Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ : ಬಾಬು ಜಗಜೀವನ್‍ರಾಂ ಅವರ ಜೀವನ ಆದರ್ಶ ಮೌಲ್ಯಗಳು ಎಲ್ಲರಿಗೂ ಮಾದರಿ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ : ಬಾಬು ಜಗಜೀವನ್‍ರಾಂ ಅವರ ಜೀವನ ಆದರ್ಶ ಮೌಲ್ಯಗಳು ಎಲ್ಲರಿಗೂ ಮಾದರಿ : ಶಾಸಕ ಡಾ.ಮಂತರ್ ಗೌಡ*

ಏಪ್ರಿಲ್ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.5 NEWS DESK : ಬಾಬು ಜಗಜೀವನ್ ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿ, ರಕ್ಷಣಾ ಸಚಿವರಾಗಿ ಉತ್ತಮ ಕೆಲಸ, ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗದ ಹಿತರಕ್ಷಣೆ, ಸಮಾಜದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಗಳನ್ನು ಪ್ರತಿಯೊಬ್ಬರೂ ಸ್ಮರಿಸುವಂತಾಗಬೇಕು ಎಂದು ಡಾ.ಮಂತರ್‍ಗೌಡ ಅವರು ತಿಳಿಸಿದ್ದಾರೆ.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ಸ್ವಾತಂತ್ರ್ಯ ಹೋರಾಟಗಾರರಾಗಿ ಶೋಷಿತರ ಧ್ವನಿಯಾಗಿ, ಮುತ್ಸದ್ದಿ ರಾಜಕಾರಣಿಯಾಗಿ ಡಾ.ಬಾಬು ಜಗಜೀವನ್ ರಾಂ ಅವರ ಬದುಕು ಆದರ್ಶ ಮತ್ತು ಮಾದರಿಯಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು.  ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಬಾಬು ಜಗಜೀವನ್ ರಾಂ ಅವರು ಶ್ರಮಿಸಿದ್ದು, ಇಂತಹ ಮಹಾನ್ ನಾಯಕರನ್ನು ಸದಾ ಸ್ಮರಿಸುವಂತಾಗಬೇಕು ಎಂದರು. ಬಾಬು ಜಗಜೀವನ್ ರಾಂ ಅವರು ದೇಶ ಕಂಡ ಮುತ್ಸದ್ದಿ ನಾಯಕರಾಗಿದ್ದು, ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಕೃಷಿ, ರಕ್ಷಣೆ, ಕಾರ್ಮಿಕ, ಹೀಗೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು. ರಾಷ್ಟ್ರದ ಪ್ರಗತಿಯಲ್ಲಿ ಪ್ರತಿಯೊಬ್ಬರ ಪ್ರಗತಿಯಿದೆ ಎಂದು ಹೇಳುತ್ತಿದ್ದ ಬಾಬು ಜಗಜೀವನ್ ರಾಂ ಅವರು ದೇಶಕ್ಕೆ ಮಾದರಿ ಮತ್ತು ಅನುಕರಣೀಯ ರಾಜಕಾರಣಿ ಎಂದು ನುಡಿದರು.   ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಡಾ.ಶ್ರೀಧರ ಹೆಗಡೆ ಅವರು ಮಾತನಾಡಿ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಆದರ್ಶ ಜೀವನ ಮೌಲ್ಯಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಹೇಳಿದರು. ಬಾಬು ಜಗಜೀವನ್ ರಾಂ ಅವರು ಬಿಹಾರದಲ್ಲಿ ಬಡ ಕುಟುಂಬದಲ್ಲಿ ಜನಿಸಿ ಬಾಲ್ಯ ಜೀವನವನ್ನು ಕಷ್ಟದಿಂದಲೇ ಎದುರಿಸಿದವರು. ತಮ್ಮ ಜೀವನದುದ್ದಕ್ಕೂ ಹೋರಾಟದ ಮೂಲಕ ಬೆಳವಣಿಗೆ ಕಂಡು ರಾಜಕೀಯ ಪ್ರವೇಶ ಮಾಡಿ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಅತ್ಯಂತ ಕಿರಿ ವಯಸ್ಸಿನ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ ಸಾಧನೆ ಬಾಬು ಜಗಜೀವನ್ ರಾಂ ಅವರದ್ದಾಗಿದೆ ಎಂದರು. ಕಾರ್ಮಿಕ ಸಚಿವರಾಗಿ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಹಲವು ಕಾನೂನು ಜಾರಿಗೊಳಿಸುವ ಮೂಲಕ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಜೊತೆಗೆ ಕೃಷಿ ಸಚಿವರಾಗಿ ದೇಶದ ಆಹಾರ ಉತ್ಪಾದನೆ ಅಭಿವೃದ್ಧಿಗೊಳಿಸಿ ಹಸಿರು ಕ್ರಾಂತಿಯ ಹರಿಕಾರನೆಂದು ಜನ ಮನ್ನಣೆಗೆ ಪಾತ್ರರಾಗಿದ್ದಾರೆ. ರೈಲ್ವೆ ಹಾಗೂ ಸಂವಹನ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು ಪ್ರತೀ ಇಲಾಖೆಯ ಸಚಿವರಾದಾಗಲು ತಮ್ಮದೇ ಆದ ಛಾಪು ಮೂಡಿಸಿದ ಕೀರ್ತಿ ಡಾ.ಬಾಬು ಜಗಜೀವನ್ ರಾಂ ಅವರಿಗೆ ಸಲ್ಲುತ್ತದೆ ಎಂದರು. ದೇಶದ ರಕ್ಷಣಾ ಸಚಿವರಾಗಿ ದೇಶದ ಬಾಹ್ಯ ಹಾಗೂ ಆಂತರಿಕ ಭದ್ರತೆಗೆ ಭದ್ರ ಬುನಾದಿ ಹಾಕುವ ಮೂಲಕ ದೇಶದ ಅಭಿವೃದ್ಧಿಗೆ ತಮ್ಮದೇ ಕೊಡುಗೆಯನ್ನು ನೀಡಿದವರು ಎಂದು ಬಾಬು ಜಗಜೀವನ್ ರಾಂ ಅವರ ಆದರ್ಶ ಜೀವನದ ಮೆಲುಕು ಹಾಕಿದರು. ಪ್ರಮುಖರಾದ ಎಚ್.ಎಲ್.ದಿವಾಕರ, ಪ್ರೇಮ ಕೃಷ್ಣಪ್ಪ, ಪ್ರೇಮಕುಮಾರ್, ಮೋಹನ್ ಮೌರ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಸ್ವಾಗತಿಸಿದರು. ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಬಾಲಕೃಷ್ಣ ರೈ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.