Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಬಳಕೆ ಹೆಚ್ಚಗಲಿ : ಸಚಿವ ಎನ್.ಎಸ್.ಭೋಸರಾಜು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಬಳಕೆ ಹೆಚ್ಚಗಲಿ : ಸಚಿವ ಎನ್.ಎಸ್.ಭೋಸರಾಜು*

ಮಾರ್ಚ್ 26, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.26 NEWS DESK : ಕೊಡಗು ವಿಶ್ವವಿದ್ಯಾನಿಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮಹಾವಿದ್ಯಾಲಯದ ಅಮೃತ ಮಹೋತ್ಸವ ಪ್ರಯುಕ್ತ ಕನ್ನಡದಲ್ಲಿ 5ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನದ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತು ಮೂರು ದಿನದ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಚಾಲನೆ ನೀಡಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಮಾನವನ ಬದುಕಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲ್ಲದೆ ಊಹಿಸಿಕೊಳ್ಳುವುದು ಕಷ್ಟಸಾಧ್ಯ ಎಂದು ಹೇಳಿದರು. ಸರ್ವರಿಗೂ ವಿಜ್ಞಾನ, ಸುಲಭ ವಿಜ್ಞಾನ, ಸುಸ್ಥಿರ ಅಭಿವೃದ್ದಿಗಾಗಿ ವಿಜ್ಞಾನ ಎಂಬ ಆಶಯದೊಂದಿಗೆ ನಾಡಿನಾದ್ಯಂತ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಜ್ಞಾನವನ್ನು ಜನಪ್ರಿಯಗೊಳಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಭೂಮೇಲ್ಮೈ ವಾತಾವರಣ (ಮಳೆ, ಬಿಸಿಲು, ಚಳಿ ಸೇರಿದಂತೆ )ಪ್ರಾಕೃತಿಕವಾಗಿ ಪ್ರತೀ ನಿತ್ಯದ ಚಟುವಟಿಕೆಯನ್ನು ಮುಂಚಿತವಾಗಿಯೇ ತಿಳಿಯುವಂತಾಗಲು ವಿಜ್ಞಾನ ಮತ್ತು ತಂತ್ರಜ್ಞಾನ ಅತ್ಯವಶ್ಯಕವಾಗಿದೆ ಎಂದು ಸಚಿವರು ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಆಸಕ್ತಿ ಮತ್ತು ಕುತೂಹಲ ಇರಬೇಕು. ಇದರಿಂದ ವೈಜ್ಞಾನಿಕವಾಗಿ ಸಂಶೋಧನೆಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ ದೊರೆಯುತ್ತಿದ್ದು, ಇದನ್ನು ಹೆಚ್ಚು ಬಳಸಬೇಕು. ಇದರಿಂದ ಹಂತ ಹಂತವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಎನ್.ಎಸ್.ಭೋಸರಾಜು ನುಡಿದರು. ಕನ್ನಡದಲ್ಲಿಯೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಂಬಂಧಿಸಿದಂತೆ ಕನ್ನಡದಲ್ಲಿಯೇ ಸಮ್ಮೇಳನ ಆಯೋಜಿಸಿರುವುದು ವಿಶೇಷವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ವಿಜ್ಞಾನ ಮತ್ತು ತಂತ್ರಜ್ಞಾನ ಮಾನವನ ಬೆಳವಣಿಗೆಗೆ ಅತ್ಯವಶ್ಯಕ. ಆ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವು ವಿಶ್ವದಲ್ಲಿ ಅಗಾಧವಾಗಿ ಬೆಳೆದಿದೆ ಎಂದರು. ಅಮೇರಿಕಾದ ಬಾಹ್ಯಾಕಾಶ ವಿಜ್ಞಾನಿಗಳು 9 ತಿಂಗಳ ಕಾಲ ಅಂತರರಾಷ್ಟ್ರೀಯ ಗಗನಯಾನದಲ್ಲಿ ಇದ್ದು, ವಿಜ್ಞಾನಕ್ಕೆ ಸಂಬಂಧಿಸಿದಂತೆ ಹಲವು ಸಂಶೋಧನೆ ಕೈಗೊಂಡು ಭೂಮಿಗೆ ವಾಪಸ್ಸು ಬಂದಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಇದೊಂದು ಮೈಲಿಗಲ್ಲು ಎಂದು ತಿಳಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರವು ಪ್ರಸ್ತುತ ಕೃತಕ ಬುದ್ದಿಮತ್ತೆ(ಎಐ) ವರೆಗೂ ಮುಂದುವರಿದಿದೆ. ಆ ನಿಟ್ಟಿನಲ್ಲಿ ಒಳ್ಳೆಯದನ್ನು ಸರಿಯಾಗಿ ಬಳಸಿಕೊಂಡು ಸಮಾಜವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು ಎಂದು ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು. ಆಧುನಿಕತೆ ಬೆಳೆದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಬದಲಾವಣೆಯನ್ನು ಕಾಣಬಹುದು. ಆ ನಿಟ್ಟಿನಲ್ಲಿ ದೇಶದ ಪ್ರಗತಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಅತ್ಯವಶ್ಯಕ ಎಂದು ಎ.ಎಸ್.ಪೊನ್ನಣ್ಣ ಅವರು ಒತ್ತಿ ಹೇಳಿದರು. ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ ಅವರು ಮಾತನಾಡಿ ನಾಡಿನ ಭಾಷೆ ಹಾಗೂ ಮಾತೃ ಭಾಷೆ ಕನ್ನಡವಾಗಿದ್ದು, ಕನ್ನಡ ಭಾಷೆಯ ಬಗ್ಗೆ ಅಭಿಮಾನ ಇರಬೇಕು ಎಂದರು. ನಾಡಗೀತೆಯನ್ನು ವಿದ್ಯಾರ್ಥಿಗಳು ಹಾಡುವಂತಾಗಬೇಕು. ಅದನ್ನು ಬಿಟ್ಟು ಧ್ವನಿವರ್ಧಕ ಮೂಲಕ ನಾಡಗೀತೆ ಹಾಡಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕನ್ನಡ ಆಡಳಿತ ಭಾಷೆಯಾಗಿದ್ದು, ಸಂಬಂಧಗಳ ಆಧಾರದಲ್ಲಿ ನಾಡನ್ನು ಕಟ್ಟಲಾಗಿದೆ. ಸಂಸ್ಕøತಿ ಭಾವೈಕ್ಯತೆಯ ಬೀಡು ಕರ್ನಾಟಕದ್ದಾಗಿದೆ ಎಂದು ಎಸ್.ಎಲ್.ಭೋಜೇಗೌಡ ಅವರು ಪ್ರತಿಪಾದಿಸಿದರು. ಇತ್ತೀಚಿನ ದಿನಗಳಲ್ಲಿ ಗುರುಶಿಷ್ಯರ, ಅಕ್ಕತಂಗಿಯರ, ಅಣ್ಣ ತಮ್ಮಂದಿರ ಸಂಬಂಧವನ್ನು ಕಳೆದುಕೊಂಡಿದ್ದೇವೆ. ಸಂಬಂಧಗಳು ಗಟ್ಟಿಯಾಗಿರಬೇಕು, ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು ಎಂದರು. ‘ಹೆಚ್ಚಿನ ಅಧ್ಯಯನವೆಂದು ಹೇಳಿಕೊಂಡು ವಿದೇಶಕ್ಕೆ ತೆರಳಿ ಲಕ್ಷ ಲಕ್ಷ ಸಂಬಳ ಪಡೆಯುತ್ತಾರೆ. ಆದರೆ ಮದುವೆಯಾದ ಕೆಲವೇ ತಿಂಗಳಲ್ಲಿ ವಿಚ್ಛೇದನ ನೀಡುತ್ತಾರೆ. ಇದುವೆ ಕಲಿಕಾ ಸಂಸ್ಕøತಿ ಎಂದು ಪ್ರಶ್ನಿಸಿದರು.’ ಕನ್ನಡ ನಾಡುನುಡಿ ಬಗ್ಗೆ ಹೆಮ್ಮೆ ಇರಬೇಕು. ಮನುಷ್ಯತ್ವ ಗುಣ ಪ್ರತಿಯೊಬ್ಬರಲ್ಲೂ ಇರಬೇಕು. ಏನಾದರೂ ಆಗು ಮೊದಲು ಮಾನವನಾಗು, ಆ ನಿಟ್ಟಿನಲ್ಲಿ ಮಾನವೀಯ ಮೌಲ್ಯ ಕಳೆದುಕೊಳ್ಳಬಾರದು ಎಂದರು. ಮಕ್ಕಳಿಗೆ ಜೀವನದ ಮತ್ತು ಬದುಕಿನ ಶಿಕ್ಷಣ ಕಲಿಸಬೇಕು. ಬುದ್ಧ, ಬಸವ, ಅಂಬೇಡ್ಕರ್, ಮಹಾತ್ಮಗಾಂಧಿ, ಕುವೆಂಪು, ಪುರಂದರ ದಾಸರು, ಕನಕದಾಸರು, ನಾರಾಯಣಗುರು ಹೀಗೆ ಹಲವು ದಾರ್ಶನಿಕರ ಮಾತುಗಳು ಇಂದಿಗೂ ಪ್ರಸ್ತುತವಾಗಿವೆ. ಆ ನಿಟ್ಟಿನಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು. ನಾಡುನುಡಿಯ ಬಗ್ಗೆ ಶಿಕ್ಷಣ ತಜ್ಞರ ಮೂಲಕ ಪಠ್ಯಪುಸ್ತಕ ರಚಿಸಬೇಕು. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಭೋಜೇಗೌಡ ಅವರು ಹೇಳಿದರು. ವಿಧಾನ ಪರಿಷತ್ ಸದಸ್ಯರಾದ ಎಂಪಿ.ಸುಜಾ ಕುಶಾಲಪ್ಪ ಅವರು ಮಾತನಾಡಿ ವಿಜ್ಞಾನ ಮತ್ತು ತಂತ್ರಜ್ಞಾನವು ಮಾನವ ಜೀವನದ ಅಭಿವೃದ್ದಿಗೆ ಸಹಕಾರಿಯಾಗಿದೆ. ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದೆ ಎಂದರು. ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಅಶೋಕ ಸಂಗಪ್ಪ ಆಲೂರ ಅವರು ಸ್ವಾಗತಿಸಿ ಮಾತನಾಡಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಬೆಳವಣಿಗೆ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗುವುದು. ಆಧುನಿಕ ಮತ್ತು ತಂತ್ರಜ್ಞಾನಕ್ಕೆ ಒತ್ತು ನೀಡುವುದು ಪ್ರಮುಖ ಉದ್ದೇಶವಾಗಿದೆ ಎಂದರು. ವಿಶ್ವ ವಿದ್ಯಾಲಯಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಎಂ.ರಮೇಶ್ ಅವರು ಮಾತನಾಡಿ ಇದುವರೆಗೆ 50 ಸಮ್ಮೇಳನವನ್ನು ಆಯೋಜಿಸಲಾಗಿದೆ. ವಿವಿಧ ಉಪನ್ಯಾಸ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 30 ಕ್ಕೂ ಹೆಚ್ಚು ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಕನ್ನಡದಲ್ಲಿಯೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಆಯೋಜಿಸಿರುವುದು ವಿಶೇಷವಾಗಿದೆ ಎಂದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ.ಸುರೇಶ ಎಚ್.ಜಂಗಮಶೆಟ್ಟಿ, ಹಾಸನ ವಿಶ್ವವಿದ್ಯಾಲಯದ ಕುಲಪತಿ ಡಾ.ತರೀಕೆರೆ ಸಿ.ತಾರಾನಾಥ್, ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಡಾ.ಎಂ.ಆರ್.ಗಂಗಾಧರ್, ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿ ಡಾ.ಆನಂದ ಎಸ್. ದೇಶಪಾಂಡೆ, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಬೀದರ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಸ್.ಬಿರಾದಾರ್, ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ, ಬೆಂಗಳೂರು ಕವಿತಂಅ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್, ಎಫ್‍ಎಂಕೆಎಂಸಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ.ಬಿ.ರಾಘವ, ಸಿಂಡಿಕೇಟ್ ಸದಸ್ಯರಾದ ಪುಟ್ಟರಾಜಪ್ಪ, ಡಾ.ವಾಣಿ ಎಂ., ಕೆ.ಎನ್.ಜನಾರ್ಧನ್, ಡಾ.ದಯಾನಂದ ಕೆ.ಸಿ., ಡಾ.ಎಂ.ಜಿ.ಕಾವೇರಿಯಪ್ಪ, ಡಾ.ಡಿ.ಕೆ.ಸರಸ್ವತಿ, ಕುಲಸಚಿವರಾದ (ಮೌಲ್ಯಮಾಪನ) ಡಾ.ಎಂ.ಸುರೇಶ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.