು ::: ಪ್ರತಿಭಟನೆಗಾಗಿ ಬಿಜೆಪಿ ಕಚೇರಿಯ ಮುಂಭಾಗ ಪ್ರತಿಕೃತಿ ರಚನೆಗೆ ಇರಿಸಿದ್ದ ಹುಲ್ಲನ್ನು ಪೊಲೀಸರು ವಶಪಡಿಸಿಕೊಂಡು ಹೊತ್ತೊಯ್ದ ಹಿನ್ನೆಲೆ ಬಿಜೆಪಿ ಪ್ರಮುಖರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಮಾತನಾಡಿದ ಮಾಜಿ ಶಾಸಕರುಗಳು ಯಾರದೋ ಆದೇಶದಂತೆ ಹುಲ್ಲನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ, ಅವರಿಗೆ ಆದೇಶ ನೀಡಿದವರಾರು ಎಂದು ಪ್ರಶ್ನಿಸಿದರು. ಪ್ರತಿಕೃತಿಗಳನ್ನು ದಹಿಸುವುದು ಯಾವುದೇ ಕಾರಣಕ್ಕೂ ಅಪರಾಧವಲ್ಲ. ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದನ್ನು ನ್ಯಾಯಾಲಯವೂ ಸ್ಪಷ್ಟಪಡಿಸಿರುವುದಾಗಿ ತಿಳಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಎ.ಕೆ.ಎಸ್ ಲೀಗಲ್ ಸರ್ವಿಸ್ ಪ್ರೈವೆಟ್ ಲಿಮಿಟೆಡ್ ನಿಂದ ಜಿಲ್ಲಾಡಳಿತಕ್ಕೆ ರೂ.23 ಲಕ್ಷ ಚೆಕ್ ಹಸ್ತಾಂತರ*
Next Article *ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ : ರೂ.10 ಸಾವಿರ ಗೌರವಧನಕ್ಕೆ ಆಗ್ರಹ*

Website design development company services in Mangalore

Forex Trading Teacher in India

Related Posts

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

ಮಡಿಕೇರಿ NEWS DESK ಫೆ.13 :  ಬ್ರೈನೋಬ್ರೈನ್  ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ನಡೆದ “16ನೇ ಅಂತರಾಷ್ಟ್ರೀಯ…

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.