Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮ : ಕೊಡಗಿನಲ್ಲಿ ಅಭಿವೃದ್ಧಿಯ ಶಕೆ ಪ್ರಾರಂಭ : ಸಚಿವ ಎನ್.ಎಸ್.ಬೋಸರಾಜು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮ : ಕೊಡಗಿನಲ್ಲಿ ಅಭಿವೃದ್ಧಿಯ ಶಕೆ ಪ್ರಾರಂಭ : ಸಚಿವ ಎನ್.ಎಸ್.ಬೋಸರಾಜು*

ಮಾರ್ಚ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮಾ.26 NEWS DESK : ಕೊಡಗಿನ ಮತದಾರರು ವಿದ್ಯಾವಂತ ಯುವಕರನ್ನು ಶಾಸಕರನ್ನು ಆಯ್ಕೆ ಮಾಡಿರುವ ಕಾರಣದಿಂದ ಜಿಲ್ಲೆಯಲ್ಲಿ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಜಿಲ್ಲಾ ಹಾಗೂ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೊಡವ ಸಮಾಜದಲ್ಲಿ ನಡೆದ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕಾಗಿ ತ್ಯಾಗ ಮಾಡಿದವರು ಪಕ್ಷದ ಆಸ್ತಿಯಾಗಿದ್ದಾರೆ. ಅಂತಹವರಿಗೆ ಪಕ್ಷ ಯಾವತ್ತು ಚಿರರುಣೆಯಾಗಿರುತ್ತದೆ. 1919ರಿಂದ ನಾನು ಕಾಂಗ್ರೆಸ್‍ಗಾಗಿ ದುಡಿದಿದ್ದೇನೆ. ನನಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಕಾರ್ಯಕರ್ತರೇ ಪಕ್ಷದ ಜೀವಾಳ ಎಂದು ಬಣ್ಣಿಸಿದರು. ಪಂಚ ಗ್ಯಾರೆಂಟಿಗಳು ಎಲ್ಲ ಮನೆಗಳಿಗೆ ತಲುಪಿವೆ. ಪ್ರತಿ ಕುಟುಂಬಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಯ ಉದ್ದೇಶಗಳನ್ನು ಪ್ರತಿ ಕುಟುಂಬಗಳಿಗೂ ತಿಳಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಈ ಮೂಲಕ ಪಕ್ಷದ ಸಂಘಟನೆ ಮಾಡಬೇಕು ಎಂದು ಹೇಳಿದರು. ಕೊಡಗಿನಲ್ಲಿ ಬಿಜೆಪಿ ಶಾಸಕರು 25 ವರ್ಷ ಅಧಿಕಾರ ನಡೆಸಿದ್ದಾರೆ. ಆದರೆ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿಲ್ಲ. ಗ್ರಾಮೀಣ ರಸ್ತೆಗಳು ಹಾಗು ರಾಜ್ಯಹೆದ್ದಾರಿಗಳನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತೆ. 25 ವರ್ಷಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ತೊಂದರೆ ಕೊಟ್ಟಿದ್ದಾರೆ. ಇನ್ನು ಯಾವತ್ತೂ ಕೋಮುವಾದಿ ಬಿಜೆಪಿಯ ಶಾಸಕರು ಕೊಡಗಿನಲ್ಲಿ ಆಯ್ಕೆಯಾಗಬಾರದು. ಕಾಂಗ್ರೆಸ್ ಕಾರ್ಯಕರ್ತರು ಮನಸ್ಸು ಮಾಡಿದರೆ, ಎಲ್ಲವೂ ಸಾಧ್ಯ ಎಂದು ಹೇಳಿದರು. ಪಂಚ ಗ್ಯಾರೆಂಟಿಗಳೊಂದಿಗೆ ಕೊಡಗಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಸರ್ಕಾರ ಕೊಟ್ಟಿದೆ. ಮಡಿಕೇರಿ ಹಾಗು ವಿರಾಜಪೇಟೆಯ ಮತದಾರರು ವಿದ್ಯಾವಂತ ಶಾಸಕರನ್ನು ಆಯ್ಕೆ ಮಾಡಿರುವುದರಿಂದ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದೆ ಎಂದು ಹೇಳಿದರು. ಶಾಸಕ ಡಾ.ಮಂತರ್‍ಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದ ನಂತರ ಕೊಡಗು ಜಿಲ್ಲೆಯ ಅಭಿವೃದ್ಧಿಗೆ 1500ಕೋಟಿ ರೂ.ಗಳ ಅನುದಾನ ನೀಡಿದೆ ಎಂದು ಹೇಳಿದರು. 25 ವರ್ಷ ಜಿಲ್ಲೆಯಲ್ಲಿ ಶಾಸಕರು ಏನೂ ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಸಿ ಆಂ್ಯಡ್ ಡಿ ಭೂಮಿಯ ಭೂತವನ್ನು ಸಂರಕ್ಷಿಸಿಕೊಂಡು ಬಂದವರೇ ಬಿಜೆಪಿ ಶಾಸಕರು, ಈಗ ಅಧಿಕಾರ ಕಳೆದುಕೊಂಡ ಮೇಲೆ ಸಿ ಆಂ್ಯಡ್ ಡಿ ಪರ ಹೋರಾಟ ಮಾಡುತ್ತೇವೆ ಎಂದು ಭಾಷಣ ಬಿಗಿಯುತ್ತಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಕಾನೂನತ್ಮವಾಗಿ ಯಾವುದೇ ಹೋರಾಟ ಮಾಡಿಲ್ಲ ಎಂದು ಹೇಳಿದರು. ಕೇಂದ್ರ ಬಿಜೆಪಿ ಸರ್ಕಾರದ ಕಸ್ತೂರಿ ರಂಗನ್ ವರದಿ ರಾಜ್ಯದಲ್ಲಿ ಅನುಷ್ಠಾನವನ್ನು ರಾಜ್ಯ ಸರ್ಕಾರ ತಿರಸ್ಕಾರ ಮಾಡಿದೆ. ರಾಜ್ಯ ಸರ್ಕಾರ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಐದು ಗ್ಯಾರೆಂಟಿಗಳು ಬಡವರು, ಕಾರ್ಮಿಕರು, ರೈತರು, ಶೋಷಿತರ ಮನೆಯ ಬೆಳಕಾಗಿದೆ. ಗ್ಯಾರೆಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಬಿಜೆಪಿ ನಾಯಕರು, ಫಲಾನುಭವಿಗಳನ್ನು ಅವಮಾನ ಮಾಡುತ್ತಿದ್ದಾರೆ. ಸರ್ಕಾರದ ಸೌಲಭ್ಯಗಳನ್ನು ಪಡೆಯುವುದು ಜನರ ಹಕ್ಕು. ಅಂತಹ ಹಕ್ಕುಗಳನ್ನೆ ಅವಮಾನ ಮಾಡುವವರನ್ನು ಜನರ ಕ್ಷಮಿಸಬಾರದು. ಅವಮಾನಿಸಿದವರಿಗೆ ಮುಂದಿನ ದಿನಗಳಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರ ಕುಟುಂಬದವರೇ ಫಲಾನುಭವಿಗಳಾಗಿದ್ದಾರೆ ಅವರನ್ನು ಅವರುಗಳೇ ಅವಮಾನ ಮಾಡುತ್ತಿರುವುದು ಹಾಸ್ಯಸ್ಪದ ಎಂದು ಮೂದಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ವಿ.ಪಿ.ಶಶಿಧರ್, ಹಂಸ, ಉಸ್ತುವಾರಿಗಳಾದ ಗಪೂರ್, ವಿಜೇಶ್, ಪಕ್ಷದ ನಾಯಕರುಗಳಾದ ಟಿ.ಪಿ.ರಮೇಶ್, ಕೆ.ಎಂ.ಲೋಕೇಶ್, ಎಸ್.ಎಂ.ಚಂಗಪ್ಪ, ಸುರಯ್ಯ ಅಬ್ರಾರ್, ಕಾಂತರಾಜ್, ಆದಂ, ಶೀಲಾ ಡಿಸೋಜ, ಬಿ.ಇ.ಜಯೇಂದ್ರ, ಕೆ.ಎ.ಯಾಕೂಬ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.