Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.26 ಮತ್ತು 27 ರಂದು ಮಡಿಕೇರಿಯಲ್ಲಿ ಕುಲಾಲ(ಕುಂಬಾರ) ಸಮಾಜ ಬಾಂಧವರ ಸಮ್ಮಿಲನ : ಕ್ರೀಡೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.26 ಮತ್ತು 27 ರಂದು ಮಡಿಕೇರಿಯಲ್ಲಿ ಕುಲಾಲ(ಕುಂಬಾರ) ಸಮಾಜ ಬಾಂಧವರ ಸಮ್ಮಿಲನ : ಕ್ರೀಡೋತ್ಸವ*

ಏಪ್ರಿಲ್ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.5 NEWS DESK : ಕೊಡಗು ಜಿಲ್ಲಾ ಕುಲಾಲ(ಕುಂಬಾರ) ಸಂಘದ ವತಿಯಿಂದ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕ ಸಹಯೋಗದೊಂದಿಗೆ ಏ.26 ಮತ್ತು 27 ರಂದು ಮಡಿಕೇರಿಯಲ್ಲಿ ಸಮಾಜ ಬಾಂಧವರ ಸಮ್ಮಿಲನ ಮತ್ತು ಕ್ರೀಡೋತ್ಸವ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ ಮೂಲ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬಾರ ಬಾಂಧವರ ಸಂಘಟನೆಗಾಗಿ ಪ್ರಪ್ರಥಮ ಬಾರಿಗೆ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, 1000ಕ್ಕೂ ಅಧಿಕ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು. ಏ.26 ರಂದು ನಗರದ ಮ್ಯಾನ್ಸ್ ಕಾಂಪೌಡ್‍ನ ಕೆಳಗಿನ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡೋತ್ಸವಕ್ಕೆ ಗಣ್ಯರು ಚಾಲನೆ ನೀಡಲಿದ್ದಾರೆ. ಏ.27ರಂದು ಸಂಜೆ 4 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷ ಮುತ್ತಮ್ಮ ಕೋಟಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್‍ಗೌಡ, ಎಂಎಲ್‍ಸಿ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಚಲಚಿತ್ರ ನಟರಾದ ಭುವನ್ ಪೊನ್ನಣ್ಣ, ಹರ್ಷಿಕಾ ಪೂಣಚ್ಚ, ಜಿಲ್ಲಾ ಗ್ರಾಹಕರ ನ್ಯಾಯಾಲಯದ ನ್ಯಾಯಾದೀಶೆ ರೇಣುಕಾಂಬ, ಅಖಿಲ ಭಾರತೀಯ ಗ್ರಾಹಕರ ಕಲ್ಯಾಣ ಪರಿಷತ್ತಿನ ರಾಜ್ಯಾಧ್ಯಕ್ಷ ಎಂ.ಪಿ.ಹರ್ಷ, ಸಂಘದ ಉಪಾಧ್ಯಕ್ಷ ಕೆ.ಕೆ.ದಾಮೋದರ್, ಪ್ರಮುಖರಾದ ಮಯೂರ್ ಉಳ್ಳಾಲ್, ಡಾ.ಮಂಜಪ್ಪ ಶರಣರು, ಕೆ.ಎಂ.ಚಿನ್ನಪ್ಪ, ಎಂ.ಡಿ.ನಾಣಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಂಘದ ಕಾರ್ಯದರ್ಶಿ ಬಿ.ವಿ.ಅರುಣ್ ಕುಮಾರ್ ಮಾತನಾಡಿ, ಪುರುಷರಿಗೆ ಏ.26 ರಂದು 6 ಓವರ್‍ನ ಟೆನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾವಳಿ ಮಾತ್ರ ನಡೆಯಲಿದೆ. ಈಗಾಗಲೇ 10 ತಂಡಗಳು ನೋಂದಾಣಿ ಮಾಡಿಕೊಂಡಿದೆ ಎಂದು ಮಾಹಿತಿ ನೀಡಿದ ಅವರು, ಉಳಿದಂತೆ ಪುರುಷರ ವಿಭಾಗದಲ್ಲಿ ಏ.27 ರಂದು ಹಗ್ಗಜಗ್ಗಾಟ, ಭಾರದ ಗುಂಡು ಎಸೆತ, ಗೋಣಿಚೀಲ ಓಟ, ಮೂರು ಕಾಲಿನ ಓಟ, 100, 200 ಮೀಟರ್ ಓಟ, ವೇಗದ ನಡಿಗೆ, ಬಾಲ್ ಪಾಸಿಂಗ್ ಸ್ಪರ್ಧೆ ನಡೆಯಲಿದೆ. ಮಹಿಳೆಯರ ವಿಭಾಗದಲ್ಲಿ ರಂಗೋಲಿ, ಸಂಗೀತ ಕುರ್ಚಿ, ಹಗ್ಗಜಗ್ಗಾಟ, ಬಾಂಬ್ ಇನ್ ದ ಸಿಟಿ, ನಿಂಬೆ ಚಮಚ, ಸೂಜಿಗೆ ದಾರ ಓಟ ಸೇರಿದಂತೆ ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಆಕರ್ಷಕ ಟ್ರೋಪಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು. ಉಪಾಧ್ಯಕ್ಷ ಕೆ.ಕೆ.ದಾಮೋದರ್ ಮಾತನಾಡಿ, ಕುಂಬಾರ ಕುಲಾಲ ಸಮುದಾಯವು ವೃತ್ತಿ ಮತ್ತು ಸಾಮಾಜಿಕ ಸೇವೆಗಳಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಮುದಾಯವು ಪುರಾತನ ಕಾಲದಿಂದಲೂ ಕುಂಭಕಲೆಯ ಜತೆಗೆ ಜೀವನ ಸಾಗಿಸಿದ್ದು, ರಾಜಮನೆತನಗಳ ಅವಧಿಯಲ್ಲಿ ತಮ್ಮ ವೃತ್ತಿಗೆ ವಿಶೇಷ ಗೌರವ ಪಡೆದಿದೆ. ಇಂದು ಸಮುದಾಯವು ಪ್ರಾಚೀನ ವೃತ್ತಿಯನ್ನು ಉಳಿಸಿಕೊಳ್ಳುವುದರ ಜತೆಗೆ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಹೊಸ ಚಿಂತನೆ ತೋರಿಸುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಖಜಾಂಚಿ ಕೆ.ಎಸ್.ಗಿರೀಶ್, ಮಡಿಕೇರಿ ತಾಲ್ಲೂಕು ಘಟಕದ ಸದಸ್ಯ ಎಂ.ಡಿ.ಸುರೇಶ್, ಮಹಿಳಾ ಘಟಕದ ಸದಸ್ಯೆ ಆಶಾ ದೇವಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.