Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*
  • *ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*
  • *ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ : ಭಾರತದ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಅಗತ್ಯ : ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅಭಿಮತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶೂನ್ಯ ಬಡ್ಡಿ ದರದಲ್ಲಿ ಸಾಲ : ನಿಯಮ ಸಡಿಲಿಸಲು ಚೆಟ್ಟಳ್ಳಿ ಸಹಕಾರ ಸಂಘ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶೂನ್ಯ ಬಡ್ಡಿ ದರದಲ್ಲಿ ಸಾಲ : ನಿಯಮ ಸಡಿಲಿಸಲು ಚೆಟ್ಟಳ್ಳಿ ಸಹಕಾರ ಸಂಘ ಒತ್ತಾಯ*

ಏಪ್ರಿಲ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.3 NEWS DESK :  ‘ಶೂನ್ಯ’ ಬಡ್ಡಿದರದ ಕೃಷಿ ಸಾಲ ವಿತರಣೆಗೆ ಸರ್ಕಾರದ ‘ಸಿಂಗಲ್ ಆರ್‍ಟಿಸಿ’ ಷರತ್ತು ತೊಡಕಾಗಿ ಪರಿಣಮಿಸಿದ್ದು, ಇದನ್ನು ಸರಳೀಕರಿಸಿ, ಕೃಷಿಕ ಬಾಂಧವರಿಗೆಲ್ಲ ಸಾಲ ಸೌಲಭ್ಯ ದೊರಕುವಂತೆ ಮಾಡಬೇಕೆಂದು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದ ಸಾಲ ವಿತರಣೆಗೆ ಸಿಂಗಲ್ ಆರ್‍ಟಿಸಿ, ಅಂದರೆ ಒಬ್ಬರ ಹೆಸರಿನಲ್ಲೆ ಮಾತ್ರ ಇರುವ ಆರ್‍ಟಿಸಿಯನ್ನಷ್ಟೆ ಪರಿಗಣಿಸಬೇಕೆನ್ನುವ ಆದೇಶವನ್ನು ಸರ್ಕಾರ 2021ರಲ್ಲೆ ಹೊರಡಿಸಿತ್ತು. ಹೀಗಿದ್ದೂ ಕಳೆದ ಸಾಲಿನವರೆಗೂ ನಿಯಮಗಳ ಸರಳೀಕರಣದ ಹಿನ್ನೆಲೆ ಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಸಾಲವನ್ನು ಒದಗಿಸಲಾಗಿದೆ. ಆದರೆ, ಈ ಸಾಲಿನಲ್ಲಿ ಸಿಂಗಲ್ ಆರ್‍ಟಿಸಿಯನ್ನು ಕಡ್ಡಾಯ ಗೊಳಿಸಿರುವುದು ಸಹಕಾರ ಸಂಘದಿಂದ ಸಾಲ ವಿತರಣೆಗೆ ತೊಡಕನ್ನು ಉಂಟುಮಾಡುತ್ತಿದೆಯೆಂದು ಕಳವಳ ವ್ಯಕ್ತಪಡಿಸಿದರು. ಜಂಟಿ ಖಾತೆಯ ತೊಡಕು :: ಕೊಡಗು ಜಿಲ್ಲೆಯಲ್ಲಿ ಈ ಹಿಂದಿನಿಂದಲೂ ಆಸ್ತಿಗಳು ‘ಜಂಟಿ ಖಾತೆ’, ಅಂದರೆ ಒಂದು ಜಾಗದ ಆರ್‍ಟಿಸಿಯಲ್ಲಿ ಕುಟುಂಬದ ಹಲವರ ಹೆಸರು ಇರುವಂತದ್ದೆ ಆಗಿದೆ. ಪ್ರಸ್ತುತ ಇಂತಹ ಆರ್‍ಟಿಸಿ ಹೊಂದಿರುವವರು ತಮ್ಮೊಬ್ಬರದೇ ಹೆಸರಿನ ಆರ್‍ಟಿಸಿಯನ್ನು ಮಾಡಿಕೊಂಡಲ್ಲಿ ಮಾತ್ರ ಸಾಲ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ. ಆದರೆ, ಒಂದು ಆರ್‍ಟಿಸಿಯಲ್ಲಿರುವ ಕುಟುಂಬದ ಹಲವಷ್ಟು ಮಂದಿಯನ್ನು ಕಲೆ ಹಾಕಿ, ಜಾಗದ ಪಾಲು ಪಾರಿಕತ್ತು ಮಾಡಿಕೊಂಡು ಸಿಂಗಲ್ ಆರ್‍ಟಿಸಿ ಮಾಡಿಕೊಳ್ಳುವುದ ಕಷ್ಟಸಾಧ್ಯವಲ್ಲ, ಬದಲಾಗಿ ಸಾಧ್ಯವೇ ಆಗದ ಪರಿಸ್ಥಿತಿ ಇರುವುದಾಗಿ ಸಮಸ್ಯೆಯ ಜಟಿಲತೆಯನ್ನು ವಿವರಿಸಿದರು. ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವ್ಯಾಪ್ತಿಯ ಕೃಷಿಕ ಸದಸ್ಯರಿಗೆ ಇಲ್ಲಿಯವರೆಗೆ ಅವರು ಜಂಟಿ ಖಾತೆಯನ್ನು ಹೊಂದಿಕೊಂಡಿದ್ದರು ಶೂನ್ಯ ಬಡ್ಡಿ ದರದ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಪ್ರಸ್ತುತ ಷರತ್ತನ್ನು ಕಡ್ಡಾಯ ಮಾಡಿರುವುದರಿಂದ ತಮ್ಮ ಸಹಕಾರ ಸಂಘದಿಂದ ಶೇ.70 ಕ್ಕೂ ಹೆಚ್ಚಿನ ಬೆಳೆಗಾರರಿಗೆ ಈ ಬಾರಿ ಶೂನ್ಯ ಬಡ್ಡಿ ದರದ ಸಾಲ ಸೌಲಭ್ಯ ದೊರಕದ ಪರಿಸ್ಥಿತಿ ಇರುವುದಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 530 ಕೃಷಿಕ ಸದಸ್ಯರಿಗೆ ಶೂನ್ಯ ಬಡ್ಡಿದರದ ಸಾಲವನ್ನು ವಿತರಿಸಲಾಗಿತ್ತು ಮತ್ತು ತಮ್ಮ ಸಂಘದ ಸಾಲ ವಸೂಲಾತಿ ಶೇ.100 ರಷ್ಟಿದೆ. ಹೀಗಿದ್ದೂ ಸರಕಾರದ ‘ಸಿಂಗಲ್ ಆರ್‍ಟಿಸಿ’ ಷರತ್ತಿನಿಂದಾಗಿ ಈ ಬಾರಿ ಸುಮಾರು 350 ಮಂದಿ ಶೂನ್ಯ ಬಡ್ಡಿ ದರದ ಸಾಲ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ಇರುವುದಾಗಿ ಆತಂಕ ವ್ಯಕ್ತಪಡಿಸಿದರು. ಎಲ್ಲಾ ಸಹಕಾರ ಸಂಘಗಳಿಗೆ ತಲೆ ನೋವು- ಸರ್ಕಾರದ ಸಿಂಗಲ್ ಆರ್‍ಟಿಸಿ ಷರತ್ತಿನ ಸಂಕಷ್ಟವನ್ನು ಎಲ್ಲಾ ಸಹಕಾರ ಸಂಘಗಳು ಎದುರಿಸಲೇಬೇಕಾಗಿದೆ. ಈ ಹಿನ್ನೆಲೆ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್‍ಗಳು ಈ ಬಗ್ಗೆ ಗಂಭೀರ ಚಿಂತನೆ ಹರಿಸಿ, ಷರತ್ತಿನ ಸರಳೀಕರಣಕ್ಕೆ ಅಗತ್ಯ ಕ್ರಮಕ್ಕೆ ಮುಂದಾಗಬೇಕೆಂದು ಬಲ್ಲಾರಂಡ ಮಣಿ ಉತ್ತಪ್ಪ ಒತ್ತಾಯಿಸಿದರು. ಕೃಷಿಕರ ಕೃಷಿ ಚಟುವಟಿಕಗೆಳಿಗೆ ಆರ್ಥಿಕ ನೆರವನ್ನು ಒದಗಿಸುವ ಪ್ರಮುಖ ಗುರಿಯನ್ನು ಹೊಂದಿಕೊಂಡಿರುವ ಸಹಕಾರಿ ಸಂಘಗಳಿಂದ ಸಾಲ ಸೌಲಭ್ಯವನ್ನು ಸಮರ್ಪಕವಾಗಿ ವಿತರಣೆ ಮಾಡಲು ಸಾಧ್ಯವಾಗದಿದ್ದಲ್ಲಿ ಅದು ಸಹಕಾರ ಸಂಘಗಳ ಮೇಲೆ ಮತ್ತು ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದಾಗಿ ಆತಂಕ ವ್ಯಕ್ತಪಡಿಸಿದರು. ಸಿಂಗಲ್ ಆರ್‍ಟಿಸಿ ಸಮಸ್ಯೆಯಿಂದ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಶೂನ್ಯ ಬಡ್ಡಿದರದ ಸಾಲ ಸೌಲಭ್ಯವನ್ನು ಅಗತ್ಯವಿರುವವರಿಗೆ ನೀಡಲು ಸಾಧ್ಯವಾಗದಿದ್ದಲ್ಲಿ, ಸಹಕಾರಿ ಸಂಘದ ಸ್ವಂತ ಬಂಡವಾಳವನ್ನು ಆಧರಿಸಿ ಸಾಲ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ.ಆದರೆ, ಇದಕ್ಕೆ ಬಡ್ಡಿಯನ್ನು ಕೃಷಿಕರು ಪಾವತಿಸಬೇಕಾಗುತ್ತದೆಂದು ಸ್ಪಷ್ಟಪಡಿಸಿದರು. ವರ್ಷದ ಅವಧಿಗಾದರು ಷರತ್ತು ಮುಂದೂಡಿ- ಸಾಲ ವಿತರಣೆಯ ಸಮಸ್ಯೆಯಿಂದ ರೈತ ಸದಸ್ಯರೊಂದಿಗೆ ಸಂಘವು ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದರಿಂದ ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಸಾಲ ವಿತರಿಸಲು ಇರುವ ಷರತ್ತುಗಳನ್ನು ಒಂದು ವರ್ಷದ ಮಟ್ಟಿಗೆ ಸಡಿಲಗೊಳಿಸಿ, ಸರ್ಕಾರದ ಗಮನಕ್ಕೆ ತಂದು 2025-26ನೇ ಸಾಲಿಗೆ ಸಾಲ ವಿತರಿಸಲು ಅನ್ವಯವಾಗುವಂತೆ ಸಹಕರಿಸಿ ಸಂಘಗಳ ಹಾಗೂ ರೈತರ ಹಿತ ಕಾಪಾಡುವಂತೆ ಮನವಿ ಮಾಡಿದರು. ಗೋಷ್ಠಿಯಲ್ಲಿ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಪೇರಿಯನ ಪೂಣಚ್ಚ, ನಿರ್ದೇಶಕರುಗಳಾದ ಬಿ.ಎಂ. ಕಾಶಿ, ಅಕ್ಕಾರಿ ದಯಾನಂದ, ಕೊಂಗೇಟಿರ ವಾಣಿ ಕಾಳಪ್ಪ, ಮುಳ್ಳಂಡ ಮಾಯಮ್ಮ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.28 NEWS DESK : ಹಿಂದೂ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕೃತ್ಯಗಳನ್ನು ಖಂಡಿಸಿ ಏ.1 ರಂದು ನಾಪೋಕ್ಲುವಿನಲ್ಲಿ…

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026

*ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*

ಮಾರ್ಚ್ 28, 2026

*ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ : ಭಾರತದ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಅಗತ್ಯ : ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅಭಿಮತ*

ಮಾರ್ಚ್ 28, 2026

*ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಗಮನಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.