Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರಗೋಡಿನಲ್ಲಿ ಯುಗಾದಿ ಆಟೋಟ ಸ್ಪರ್ಧೆಯ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರಗೋಡಿನಲ್ಲಿ ಯುಗಾದಿ ಆಟೋಟ ಸ್ಪರ್ಧೆಯ ಸಂಭ್ರಮ*

ಏಪ್ರಿಲ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.3 NEWS DESK : ಯುಗಾದಿ ಹಬ್ಬದ ಪ್ರಯುಕ್ತ ಕಾನಡ್ಕ ಕುಟುಂಬಸ್ಥರ ಆಶ್ರಯದಲ್ಲಿ 11ನೇ ವರ್ಷದ ಆಟೋಟ ಸ್ಪರ್ಧೆಯು ಮರಗೋಡಿನ ಕುಟುಂಬದ ಐನ್ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮರಗೋಡು ಗೌಡ ಫುಟ್‍ಬಾಲ್ ಅಕಾಡೆಮಿ ಅಧ್ಯಕ್ಷ ಬಡುವಂಡ್ರ ಸುಜಯ್ ಉದ್ಘಾಟಿಸಿ, ಮಾತನಾಡಿ ಯುಗಾದಿ ಹಬ್ಬದ ಪ್ರಯುಕ್ತ ಇಂತಹ ಕಾರ್ಯಕ್ರಮಗಳನ್ನು ನಡೆಸುವುದರಿಂದ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡಿದಂತಾಗುತ್ತದೆ. ಕ್ರೀಡೆ ಎಲ್ಲರನ್ನು ಒಗ್ಗೂಡಿಸುವುದಲ್ಲದೆ ಕುಟುಂಬದಲ್ಲಿ ಶಾಂತಿ, ಸಹಬಾಳ್ವೆ ಮೂಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಶಿಕ್ಷಕಿ ಅಂಚೆಮನೆ ದಮಯಂತಿ ದಿನೇಶ್ ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳಿಂದ ಗ್ರಾಮೀಣ ಪ್ರತಿಭೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಬೆಳೆಯಬೇಕೆಂದರು. ಕುಟುಂಬದ ಹಿರಿಯರಾದ ಕಾನಡ್ಕ ಉಲ್ಲಾಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖರಾದ ಕಾನಡ್ಕ ನಾಣಯ್ಯ ಉಪಸ್ಥಿತರಿದ್ದರು. ಕಾನಡ್ಕ ರಾಜೇಶ್ವರಿ ಹಾಗೂ ತಂಡ ಪ್ರಾರ್ಥಿಸಿ, ಕಾನಡ್ಕ ಪುನೀತ್ ಸ್ವಾಗತಿಸಿ, ಕಾನಡ್ಕ ಹನೀಶ್ ನಿರೂಪಿಸಿ, ವಂದಿಸಿದರು. ::: ವಿವಿಧ ಕ್ರೀಡೆ ::: ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ಹಿರಿಯರವರೆಗೆ ವಿವಿಧ ವಿಭಾಗಗಳಲ್ಲಿ ಓಟದ ಸ್ಪರ್ಧೆಗಳನ್ನು ನಡೆಸಲಾಯಿತು. ದಂಪತಿಗಳಿಗೆ ಕೃಷ್ಣ ರುಕ್ಮಿಣಿ ಓಟ, ರಾಮಸೀತೆ ಓಟ, ಬಾಲ್ ಬ್ಯಾಲೆನ್ಸ್ ಓಟ, ಹನುಮಂತನ ಓಟ, ಹಗ್ಗಜಗ್ಗಾಟ ಸ್ಪರ್ಧೆ ಸೇರಿದಂತೆ ಸುಮಾರು 20 ಬಗೆಯ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕುಟುಂಬದ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ::: ಸಮಾರೋಪ ::: ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಆಕಾಶವಾಣಿಯ ಸುದ್ದಿವಾಚಕ ಉಳುವಾರ ರೋಶನ್ ವಸಂತ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಆಟೋಟಗಳು ಮರೆಯಾಗುತ್ತಿವೆ ಇವುಗಳನ್ನು ಉಳಿಸಿಕೊಂಡು ಹೋಗುವುದರೊಂದಿಗೆ ನಮ್ಮ ಸಂಸ್ಕೃತಿ ಪರಂಪರೆ, ಆಚಾರ, ವಿಚಾರಗಳನ್ನು ಬೆಳೆಸಬೇಕು. ಹಬ್ಬಗಳನ್ನು ಆಚರಿಸುವುದು ಮಾತ್ರವಲ್ಲ, ಅವುಗಳ ಹಿನ್ನೆಲೆಯನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಭಾಷೆ ಉಳಿದರೆ ಮಾತ್ರ ಜನಾಂಗ ಉಳಿಯಲು ಸಾಧ್ಯ ಎಂದು ಹೇಳಿದರು. ಉದ್ಯಮಿ ಇಟ್ಟಣಿಕೆ ರಾಮಕೃಷ್ಣ ಮಾತನಾಡಿ, ಹಳ್ಳಿಯಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆಯನ್ನು ನೀಡಬೇಕು. ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿಕೊಂಡು ಮುನ್ನಡೆಯಬೇಕೆಂದರು. ಕಾಫಿ ಬೆಳೆಗಾರ ಪಾಂಡನ ವಿವೇಕಾನಂದ ಮಾತನಾಡಿ, ಕುಟುಂಬ ಒಗ್ಗೂಡಿ ಇಂತಹ ಆಟೋಟ ಸ್ಪರ್ಧೆಗಳನ್ನು ನಡೆಸುವುದರಿಂದ ಒಗ್ಗಟ್ಟು, ಪ್ರೀತಿ, ವಿಶ್ವಾಸ ಹೆಚ್ಚಾಗುತ್ತದೆ ಎಂದು ತಿಳಿಸಿದರು. ಹಿರಿಯರಾದ ಕಾನಡ್ಕ ಚೀರಾಮಣಿ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾನಡ್ಕ ಪ್ರಸಾದ್ ಸ್ವಾಗತಿಸಿ, ಕಾನಡ್ಕ ಹನೀಶ್ ನಿರೂಪಿಸಿ, ಕಾನಡ್ಕ ಪುನೀತ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ…

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.