Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮುದ್ದಂಡ ಹಾಕಿ ಉತ್ಸವದಲ್ಲಿ ಪರಿಸರ ಜಾಗೃತಿ : 10 ದಿನಗಳಲ್ಲಿ 2 ಟನ್ ತ್ಯಾಜ್ಯ ಸಂಗ್ರಹ : ಶೂನ್ಯ ತ್ಯಾಜ್ಯ ನಿರ್ವಹಣೆಗೆ ಕೈಜೋಡಿಸಿದ ವೇದನ್ ಟ್ರಸ್ಟ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮುದ್ದಂಡ ಹಾಕಿ ಉತ್ಸವದಲ್ಲಿ ಪರಿಸರ ಜಾಗೃತಿ : 10 ದಿನಗಳಲ್ಲಿ 2 ಟನ್ ತ್ಯಾಜ್ಯ ಸಂಗ್ರಹ : ಶೂನ್ಯ ತ್ಯಾಜ್ಯ ನಿರ್ವಹಣೆಗೆ ಕೈಜೋಡಿಸಿದ ವೇದನ್ ಟ್ರಸ್ಟ್

ಏಪ್ರಿಲ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.8 NEWS DESK : ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಹಬ್ಬದ ಸಂಭ್ರಮದ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಪರಿಸರ ಜಾಗೃತಿಗೆ ಮೊದಲ ಆದ್ಯತೆ ನೀಡಲಾಗಿದೆ. ಹಾಕಿ ಉತ್ಸವ ನಡೆಯುತ್ತಿರುವ ಪ್ರದೇಶದಲ್ಲಿ ಕಳೆದ 10 ದಿನಗಳಲ್ಲಿ 2 ಟನ್ ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್ ಟ್ರಸ್ಟ್ ಕೈಜೋಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಹಾಕಿ ಉತ್ಸವದಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಯ ನಮ್ಮ ವಿನೂತನ ಪ್ರಯತ್ನ ಇಡೀ ಜಿಲ್ಲೆಗೆ ಮಾದರಿಯಾಗಲಿದೆ. ಜನರಲ್ಲಿ ಪರಿಸರದ ಕುರಿತು ಕಾಳಜಿ ಮೂಡಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು.  ಮುದ್ದಂಡ ಹಾಕಿ ಉತ್ಸವ ಆರಂಭಗೊಂಡು 10 ದಿನಗಳೇ ಕಳೆದಿದ್ದು, ಈ ಅವಧಿಯಲ್ಲಿ ವೇದನ್ ಟ್ರಸ್ಟ್ ನ ಸ್ವಯಂ ಸೇವಕರ ಮೂಲಕ 2 ಟನ್ ತ್ಯಾಜ್ಯ ಸಂಗ್ರಹಿಸಲಾಗಿದೆ. ಇದರಿಂದ ಪ್ರಕೃತಿಗೆ ನಾಲ್ಕು ಮರಗಳನ್ನು ಉಳಿಸಿದಷ್ಟು ಲಾಭವಾಗಿದೆ. ಹಾಕಿ ಉತ್ಸವ ಮುಗಿಯುವ ವೇಳೆಗೆ ಸುಮಾರು 10 ಟನ್ ಗೂ ಅಧಿಕ ತ್ಯಾಜ್ಯ ಸಂಗ್ರಹವಾಗುವ ನಿರೀಕ್ಷೆ ಇದೆ. ನಮ್ಮ ಈ ಪ್ರಯತ್ನದಿಂದ ಪರಿಸರಕ್ಕೆ ಸೇರುತ್ತಿದ್ದ ಇಂಗಾಲವು ಎಷ್ಟು ಪ್ರಮಾಣದಲ್ಲಿ ಕಡಿಮೆಯಾಯಿತು ಎನ್ನುವ ಕುರಿತು ಸಂಪೂರ್ಣ ವರದಿಯನ್ನು ಉತ್ಸವ ಮುಗಿದ ನಂತರ ನೀಡುವುದಾಗಿ ತಿಳಿಸಿದರು.  ಬೆಂಗಳೂರಿನ ವೇದನ್ ಟ್ರಸ್ಟ್ ನ ಸದಸ್ಯರು ಹಸಿ ಕಸ ಮತ್ತು ಒಣಕಸವನ್ನು ಬೇರ್ಪಡಿಸಿ ಶೂನ್ಯ ತ್ಯಾಜ್ಯ ನಿರ್ವಹಣೆಯ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಇವರ ಈ ವೈಜ್ಞಾನಿಕ ರೂಪದ ಕಾರ್ಯನಿರ್ವಹಣೆಯನ್ನು ಮಡಿಕೇರಿ ನಗರಸಭೆಯೂ ಅಳವಡಿಸಿಕೊಳ್ಳಬಹುದು ಎಂದು ರಶಿನ್ ಸುಬ್ಬಯ್ಯ ಅಭಿಪ್ರಾಯಪಟ್ಟರು. ವೇದನ್ ಟ್ರಸ್ಟ್ ನ ಪ್ರಮುಖ ಎಸ್.ಸಿ.ಗಣೇಶ್ ಮಾತನಾಡಿ ಪ್ರಕೃತಿ ಸೌಂದರ್ಯದ ಕೊಡಗು ಜಿಲ್ಲೆಯಲ್ಲಿ ಸ್ವಚ್ಛ ಪರಿಸರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಮುದ್ದಂಡ ಹಾಕಿ ಉತ್ಸವದಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಯ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇವೆ ಎಂದರು. ಏಕ ಬಳಕೆಯ ವಸ್ತುಗಳನ್ನು ಬಳಸದೆ ಇರುವುದು ಮತ್ತು ಕಡಿಮೆ ಮಾಡುವುದನ್ನು ಹೇಳಿಕೊಡುತ್ತಿದ್ದೇವೆ. ಹಸಿಕಸ ಮತ್ತು ಒಣಕಸವನ್ನು ಪ್ರತ್ಯೇಕವಾಗಿ ಹಾಕಲು ಚೀಲ ಹಾಗೂ ಡ್ರಮ್ ಗಳನ್ನು ಇಡಲಾಗಿದೆ. ಇದರಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮತ್ತು ನಿರ್ವಹಣೆಯನ್ನು ಮಾಡುತ್ತೇವೆ. ಒಣ ತ್ಯಾಜ್ಯಗಳಾದ ಪ್ಲಾಸ್ಟಿಕ್ ಬಾಟಲಿ, ಕಾಗದದ ತಟ್ಟೆ, ಲೋಟ, ಹರಿದ ಕಾಗದ, ಬಣ್ಣದ ಕಾಗದ, ಹಾಲಿನ ಪ್ಯಾಕೆಟ್, ಟೆಟ್ರಾ ಪ್ಯಾಕೆಟ್, ರಟ್ಟು, ಗಟ್ಟಿ ಪ್ಲಾಸ್ಟಿಕ್, ಸ್ಟ್ರಾಗಳು, ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಕವರ್ ಮತ್ತು ಎಂಎಲ್‍ಪಿಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಮರುಬಳಕೆಗೆ ಕಳುಹಿಸುತ್ತೇವೆ.  ಈ ಶೂನ್ಯ ತ್ಯಾಜ್ಯ ನಿರ್ವಹಣೆಯ ಪರಿಕಲ್ಪನೆ ಮೂಲಕ ಹಾಕಿ ಪ್ರಿಯರಿಗೂ ಪರಿಸರ ಕಾಳಜಿ ಮೂಡಿಸುವುದು ನಮ್ಮ ಉದ್ದೇಶವಾಗಿದೆ. ಪ್ರತಿ ವರ್ಷ ನಡೆಯುವ ಹಾಕಿ ಉತ್ಸವದಲ್ಲಿ ಇದೇ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಬೇಕೆನ್ನುವ ಆಶಯವನ್ನು ನಾವು ಹೊಂದಿದ್ದೇವೆ. ವೇದನ್ ಟ್ರಸ್ಟ್ ಮೂಡಬಿದಿರೆಯ ಕಂಬಳ ಮತ್ತು ಗಣೇಶೋತ್ಸವವನ್ನು ಶೂನ್ಯ ತ್ಯಾಜ್ಯ ಕಾರ್ಯಕ್ರಮವನ್ನಾಗಿ ಮಾಡಿ ಯಶಸ್ವಿಯಾಗಿದೆ. ಬೆಂಗಳೂರಿನ ಶಾಲಾ, ಕಾಲೇಜು ಮತ್ತು ಕಛೇರಿಗಳನ್ನು ಶೂನ್ಯ ತ್ಯಾಜ್ಯ ಆವರಣವನ್ನಾಗಿ ಮಾಡುತ್ತಿದೆ. ಈ ಉತ್ತಮ ಕಾರ್ಯವು ಮಡಿಕೇರಿಯಲ್ಲಿಯೂ ಮುಂದುವರೆಯುತ್ತಿದೆ. ಶೂನ್ಯ ತ್ಯಾಜ್ಯ ಕಾರ್ಯಕ್ರಮ ಯಾಕೆ ಮಾಡಬೇಕು, ಮಾಡಿದರೆ ಏನೆಲ್ಲಾ ಪ್ರಯೋಜನಗಳಾಗುತ್ತವೆ, ಇದರಿಂದ ಪ್ರಕೃತಿಗೆ ಎಷ್ಟು ಲಾಭವಿದೆ, ಎಷ್ಟು ಮರಗಳನ್ನು ಉಳಿಸಿದೆವು ಹಾಗೂ ಪರಿಸರಕ್ಕೆ ಸೇರುತ್ತಿದ್ದ ಇಂಗಾಲವು ಎಷ್ಟು ಪ್ರಮಾಣದಲ್ಲಿ ಕಡಿಮೆಯಾಯಿತು ಎಂಬೆಲ್ಲ ಅಂಕಿ ಅಂಶಗಳ ವರದಿಯನ್ನು ಹಾಕಿ ಉತ್ಸವ ಮುಗಿದ ನಂತರ ನೀಡಲಾಗುವುದು ಎಂದು ಎಸ್.ಸಿ.ಗಣೇಶ್ ತಿಳಿಸಿದರು. ಮುದ್ದಂಡ ಕಪ್ ಹಾಕಿ ಉತ್ಸವದ ಕಾರ್ಯದರ್ಶಿ ಆದ್ಯ ಪೊವಣ್ಣ ಮಾತನಾಡಿ ನಮ್ಮ ಈ ಪ್ರಯತ್ನ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆಯುವ ದೊಡ್ಡ ಕ್ರೀಡೋತ್ಸವ ಮತ್ತು ಸಮಾರಂಭಗಳಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಗೆ ಪ್ರೇರಣೆಯನ್ನು ನೀಡಿದೆ. ಈಗಾಗಲೇ ಹುದಿಕೇರಿಯಲ್ಲಿ ನಡೆಯುತ್ತಿರುವ ಚೆಕ್ಕೇರ ಕ್ರಿಕೆಟ್ ಪಂದ್ಯಾವಳಿಯ ಆಯೋಜಕರೊಂದಿಗೆ ವೇದನ್ ಟ್ರಸ್ಟ್ ನಿಂದ ಮಾತುಕತೆ ನಡೆದಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕೊಡವ ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಹಾಗೂ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಉಪಾಧ್ಯಕ್ಷ ಡೀನ್ ಬೋಪಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.