Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ‘ಜನಾಕ್ರೋಶ ಯಾತ್ರೆ’ : ಬೆಲೆ ಏರಿಕೆಗೆ ವಿರೋಧ, ವಿನಯ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ‘ಜನಾಕ್ರೋಶ ಯಾತ್ರೆ’ : ಬೆಲೆ ಏರಿಕೆಗೆ ವಿರೋಧ, ವಿನಯ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ*

ಏಪ್ರಿಲ್ 9, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.9 NEWS DESK : ನಿತ್ಯೋಪಯೋಗಿ ವಸ್ತುಗಳ ಬೆಲೆ ಹೆಚ್ಚಳ, ಮುಸ್ಲಿಂ ಓಲೈಕೆ, ಪರಿಶಿಷ್ಟರಿಗೆ ಮೀಸಲಾದ ಹಣದ ಲೂಟಿ ಸೇರಿದಂತೆ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ಇಂದು ನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆರೋಪಗಳ ಬೃಹತ್ ‘ಜನಾಕ್ರೋಶ ಯಾತ್ರೆ’ ನಡೆಸಿತು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಎಂಎಲ್‍ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಮಾಜಿ ಎಂಎಲ್‍ಸಿ ಎಸ್.ಜಿ.ಮೇದಪ್ಪ ಅವರುಗಳನ್ನು ಒಳಗೊಂಡಂತೆ ಪ್ರಮುಖರು ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಳೇ ಖಾಸಗಿ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿನಯ್ ಸಾವಿಗೆ ನ್ಯಾಯ ದೊರಕಿಸಲು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮೆರವಣಿಗೆಯ ನಂತರ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಸಭೆಯನ್ನುದ್ದೇಶಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಮುಸ್ಲಿಂ ಸಮುದಾಯದ ವಿರೋಧಿಯಲ್ಲ. ಬದಲಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಹಿತಕ್ಕೋಸ್ಕರ ಮುಸ್ಲಿಮರನ್ನು ಓಲೈಸುವ ತುಷ್ಟೀಕರಣವನ್ನು ಪಕ್ಷ ತೀವ್ರವಾಗಿ ವಿರೋಧಿಸುತ್ತದೆ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಸರ್ಕಾರ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ.4 ರಷ್ಟನ್ನು ಮುಸ್ಲಿಮರಿಗೆ ಮೀಸಲಿರಿಸಿದ್ದು, ಇನ್ನೆಲ್ಲ ಕಾಮಗಾರಿಗಳು ಅವರಿಂದಲೆ ನಡೆಯಲಿದೆ ಎಂದು ಟೀಕಿಸಿದರು. ಮುಸ್ಲಿಂ ಹೆಣ್ಣು ಮಕ್ಕಳ ವಿದೇಶಿ ವ್ಯಾಸಂಗಕ್ಕೆ 30 ಲಕ್ಷವನ್ನು ಸರ್ಕಾರ ಘೋಷಿಸಿದೆ. ಹಿಂದು ಸಮಾಜದಲ್ಲಿ ಬಡ ಹೆಣ್ಣು ಮಕ್ಕಳ ವಿದೇಶಿ ವ್ಯಾಸಂಗಕ್ಕೆ ಅವಕಾಶವಿಲ್ಲವೆ, ಅವರೇನು ಅನ್ಯಾಯ ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಮುಸ್ಲಿಂ ಹೆಣ್ಣು ಮಕ್ಕಳ ವಿವಾಹಕ್ಕೆ 50 ಸಾವಿರ ರೂ. ನೆರವನ್ನು ಸರ್ಕಾರ ಘೋಷಿಸಿದೆ. ಹಿಂದೂ ಸಮಾಜದಲ್ಲಿ ಬಡ ಹೆಣ್ಣು ಮಕ್ಕಳ ಇಲ್ಲವೆ ಎಂದು ವಿಜಯೇಂದ್ರ ಪ್ರಶ್ನಿಸಿದರು. ವಿನಯ್ ಸೋಮಯ್ಯ ಪ್ರಕರಣಕ್ಕೆ ತಡೆಯಾಜ್ಞೆ ಇದ್ದಾಗಲು ಅವರಿಗೆ ಪೊಲೀಸರಿಂದ ಒತ್ತಡ ಬಂದಿದೆ. ಇಂತಹ ಬೆದರಿಕೆಗಳಿಗೆ ಬಿಜೆಪಿ ಕಾರ್ಯಕರ್ತರು ಹೆದರುವ ಅಗತ್ಯವಿಲ್ಲ. ನಾವು ನಿಮ್ಮೊಂದಿಗಿದ್ದೇವೆ, ಪ್ರಾಣ ಕಳೆದುಕೊಳ್ಳುವ ಕೆಲಸ ಎಂದಿಗೂ ಮಾಡಬೇಡಿ ಎಂದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ ಹಿಂದೂಗಳನ್ನು ಒಡೆದು ತಮ್ಮ ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ ಕಾರ್ಯಕರ್ತರು ಪಣತೊಡುವಂತೆ ಕರೆ ನೀಡಿದರು. ಕಾಂಗ್ರೆಸ್ ಸರ್ಕಾರ ಬಂದ ನಂತರ ವಿವಿಧ ಗಲಭೆಗಳಲ್ಲಿ ಪಾಲ್ಗೊಂಡ ಒಂದು ಸಮೂಹದ 1650 ಮಂದಿಯ ವಿರುದ್ಧದ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಮೂಲಕ ಸರ್ಕಾರವೆ ಮತ್ತೆ ಗಲಭೆಗಳಿಗೆ ಹಾದಿ ಮಾಡಿಕೊಟ್ಟಿದೆ ಎಂದು ಆರೋಪಿಸಿದ ಅವರು, ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದರು. ಭ್ರಷ್ಟಾಚಾರ, ಬೆಲೆ ಏರಿಕೆ, ಓಲೈಕೆ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರ ಮುಳುಗಿದ್ದು, ಇದನ್ನು ಜನತೆ ಅರ್ಥ ಮಾಡಿಕೊಂಡು ಕಾಂಗ್ರೆಸ್ ಸಚಿವರು ಹಾಗೂ ಶಾಸಕರು ಜಿಲ್ಲೆಗೆ ಬಂದಾಗ ಛೀಮಾರಿ ಹಾಕಬೇಕೆಂದು ತಿಳಿಸಿದರು. ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳ ಅವಧಿಯಲ್ಲಿ ಗೋ ಹತ್ಯೆ ಪ್ರಕಣಗಳು ಹೆಚ್ಚಾಗಿದೆ. ಮತ್ತೊಂದೆಡೆ ಬೆಲೆ ಹೆಚ್ಚಳದ ಮೂಲಕ ಜನರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವಾಗುತ್ತಿದೆ. ಇಂತಹ ತುಘಲಕ್ ಸರ್ಕಾರ ತೊಲಗಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಆಯ್ಕೆಯಾದ ಇಬ್ಬರು ಶಾಸಕರುಗಳಿದ್ದು, ಇವರುಗಳನ್ನು ವಿನಯ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿಸಬೇಕು ಮತ್ತು ಒಟ್ಟು ಪ್ರಕಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದರು. ಮಾಜಿ ಸಚಿವ ಶ್ರೀರಾಮುಲು ಮಾತನಾಡಿ, ವಿನಯ್ ಅವರ ಸಾವಿಗೆ ನ್ಯಾಯವನ್ನು ಪಡೆದುಕೊಂಡೇ ತೀರುತ್ತೇವೆ. ಮುಂದೆ 2028ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೇ ಬರಲಿದ್ದು, ಆ ಸಂದರ್ಭ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾರಣರಾದವರು ಪಾತಾಳದಲ್ಲಿ ಬಚ್ಚಿಟ್ಟುಕೊಂಡಿದ್ದರು ಹಿಡಿದು ಜೈಲಿನಲ್ಲಿ ಕೂರಿಸುವ ಕೆಲಸ ಮಾಡಿಯೇ ತೀರುವುದಾಗಿ ಹೇಳಿದರು.
ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಮಾತನಾಡಿ, ವಿನಯ್ ಸೋಮಯ್ಯ ಅವರ ಡೆತ್ ನೋಟ್‍ನಲ್ಲಿ ಸೂಚಿಸಿರುವಂತೆ ಜಿಲ್ಲೆಯ ಶಾಸಕರನ್ನು ಪ್ರಕರಣದಲ್ಲಿ ಸೇರಿಸಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ, ಎಸ್‍ಸಿ ಎಸ್‍ಟಿ ಅಭ್ಯುಯದಕ್ಕಾಗಿ ಮೀಸಲಿಟ್ಟ ಹಣದ ದುರ್ಬಳಕೆ, ನೂತನ ವಿವಿಗಳನ್ನು ಮುಚ್ಚುವ ತೀರ್ಮಾನಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡರುಗಳಾದ ರಾಜೇಂದ್ರ, ಉದಯ ಕುಮಾರ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಮುಖರಾದ ರೀನಾ ಪ್ರಕಾಶ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮೈಸೂರು ಶಾಸಕ ಶ್ರೀವತ್ಸ, ಮಾಜಿ ಶಾಸಕ ಪ್ರೀತಂ ಗೌಡ, ಜಿಲ್ಲೆಯ ಪದಾಧಿಕಾರಿಗಳಾದ ಶಾಂತೆಯಂಡ ರವಿ ಕುಶಾಲಪ್ಪ, ಬಿ.ಬಿ.ಭಾರತೀಶ್, ರಾಬಿನ್ ದೇವಯ್ಯ, ನಾಗೇಶ್ ಕುಂದಲ್ಪಾಡಿ, ಕಾಂತಿ ಸತೀಶ್, ಅನಿತಾ ಪೂವಯ್ಯ, ಕಾಂಗೀರ ಸತೀಶ್, ಮಹೇಶ್ ಜೈನಿ, ಬಿ.ಕೆ.ಜಗದೀಶ್, ವಿ.ಕೆ.ಲೋಕೇಶ್, ಉಮೇಶ್ ಸುಬ್ರಮಣಿ, ಅಪ್ರು ರವೀಂದ್ರ, ಸುವಿನ್ ಗಣಪತಿ, ಪಿ.ಎಂ.ರವಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.