Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಸಕರಿಬ್ಬರ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಸಕರಿಬ್ಬರ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ*

ಏಪ್ರಿಲ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.5 : ಬಿಜೆಪಿ ಕಾರ್ಯಕರ್ತ ವಿನಯ್ ಅವರ ಆತ್ಮಹತ್ಯಾ ಪ್ರಕರಣ ವಿಷಾದನೀಯ. ಆದರೆ ಈ ಪ್ರಕರಣದಲ್ಲಿ ಯಾವುದೇ ತಪ್ಪು ಎಸಗದ ಕೊಡಗಿನ ಇಬ್ಬರು ಶಾಸಕರನ್ನು ಎಳೆದು ತರುತ್ತಿರುವ ಬಿಜೆಪಿ ನಡೆ ಖಂಡನೀಯವೆಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಾಗೂ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿನಯ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುಃಖಕರ ಬೆಳವಣಿಗೆಯಾಗಿದೆ. ನೋವಿನಲ್ಲಿರುವ ಅವರ ಕುಟುಂಬಕ್ಕೆ ಪಕ್ಷ ಸಾಂತ್ವನ ಹೇಳುತ್ತದೆ. ಆದರೆ ಆತ್ಮಹತ್ಯೆ ಪ್ರಕರಣವನ್ನು ನೆಪಮಾಡಿಕೊಂಡು ಬಿಜೆಪಿ ಮಂದಿ ಶಾಸಕರಿಬ್ಬರ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ ಹಾಗೂ ಬಿಜೆಪಿಯ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಟೀಕಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡಿರುವ ಬಿಜೆಪಿ ಹತಾಶ ಮನೋಭಾವದಿಂದ ಹೊರಬರಲಾಗದೆ ಪ್ರತಿಯೊಂದು ಪ್ರಕಟಣದಲ್ಲೂ ಶಾಸಕರುಗಳನ್ನು ಗುರಿಮಾಡಿ ಪ್ರತಿಭಟನೆಯನ್ನು ನಡೆಸುತ್ತಿದೆ. ವಿನಯ್ ಪ್ರಕರಣದಲ್ಲಿ ವಿನಾಕಾರಣ ಶಾಸಕರಿಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಡ ಹೇರಲಾಗುತ್ತಿದೆ. ಬೆಂಗಳೂರು ಪೊಲೀಸರು ಈಗಾಗಲೇ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಇದು ಪೂರ್ಣಗೊಳ್ಳುವ ಮೊದಲೇ ಶಾಸಕರಿಬ್ಬರನ್ನು ಬಿಜೆಪಿ ಆರೋಪಿಗಳಂತೆ ಪ್ರತಿಬಿಂಬಿಸುತ್ತಿರುವುದು ಖಂಡನೀಯ ಎಂದು ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಅನೇಕ ಅಭಿವೃದ್ಧಿ ಕಾರ್ಯಗಳ ಮೂಲಕ ಜನಸ್ನೇಹಿ ಆಗಿರುವ ಇಬ್ಬರು ಶಾಸಕರನ್ನು ಹೇಗಾದರು ಮಾಡಿ ಮಣಿಸಲೇಬೇಕು ಎನ್ನುವ ದುರುದ್ದೇಶದಿಂದ ಬಿಜೆಪಿಗರು ವಿನಯ್ ಪ್ರಕರಣವನ್ನು ಮುಂದಿಟ್ಟುಕೊಂಡು ಗೂಬೆಕೂರಿಸುವ ಮತ್ತು ತೇಜೋವಧೆ ಮಾಡುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿಯ ಸುಳ್ಳು ಆರೋಪಗಳು ಹಾಗೂ ರಾಜಕೀಯ ಪ್ರೇರಿತ ಪ್ರತಿಭಟನೆಯಿಂದ ಬೆಸತ್ತ ಜಿಲ್ಲೆಯ ಜನ ಕಳೆದ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಿದ್ದಾರೆ. ಆದರೂ ಎಚ್ಚೆತ್ತುಕೊಳ್ಳದ ಬಿಜೆಪಿ ಸಾಲು ಸಾಲು ಪ್ರತಿಭಟನೆಯನ್ನು ನಡೆಸುತ್ತಿದೆ. ಜಿಲ್ಲೆಯ ಪ್ರಜ್ಞಾವಂತ ಜನರು ಬಿಜೆಪಿಯ ಕ್ಷುಲ್ಲಕ ರಾಜಕಾರಣದ ಬಗ್ಗೆ ತಿಳಿದುಕೊಂಡಿದ್ದಾರೆ. ಆದ್ದರಿಂದ ಕಾನೂನಿಗೆ ಪೂರಕವಾಗಿ ಸಾಕ್ಷ್ಯಾಧಾರಗಳ ಸಹಿತ ಆರೋಪ ಮತ್ತು ಟೀಕೆ ಮಾಡುವ ದೊಡ್ಡ ಗುಣವನ್ನು ಬಿಜೆಪಿ ಇನ್ನಾದರೂ ಬೆಳೆಸಿಕೊಳ್ಳಲಿ ಎಂದು ಆರ್.ಪಿ.ಚಂದ್ರಶೇಖರ್ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.