Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೊರೆನೂರು, ಶಿರಂಗಾಲದಲ್ಲಿ ಸಂಭ್ರಮದ ಹೊನ್ನಾರು ಉತ್ಸವ  : ಉಳುಮೆ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೊರೆನೂರು, ಶಿರಂಗಾಲದಲ್ಲಿ ಸಂಭ್ರಮದ ಹೊನ್ನಾರು ಉತ್ಸವ  : ಉಳುಮೆ ಆರಂಭ*

ಏಪ್ರಿಲ್ 2, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಏ.2 NEWS DESK :   ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಹಾರಂಗಿ ನೀರಾವರಿ ಅಚ್ಚುಕಟ್ಟು ಪ್ರದೇಶದ ತೊರೆನೂರು, ಶಿರಂಗಾಲ, ಹುಲುಸೆ, ಮಣಜೂರು, ಕೂಡ್ಲೂರು ಮುಂತಾದ ಗ್ರಾಮಗಳಲ್ಲಿ  ನಡೆದ ಹೊಸ ವರ್ಷದ ಆರಂಭ ದಿನವಾದ ಯುಗಾದಿ ಹಬ್ಬದ ಸಂದರ್ಭದಲ್ಲಿ ರೈತರು ಜಾನುವಾರುಗಳೊಂದಿಗೆ ಹೊನ್ನಾರು ಉತ್ಸವದ ಮೂಲಕ ಹೊನ್ನಾರು (ಚಿನ್ನದ ಉಳುಮೆ) ಉಳುಮೆ ಆರಂಭಿಸಿದರು.  ಹೊಸ ಪಂಚಾಂಗದ ಪ್ರಕಾರ ತೊರೆನೂರು ಗ್ರಾಮದಲ್ಲಿ ರೈತ ಟಿ.ಎಸ್.ಗಣೇಶ್ ಹಾಗೂ ಶಿರಂಗಾಲ ಗ್ರಾಮದಲ್ಲಿ ಗಂಗಾ ಎಂಬ ರೈತ ಆಯಾ ಗ್ರಾಮದ ದೇವರ ಜಮೀನಿನಲ್ಲಿ ಮೊದಲ ಉಳುಮೆ ಆರಂಭಿಸಿದರು. ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಬಯಲುಸೀಮೆಯ ಹಾರಂಗಿ ನೀರಾವರಿ ಅಚ್ಚುಕಟ್ಟು ಪ್ರದೇಶದ ತೊರೆನೂರು,  ಶಿರಂಗಾಲ, ಹುಲುಸೆ, ಕೂಡ್ಲೂರು ಗ್ರಾಮಗಳಲ್ಲಿ ಭಾನುವಾರ ( ಮಾರ್ಚ್ 30 ರಂದು )  ನೂತನ ಸಂವತ್ಸರ ಹೊಸ ವರ್ಷ ಯುಗಾದಿ ಹಬ್ಬದ ಅಂಗವಾಗಿ ರೈತರು  ಗ್ರಾಮೀಣ  ಜನಪದ ಸಂಸ್ಕೃತಿಯ ಪ್ರತೀಕವಾದ ಹೊನ್ನಾರು ಉತ್ಸವ (ಚಿನ್ನದ ಉಳುಮೆ)ವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಯುಗಾದಿ ಹಬ್ಬವು ಗ್ರಾಮೀಣ ಪ್ರದೇಶದ ರೈತರ ಪಾಲಿಗೆ ಹೊಸ ಸಂವತ್ಸರ ಹೀಗಾಗಿ ಹಬ್ಬದ ಸಂದರ್ಭದಲ್ಲಿ ಹೊನ್ನಾರು ಉತ್ಸವವನ್ನು ಆಚರಿಸಲಾಗುತ್ತದೆ. ಈ ಸಂದರ್ಭ ರೈತಾಪಿ ವರ್ಗವು ಹೊಸ ಪಂಚಾಂಗದ ಪ್ರಕಾರ ಹೊನ್ನಾರು ಉತ್ಸವವನ್ನು ಸಾಂಪ್ರಾದಾಯಿಕವಾಗಿ ಆಚರಿಸುವುದು ರೂಢಿಯಾಗಿ ಬೆಳೆದುಬಂದಿದೆ. ಉತ್ಸವದ ದಿನ ಮುಂಜಾನೆ ರೈತರು ತಮಗೆ ಸೇರಿದ ಎತ್ತು ಹಾಗೂ ದನಕರುಗಳಿಗೆ ನದಿಯ ನೀರಿನಿಂದ ತೊಳೆದು ಅವುಗಳ ಗವುಸು ಹಾಗೂ ಕೊಂಬಿಗೆ ಹಣಸು ವಸ್ತ್ರಾಂಲಕಾರದಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ರೈತರು ಹೊಸ ಉಡುಗೆ-ತೊಡಿಗೆ ತೊಟ್ಟು ತಮ್ಮ ಕೃಷಿ ಪರಿಕರಗಳಾದ ನೇಗಿಲು, ನೊಗ, ಎತ್ತಿನಗಾಡಿಯೊಂದಿಗೆ ಹತ್ಯಾರುಗಳನ್ನು ಒಪ್ಪವಾಗಿ ಜೋಡಿಸಿ ಪೂಜೆ ಸಲ್ಲಿಸಿದರು. ಉತ್ಸವದ ಅಂಗವಾಗಿ ಹೋಳಿಗೆ, ಪಾಯಿಸ ಮತ್ತಿತರ ಭಕ್ಷ್ಯ ಭೋಜನವನ್ನು ತಯಾರಿಸಿ ತಮ್ಮ ಜಾನುವಾರುಗಳಿಗೆ ತಿನ್ನಿಸಿ, ತಾವು ಸೇವಿಸಿ ಸಂಭ್ರಮಿಸಿದರು.

ರೈತರಿಂದ ಹೊನ್ನಾರು ಉಳುಮೆ: ತೊರೆನೂರು ಗ್ರಾಮದ ಬಸವೇಶ್ವರ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರೆಲ್ಲ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ಸೇರಿ, ಜಾನುವಾರುಗಳಿಗೆ ಸಾಮೂಹಿಕ ಪೂಜೆ ಸಲ್ಲಿಸುವ ಮೂಲಕ ಈಡುಗಾಯಿ ಹಾಕಿ ಹೊನ್ನಾರು ಉಳುಮೆಗೆ ಸಿದ್ಧತೆ ನಡೆಸಿದರು. ಹೊಸ ಪಂಚಾಂಗದಂತೆ ಗ್ರಾಮದ ರೈತ ಟಿ.ಎಸ್.ಗಣೇಶ್ ಎಂಬವರು  ಅವರು ನೇಗಿಲು ಮತ್ತು ಭೂಮಿಗೆ ಪೂಜೆ ಸಲ್ಲಿಸಿ ಹೊನ್ನಾರು (ಚಿನ್ನದ ಉಳುಮೆ) ಹೂಡಿ ವರ್ಷಧಾರೆ ಉಳುಮೆಗೆ ಚಾಲನೆ ನೀಡಿದರು. ದೇವಸ್ಥಾನದ ಅರ್ಚಕ ಟಿ.ಎಲ್.ಸೋಮಶೇಖರ್ ಭೂಮಿ ಪೂಜೆ ನಡೆಸಿದರು. ರೈತರು ಮೊದಲು  ಬಸವೇಶ್ವರ ದೇವಸ್ಥಾನದ ಜಮೀನಿನಲ್ಲಿ ಉಳುಮೆ ಆರಂಭಿಸಿದರು. ಹೊನ್ನಾರುಗಳು ಗ್ರಾಮದ ಬಸ್ ನಿಲ್ದಾಣದ ಬಳಿಯಿರುವ ಬಸವೇಶ್ವರ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ನಂತರ ರೈತ ಗಣೇಶ್  ಅವರನ್ನು ಹಿಂಬಾಲಿಸುವ ಮೂಲಕ ಉಳುಮೆ ಆರಂಭಿಸಿ ಈ ವರ್ಷ ಉತ್ತಮ ಮಳೆ ಬೆಳೆಯಾಗಲಿ  ಎಂದು ಪ್ರಕೃತಿಯನ್ನು ಪೂಜಿಸಿ ಸಂಭ್ರಮಿಸಿದರು. ನಂತರ ರೈತರು ತಮ್ಮ ತಮ್ಮ ಜಮೀನಿಗೆ ತೆರಳಿ ಉಳುಮೆ ಆರಂಭಿಸಿದರು.  ಉತ್ತರ ಕೊಡಗಿನ ಶಿರಂಗಾಲ, ತೊರೆನೂರು, ಹೆಬ್ಬಾಲೆ, ಮಣಜೂರು, ಕೂಡಿಗೆ, ಮದಾಲಪುರ, ಹುಲುಸೆ, ಭುವನಗಿರಿ, ಮೊದಲಾದ ಗ್ರಾಮಗಳಲ್ಲಿ ಜನಪದ ಸಂಸ್ಕೃತಿಯ ಹೊನ್ನಾರು ಉತ್ಸವವನ್ನು ಹಿಂದಿನ ಕಾಲದಿಂದಲೂ ನಡೆಸಿಕೊಂಡು ಬರಲಾಗುತ್ತಿದೆ.  ಯುಗಾದಿ ಹಬ್ಬದ ಅಂಗವಾಗಿ ಗ್ರಾಮವನ್ನು ಹಸಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಮಹಿಳೆಯರು ಮನೆ ಮುಂದೆ ಹಾಕಿದ್ದ ರಂಗೋಲಿ ಗಮನ ಸೆಳೆಯಿತು. ತೊರೆನೂರು ಗ್ರಾಮದಲ್ಲಿ ನಡೆದ ಹೊನ್ನಾರು ಆಚರಣೆಯಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಬಿ.ಜಗದೀಶ್, ಗೌರವಾಧ್ಯಕ್ಷ ಟಿ.ಡಿ.ಈಶ್ವರ್, ಉಪಾಧ್ಯಕ್ಷ ಟಿ.ಬಿ.ಚಿದಾನಂದ, ಕಾರ್ಯದರ್ಶಿ ಟಿ.ಎಲ್.ಮಹೇಶ್ ಕುಮಾರ್, ಸಾಹಿತಿ ಡಾ ಜೆ.ಸೋಮಣ್ಣ,  ತಾಲ್ಲೂಕು ‌ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ  ಟಿ.ಜಿ.ಪ್ರೇಮಕುಮಾರ್,  ಗ್ರಾ.ಪಂ.ಸದಸ್ಯ, ಟಿ.ಸಿ.ಶಿವಕುಮಾರ್, ಜನಪದ ಕಲಾವಿದ ಭರಮಣ್ಣ ಬೆಟಗೇರಿ, ದೇವಾಲಯ ಸಮಿತಿ ಸದಸ್ಯರಾದ  ಟಿ.ಎಸ್.ತೋಟೇಶ್,  ಟಿ.ಜಿ.ಶಿವಣ್ಣ, ಟಿ.ಕೆ.ವಸಂತ, ಟಿ.ಎಂ.ಜಗದೀಶ್, ಟಿ.ಆರ್.ಧರ್ಮ, ಟಿ.ಎಸ್.ಪ್ರಕಾಶಚಾರಿ, , ಟಿ.ಜಿ.ಮಹೇಶ, ಟಿ.ಬಿ.ಮಂಜುನಾಥ್, ಟಿ.ಎಚ್.ಗಣೇಶ್, ಶಿರಂಗಾಲ ಗ್ರಾಮದಲ್ಲಿ ನಡೆದ ಹೊನ್ನಾರು ಉತ್ಸವದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್, ಉಪಾಧ್ಯಕ್ಷ ಎಸ್.ಜೆ.ಉಮೇಶ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಪದಾಧಿಕಾರಿಗಳಾದ ಎಸ್.ಆರ್.ಕಾಳಿಂಗಪ್ಪ, ಬಸವಣ್ಣಯ್ಯ, ಎಸ್.ಕೆ.ಪ್ರಸನ್ನ, ಮಹೇಶ್ ಕುಮಾರ್, ಎಸ್.ಆರ್.ಶಿವಲಿಂಗ ಇತರರು ಇದ್ದರು. ತೊರೆನೂರು ಗ್ರಾಮದಲ್ಲಿ ನಡೆದ ಹೊನ್ನಾರು ಉತ್ಸವದಲ್ಲಿ ಪಾಲ್ಗೊಂಡಿದ್ದ ಸಾಹಿತಿ ಡಾ ಜೆ.ಸೋಮಣ್ಣ ಮಾತನಾಡಿ, ಎತ್ತುಗಳ ಬದಲಿಗೆ ಯಂತ್ರವನ್ನು ಬಳಸುವ ಇಂದಿನ ಆಧುನಿಕ ಯುಗದಲ್ಲಿಯೂ ರೈತರು ಹಬ್ಬವನ್ನು ಆಚರಿಸುವ ಮೂಲಕ ನಮ್ಮ ಸಂಸ್ಕೃತಿ ಸಂಪ್ರದಾಯದ ಉಳಿವಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಅಭಿಪ್ರಾಯಪಟ್ಟರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅದ್ಯಕ್ಷ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪೂರ್ವಿಕರು ಮೊದಲಿನಿಂದಲೂ ಅನುಸರಿಸಿಕೊಂಡು ಬರುತ್ತಿರುವ ಜನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹೊನ್ನಾರು ಉತ್ಸವವು ಗ್ರಾಮೀಣ ಸಂಸ್ಕೃತಿಯ ಪ್ರತೀಕವಾಗಿದೆ. ಈ ಸಂಸ್ಕೃತಿಯನ್ನು ಉಳಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದರು. ದೇವಾಲಯ ಸಮಿತಿ ಅಧ್ಯಕ್ಷ ಟಿ.ಬಿ.ಜಗದೀಶ್ ಮಾತನಾಡಿ, ಯುಗಾದಿ ಸಂದರ್ಭದಲ್ಲಿ ರೈತರು ಹೊನ್ನಾರು ಮೂಲಕ ಜಮೀನಿನಲ್ಲಿ ಕೃಷಿ ಚಟುವಟಿಕೆಯ ಮೊದಲು ಉಳುಮೆಯನ್ನು ಆರಂಭಿಸುವ ಮೂಲಕ ಕೃಷಿ ಕಾರ್ಯಕ್ಕೆ ಮುನ್ನುಡಿ ಬರೆಯುವುದು ಮೊದಲಿನಿಂದಲೂ ‌ನಡೆದುಕೊಂಡು ಬಂದ ಪದ್ಧತಿಯಾಗಿದೆ. ನಂತರ ರೈತರು ತಮ್ಮ ಜಮೀನಿನಲ್ಲಿ ಉಳುಮೆ ಆರಂಭಿಸುವ ಮೂಲಕ ಈ ವರ್ಷ ಉತ್ತಮ ಮಳೆ – ಬೆಳೆಯಾಗಿ ದೇಶವು ಸುಭಿಕ್ಷೆಯಿಂದ ಕೂಡಿರಲಿ ಎಂದು ಪ್ರಾರ್ಥಿಸುತ್ತಾರೆ ಎಂದರು. ಜಾನಪದ ಕಲಾವಿದ ಭರಮಣ್ಣ ಬೇಟಗೇರಿ ಮಾತನಾಡಿ , ಈ ಗ್ರಾಮದಲ್ಲಿ ರೈತರು ಜತೆಗೂಡಿ ಹೊನ್ನಾರು ಉತ್ಸವ ಆಚರಿಸುತ್ತಿರುವುದು ಮಾದರಿಯಾದುದು ಎಂದರು. ಸಮಿತಿಯ ಕಾರ್ಯದರ್ಶಿ ಟಿ.ಎಲ್.ಮಹೇಶ್ ಕುಮಾರ್ ಮಾತನಾಡಿ, ಪೂರ್ವಿಕರು ನಡೆಸಿಕೊಂಡು ಬಂದಿರುವ ಹೊನ್ನಾರು ಉತ್ಸವವನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸಲಾಗುತ್ತಿದೆ ಎಂದರು. ಜಾನಪದ ಕಲಾವಿದ ಭರಮಣ್ಣ ಬೇಟಗೇರಿ ಮಾತನಾಡಿ , ಈ ಗ್ರಾಮದಲ್ಲಿ ರೈತರು ಜತೆಗೂಡಿ ಹೊನ್ನಾರು ಉತ್ಸವ ಆಚರಿಸುತ್ತಿರುವುದು ಮಾದರಿಯಾದುದು ಎಂದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಮಧ್ಯ ಪ್ರಾಚ್ಯ ಯುದ್ಧದ ಕಾರಣದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ನ ಸರಬರಾಜಿನಲ್ಲಿ…

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.