Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಭಗವಾನ್ ಮಹಾವೀರ ಅಹಿಂಸಾ ಧರ್ಮದ ಪ್ರವರ್ತಕ : ವಿನಾಯಕ ನರ್ವಾಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : ಭಗವಾನ್ ಮಹಾವೀರ ಅಹಿಂಸಾ ಧರ್ಮದ ಪ್ರವರ್ತಕ : ವಿನಾಯಕ ನರ್ವಾಡೆ

ಏಪ್ರಿಲ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.10 NEWS DESK : ಸಮಾಜದಲ್ಲಿ ಎಲ್ಲರೂ ಬದುಕಬೇಕು, ಹಾಗೆಯೇ ಇತರರನ್ನೂ ಬದುಕಲು ಬಿಡಬೇಕು’ ಎಂಬುದು ಭಗವಾನ್ ಮಹಾವೀರರ ಸಂದೇಶವಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಹೇಳಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಗವಾನ್ ಮಹಾವೀರರು ಅಹಿಂಸಾ ಧರ್ಮದ ಪ್ರವರ್ತಕರಾಗಿದ್ದು, ಸನ್ಮತಿ, ವರ್ಧಮಾನ ಹಾಗೂ ವೀರ ಹೆಸರುಗಳಿಂದ ಮಹಾವೀರರನ್ನು ಕರೆಯುತ್ತಾರೆ ಎಂದು ತಿಳಿಸಿದರು.  ಕ್ರಿ.ಪೂ.6ನೇ ಶತಮಾನದಲ್ಲಿ  ರಾಜಪುತ್ರನಾಗಿ ಜನಿಸಿದರೂ, ಜನ ಕಲ್ಯಾಣಕ್ಕಾಗಿ ರಾಜತ್ವವನ್ನೂ ತ್ಯಾಗಮಾಡಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಭಗವಾನ್ ಮಹಾವೀರರು ಜೀವನ ನಡೆಸಿದರು ಎಂದು ಉಪ ವಿಭಾಗಾಧಿಕಾರಿ ಹೇಳಿದರು.   ಭಗವಾನ್ ಮಹಾವೀರರು ಸತ್ಯ, ಅಹಿಂಸೆ, ಅಪರಿಗ್ರಹ, ಅಸ್ತೇಯ ಮತ್ತು ಬ್ರಹ್ಮಚರ್ಯ ಈ ಪಂಚ ವ್ರತಗಳ ಅನುಷ್ಠಾನದ ಅಡಿಪಾಯ ಹಾಕಿದರು ಎಂದು ಅವರು ವಿವರಿಸಿದರು.  ಅಹಿಂಸೆಯೇ ಪರಮ ಧರ್ಮ ಎಂಬುದು ದಿವ್ಯ ಮಂತ್ರವಾಗಿ ಅಳವಡಿಸಿಕೊಂಡಿದ್ದ ಮಹಾವೀರರು ಅದರಂತೆ ನಡೆದುಕೊಂಡರು ಎಂದು ತಿಳಿಸಿದರು. ಪ್ರತಿಯೊಂದು ಜೀವಿಯೂ  ಸಂತೋಷವಾಗಿರಲು ಬಯಸುತ್ತದೆ. ಯಾವುದೇ ಜೀವಿಯು ನೋವನ್ನು ಬಯಸೋದಿಲ್ಲ ಎಂಬ ಬಗ್ಗೆ ಭಗವಾನ್ ಮಹಾವೀರರು ಒತ್ತಿ ಹೇಳಿದ್ದಾರೆ ಎಂದು ನುಡಿದರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಪುಣ್ಯ ಭೂಮಿಯಲ್ಲಿ ಕಾಲದಿಂದ ಕಾಲಕ್ಕೆ ಅನೇಕ ಪುಣ್ಯರನ್ನು ಕಂಡ ಶ್ರೇಷ್ಠತೆ ಹೊಂದಿದೆ. ಇಂತಹ ನಾಡಿನಲ್ಲಿ ಆಗಿ ಹೋಗಿರುವ ಋಷಿ ಮುನಿಗಳು, ಶರಣರು, ಸಂತರು ಹಾಗೂ ಮಹನೀಯರ ಸಂದೇಶಗಳನ್ನು ಪಾಲನೆ ಮಾಡುವ ಮೂಲಕ ನಾಡನ್ನು ಇನ್ನಷ್ಟು ಪುಣ್ಯಮಯ ಗೊಳಿಸಬೇಕೆಂದು ಹೇಳಿದರು. ಕ್ರಿ.ಪೂ.600 ರಲ್ಲಿ ಬೋಧಿಸಿದ ಮಹಾವೀರರ ತತ್ವಾದರ್ಶಗಳು ಹನ್ನೆರಡನೇ ಶತಮಾನದ ಸ್ಪೂರ್ತಿಯಾಗಿದ್ದರಿಂದಲೇ ಬಸವೇಶ್ವರರು ಕೂಡ ಶಾಂತಿ, ಸಮಾನತೆ ಹಾಗೂ  ಅಹಿಂಸೆಯನ್ನೇ ಬೋಧಿಸಿದರು ಎಂದು ನುಡಿದರು.  ಉಸಿರಾಡುವಾಗ ಕಣ್ಣಿಗೆ ಕಾಣದ ಸೂಕ್ಷ್ಮಾಣು ಜೀವಿಗಳು ನಶಿಸಬಾರದು ಎಂದು ಬಾಯಿಗೆ ಬಟ್ಟೆ ಕಟ್ಟಿ ಉಸಿರಾಡಿದರು. ಸಂಪತ್ತಿನ ಕ್ರೋಢೀಕರಣ ವಿರೋಧಿಸಿದ ಜೈನ ಧರ್ಮೀಯರು, ಸತ್ಯಶೀಲವಾದ ಜೀವನಕ್ಕೆ ಆದ್ಯತೆ ಕೊಟ್ಟರು ಎಂದು ಕೆ.ಎಸ್.ಮೂರ್ತಿ ಹೇಳಿದರು.  ನಿವೃತ್ತ ಶಿಕ್ಷಕ ಬಿ.ಸಿ.ಶಂಕರಯ್ಯ ಮಾತನಾಡಿ, ಮನುಷ್ಯರ ಜೀವನ ಉತ್ತಮವಾಗಲು ರತ್ನತ್ರಯಗಳಾದ ಸಮ್ಯಕ್ ದರ್ಶನ, ಸಮ್ಯಕ್ ಜ್ಞಾನ ಮತ್ತು ಸಮ್ಯಕ್ ಚಾರೊತ್ರ್ಯಗಳನ್ನು ಪಾಲಿಸಬೇಕು ಎಂದಿದ್ದರು ಎಂದು ನುಡಿದರು.  ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಮಾತನಾಡಿ, ಭಗವಾನ್ ಮಹಾವೀರರು ಮನುಷ್ಯನ ಸರಿಯಾದ ನಡವಳಿಕೆಗೆ ಹೆಚ್ಚು ಒತ್ತು ನೀಡಿದ್ದರು ಎಂದು ನುಡಿದರು. ಪ್ರಮುಖರಾದ ಎಚ್.ಎಲ್.ದಿವಾಕರ ಮಹಾವೀರರ ಆದರ್ಶ ಹಾಗೂ ಅಹಿಂಸಾ ತತ್ವಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು, ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು, ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ ಮುಗಿಲು ಮುಟ್ಟಿದೆ. ಸಂಪ್ರದಾಯದಂತೆ ಪೇಟೆ…

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.