Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*75 ತಡೆಗೋಡೆಗಳ ನಿರ್ಮಾಣಕ್ಕೆ ನಗರಸಭೆ ಅಂಗೀಕಾರ : ಚುನಾವಣೆಗೆ ದಿನಾಂಕ ನಿಗದಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*75 ತಡೆಗೋಡೆಗಳ ನಿರ್ಮಾಣಕ್ಕೆ ನಗರಸಭೆ ಅಂಗೀಕಾರ : ಚುನಾವಣೆಗೆ ದಿನಾಂಕ ನಿಗದಿ*

ಮಾರ್ಚ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.26 NEWS DESK : ನಗರದ ವಿವಿಧ ಬಡಾವಣೆಗಳ ಸಹಿತ ಒಟ್ಟು 75 ತಡೆಗೋಡೆಗಳ ನಿರ್ಮಾಣಕ್ಕೆ ಅಂಗೀಕಾರ ನೀಡಲಾಗಿದೆ. ಇದಕ್ಕೆ 13 ಕೋಟಿ ರೂ. ಅನುದಾನ ಬೇಕಿದ್ದು, ಈ ಕುರಿತು ನಗರಸಭೆ ಮೂಲಕ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಸಭಾ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಮಡಿಕೇರಿ ನಗರ ಸಭೆ ಕೆಲವು ದಿನಗಳ ಹಿಂದೆ 2025-26ನೇ ಸಾಲಿನ ಉಳಿತಾಯ ಬಜೆಟ್ ಮಂಡಿಸಿದ್ದು, ಈ ಕುರಿತು ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಸಭೆಯ ಪ್ರಾರಂಭದಲ್ಲಿ ಮಾತನಾಡಿದ ನಗರ ಸಭೆ ಸದಸ್ಯ ಮನ್ಸೂರ್, ನಗರದ ವಿವಿಧ ಕಡೆಗಳಲ್ಲಿ ತಡೆಗೋಡೆಗಳ ನಿರ್ಮಾಣಕ್ಕೆ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಜಿಲ್ಲಾಧಿಕಾರಿಗಳನ್ನು ಕೋರಿದರು. ಇದಕ್ಕೆ ಪ್ರತಿಕ್ರಿಯಸಿದ ನಗರ ಸಭೆ ಆಡಳಿತಾಧಿಕಾರಿ ವೆಂಕಟ್ ರಾಜಾ, ಈಗಾಗಲೇ 75 ಕಡೆಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದಕ್ಕೆ ಎನ್‍ಡಿಆರ್ ಎಫ್ ನಿಧಿಯಿಂದ ಅನುದಾನ ಲಭಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಕ್ಕೆ ಪತ್ರ ವ್ಯವಹಾರದ ಮೂಲಕ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ರಾಜ ಕಾಲುವೆಗಳ ಕಾಂಕ್ರೀಟೀಕರಣ ಮಾಡುವ ಅಗತ್ಯವಿದೆ. ನಗರದೊಳಗೆ 6 ಕಿ.ಮೀ ರಾಜಕಾಲುವೆ ಹಾದು ಹೋಗಿದ್ದು, ಈಗಾಗಲೇ 1.6 ಕಿ.ಮೀ ಕಾಂಕ್ರೀಟೀಕರಣ ಮಾಡಲಾಗಿದೆ. ಇನ್ನುಳಿದ ರಾಜಕಾಲುವೆಯ ಕಾಂಕ್ರೀಟೀಕರಣಕ್ಕಾಗಿ 1 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ವಿವರಿಸಿದರು. ನಗರಕ್ಕೆ ನೀರು ಪೂರೈಸುವ ಮುಖ್ಯ ಪೈಪ್‍ಲೈನ್ ಒಡೆದು ಹೋಗಿದ್ದು, ಕಾಮಗಾರಿಯ ಟೆಂಡರ್ ಪಡೆದವರು ಕಾಮಗಾರಿ ಆರಂಭಿಸಲು ವಿಳಂಬ ಮಾಡುತ್ತಿದ್ದಾರೆ. ತಕ್ಷಣವೇ ಕಾಮಗಾರಿ ಆರಂಭಿಸಲು ಸೂಚಿಸಬೇಕು. ಇಲ್ಲವಾದಲ್ಲಿ ನಗರದ ಜನತೆಗೆ ನೀರಿನ ಸಮಸ್ಯೆ ಎದುರಾಗಲಿದೆ. ಗುತ್ತಿಗೆ ಪಡೆದವರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಸಭೆಯೆ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ರಮೇಶ್, ಕಾಮಗಾರಿ ಆರಂಭಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸದಸ್ಯ ಅಮಿನ್ ಮೊಹಿಸಿನ್ ವಿವಿಧ ವಿಚಾರಗಳ ಕುರಿತು ಪ್ರಸ್ತಾಪಿಸಿದರು. ಇನ್ನುಳಿದಂತೆ ನಗರಸಭೆಯ ಕಟ್ಟಡ ಮಳಿಗೆ ಹರಾಜು, ಬಾಡಿಗೆ ಪಾವತಿಸಿದ ಜಾಹೀರಾತು ಫಲಕಗಳ ತೆರವು, ಕುರಿ, ಕೋಳಿ, ಮೀನು ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ, ಆಸ್ತಿ ತೆರಿಗೆ ವಿಧಿಸುವುದು, ಬೀದಿ ದೀಪಗಳ ಅಳವಡಿಕೆ, ಅಮೃತ್-2 ಯೋಜನೆ, ಒಳ ಚರಂಡಿ ಕಾಮಗಾರಿ ವಿಳಂಬ, ಸದಸ್ಯರ ಅಧ್ಯಯನ ಪ್ರವಾಸ ಮತ್ತಿತ್ತರ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ಸಂದರ್ಭ ಪೌರಾಯುಕ್ತರು ಮಂಡಿಸಿದ ತುರ್ತಾಗಿ ಕೈಗೆತ್ತಿಕೊಳ್ಳಬೇಕಿರುವ ಕಾಮಗಾರಿಗಳ ಪಟ್ಟಿಗೆ ಸದಸ್ಯರು ಅನುಮೋದನೆ ನೀಡಿದರು.
::: ಚುನಾವಣೆಗೆ ದಿನಾಂಕ ನಿಗದಿ ::: ನಗರ ಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ದಿನಾಂಕ ನಿಗದಿಪಡಿಸುವಂತೆ ಆಡಳಿತಾಧಿಕಾರಿ ವೆಂಕಟ್ ರಾಜಾ ಅವರು ಸದಸ್ಯರಿಗೆ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸದಸ್ಯರು ತಾವುಗಳೇ ಒಂದು ದಿನಾಂಕ ನಿಗದಿ ಮಾಡುವಂತೆ ಮನವಿ ಮಾಡಿದರು. ತಾವು ದಿನಾಂಕ ನಿಗದಿ ಮಾಡಿದಲ್ಲಿ ಕೆಲವು ಸದಸ್ಯರು ಹಲವು ಕಾರಣಗಳನ್ನು ಮುಂದಿಡುತ್ತಾರೆ. ಹೀಗಾಗಿ ನೀವುಗಲೇ ದಿನ ನಿಗದಿ ಮಾಡುವಂತೆ ಜಿಲ್ಲಾಧಿಕಾರಿಗಳು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭೆಯಲ್ಲಿದ್ದ ಸದಸ್ಯರು, ನೀವು ಹೇಳಿದ ದಿನಾಂಕದಂದೇ ಚುನಾವಣೆ ನಡೆಯಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದರು. ಬಳಿಕ ಏಪ್ರಿಲ್ 8 ಅಥವಾ 9ರಂದು ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗುತ್ತದೆ. ಎಲ್ಲಾ ಸದಸ್ಯರಿಗೂ ಈ ಕುರಿತು 1 ವಾರಕ್ಕೂ ಮುನ್ನವೇ ನೋಟೀಸ್ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಇದಕ್ಕೆ ಸದಸ್ಯರು ಸಮ್ಮತಿ ಸೂಚಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.