Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಾನೂನು ಕ್ರಮಕ್ಕೆ ಬಿಜೆಪಿ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾನೂನು ಕ್ರಮಕ್ಕೆ ಬಿಜೆಪಿ ಆಗ್ರಹ

ಏಪ್ರಿಲ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ NEWS DESK ಏ.6 : ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಇಬ್ಬರು ಶಾಸಕರ ವಿರುದ್ಧ ತಕ್ಷಣ ಎಫ್ ಐ ಆರ್ ದಾಖಲಿಸಿ  ಕಾನೂನು ಕ್ರಮ ಕೈಗೊಳ್ಳಬೇಕು  ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಕುಶಾಲನಗರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವಿನಯ್ ಸೋಮಯ್ಯ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿನಯ್ ಸೋಮಯ್ಯ ಅವರು ಆತ್ಮಹತ್ಯೆಗೆ ಮುನ್ನ ಬರೆದ ಡೆತ್ ನೋಟ್ ನಲ್ಲಿ ಕೆಲವರ ಹೆಸರನ್ನು ಉಲ್ಲೇಖಿಸಿದ್ದು, ಕುಟುಂಬಸ್ಥರು  ದೂರು ನೀಡಿದರೂ ಪೊಲೀಸರು ಸಮರ್ಪಕವಾಗಿ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿ ಕೆಲಸ ನಿರ್ವಹಿಸುತ್ತಿರುವುದು ಇತ್ತೀಚಿನ ಬೆಳವಣಿಗೆಯಾಗಿದೆ. ವಿರೋಧ ಪಕ್ಷಗಳ ಕಾರ್ಯಕರ್ತರ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳಿಗೆ ಲಿಖಿತ ದೂರ ನೀಡಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು. ವಿನಯ್ ಪ್ರಕರಣದ ದೂರಿನಲ್ಲಿ ನೀಡಿರುವಂತೆ ಇಬ್ಬರು ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಿಸದಿದ್ದಲ್ಲಿ ಹೋರಾಟ ಮುಂದುವರಿಯಲಿದೆ ಎಂದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಕೊಡಗು- ಮೈಸೂರು ಲೋಕಸಭಾ ಸದಸ್ಯ ಯದುವೀರ ಒಡೆಯರ್ ಅವರು ಮಾತನಾಡಿ ಬಿಜೆಪಿ ಕಾರ್ಯಕರ್ತನ ಸಾವಿಗೆ ನೇರವಾಗಿ ಹೊಣೆಯಾಗಿರುವವರ ವಿರುದ್ಧ ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ ಕೊಡಗಿನ ಇಬ್ಬರು ಶಾಸಕರ ವಿರುದ್ಧ ವಾಗ್ಧಾಳಿ ನಡೆಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮೈಸೂರು ಶಾಸಕ ಶ್ರೀ ವತ್ಸ, ರವಿಕುಮಾರ್, ಹಾಸನ ಶಾಸಕ ಪ್ರೀತಮ್ ಗೌಡ, ಮೈಸೂರು ಮೇಯರ್ ಶಿವರಾಜ್, ಬಿಜೆಪಿಯ ಮಡಿಕೇರಿ ವಿರಾಜಪೇಟೆ ಸೋಮವಾರಪೇಟೆ, ವಿರಾಜಪೇಟೆ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಇಬ್ಬರು ಶಾಸಕರುಗಳ ಮೇಲೆ ತಕ್ಷಣ ಎಫ್ ಐ ಆರ್ ದಾಖಲಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕುಶಾಲನಗರ ಡಿವೈಎಸ್ಪಿ ಕಚೇರಿಗೆ ಮತ್ತಿಗೆ ಹಾಕಲು  ಪ್ರಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆಗೊಳಿಸಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ ಮುಗಿಲು ಮುಟ್ಟಿದೆ. ಸಂಪ್ರದಾಯದಂತೆ ಪೇಟೆ…

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.