Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಿರಂತರ ಅಭ್ಯಾಸದಿಂದ ಪರಿಪೂರ್ಣತೆ ಹೊಂದಲು ಸಾಧ್ಯ : ಮಾಜಿ ಒಲಂಪಿಯನ್ ಎಂ.ಎ.ಸೋಮಯ್ಯ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಿರಂತರ ಅಭ್ಯಾಸದಿಂದ ಪರಿಪೂರ್ಣತೆ ಹೊಂದಲು ಸಾಧ್ಯ : ಮಾಜಿ ಒಲಂಪಿಯನ್ ಎಂ.ಎ.ಸೋಮಯ್ಯ ಸಲಹೆ

ಏಪ್ರಿಲ್ 12, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, ಏ.12 NEWS DESK : ನಿರಂತರ ಅಭ್ಯಾಸದಿಂದ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಪರಿಪೂರ್ಣತೆ ಹೊಂದಲು ಸಾಧ್ಯವೆಂದು ಮಾಜಿ ಒಲಂಪಿಯನ್, ಭಾರತ ತಂಡದ ಮಾಜಿ ನಾಯಕ ಮನೆಯಪಂಡ ಎಂ.ಸೋಮಯ್ಯ ಹೇಳಿದರು. ದಿ. ಸಿ.ವಿ. ಶಂಕರ್ ಸ್ಮರಣಾರ್ಥ ವಾಂಡರರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಕ್ಕಳ ಉಚಿತ ಬೇಸಿಗೆ ಶಿಬಿರಕ್ಕೆ ಆಗಮಿಸಿದ ಅವರು ಶಿಬಿರಾರ್ಥಿಗಳನ್ನು ಕುರಿತು ಮಾತನಾಡಿದರು. ವಾಂಡರರ‍್ಸ್ ಕ್ಲಬ್ ವತಿಯಿಂದ ಏರ್ಪಡಿಸಿರುವ ಈ ಶಿಬಿರದಲ್ಲಿ ಶಿಸ್ತು, ವ್ಯಯಾಮ, ಯೋಗಾಭ್ಯಾಸ ಕೂಡ  ಕಲಿಸಿಕೊಡಲಾಗುತ್ತದೆ. ಇದು ಮಕ್ಕಳನ್ನು ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳಿಸಲು ಸಹಕಾರಿಯಾಗಲಿದೆ. ಕೇವಲ ಒಂದು ತಿಂಗಳ ಅಭ್ಯಾಸದಿಂದ ಪರಿಪೂರ್ಣತೆ ಸಾಧ್ಯವಾಗುವದಿಲ್ಲ. ಶಿಬಿರದ ಬಳಿಕವೂ ಅಭ್ಯಾಸ ಮಾಡಬೇಕು. ನಿರಂತರ ಅಭ್ಯಾಸದಿಂದ ಮಾತ್ರ ಕ್ರೀಡೆಯಲ್ಲಿ ಪರಿಪೂರ್ಣತೆ ಹೊಂದಲು ಸಾಧ್ಯವೆಂದು ಕಿವಿ ಮಾತು ಹೇಳಿದರು.  ಮಕ್ಕಳು ಉತ್ತಮ ನಡತೆ ಮೈಗೂಡಿಸಿಕೊಳ್ಳಬೇಕು. ರಾತ್ರಿ ಬೇಗನೇ ನಿದ್ರಿಸಿ, ಬೆಳಿಗ್ಗೆ ಬೇಗನೇ ಎದ್ದೇಳುವುದರಿಂದ ಅರೋಗ್ಯವಾಗಿರಲು ಸಾಧ್ಯವಾಗುತ್ತದೆ. ಉತ್ತಮ ಗೆಳೆತನ ಹೊಂದಿದವರು ಉತ್ತಮ ಕ್ರೀಡಾ ಪಟುಗಳಾಗಲು ಸಾಧ್ಯ. ಈ ಕ್ಷೇತ್ರದಲ್ಲಿ ಕಠಿಣ ಪರಿಶ್ರಮ ಇರಬೇಕು. ಈ ಶಿಬಿರದಲ್ಲಿ ತರಬೇತಿ ಪಡೆದವರು ಮುಂದೊಂದು ದಿನ ರಾಜ್ಯ – ರಾಷ್ಟ್ರ ಮಟ್ಟದಲ್ಲಿ ಆಡುವದನ್ನು ಎದುರು ನೋಡುವುದಾಗಿ ಹೇಳಿದರು. ಶಿಬಿರದಲ್ಲಿ ೧೫೦ಕ್ಕೂ ಅಧಿಕ ಮಕ್ಕಳು ಭಾಗವಹಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ವಾಂಡರರ‍್ಸ್ ಸೋರ್ಟ್ಸ್ ಕ್ಲಬ್ ಅದ್ಯಕ್ಷ ಕೋಟೇರ ಮುದ್ದಯ್ಯ, ಶಿಬಿರದ ಸಂಚಾಲಕ ಬಾಬು ಸೋಮಯ್ಯ, ಹಿರಿಯ ಹಾಕಿ ಆಟಗಾರ ಚುಮ್ಮಿ ದೇವಯ್ಯ, ತರಬೇತುದಾರರಾದ ಬೊಪ್ಪಂಡ ಶ್ಯಾಂ ಪೂಣಚ್ಚ, ಕುಡೆಕಲ್ ಸಂತೋಷ್, ಬಿ.ಸಿ. ತಿಲಕ್, ಲೋಕೇಶ್ ನಾಯ್ಡು, ಕೋಟೇರ ನಾಣಯ್ಯ, ಕೇನೇರ ಕಾವ್ಯ, ನಾಟೋಳಂಡ ಸುರೇಶ್, ಬಿದ್ದಂಡ ನರೇನ್, ಬೆಳ್ಯಪ್ಪ, ಹರೇಂದ್ರ, ಶಿಬಿರಾರ್ಥಿಗಳು, ಪೋಷಕರು, ಕೊಡಗು ವಿದ್ಯಾಲಯದ ಬೇಸಿಗೆ ಶಿಬಿರದ ಶಿಬಿರಾರ್ಥಿಗಳು, ತರಬೇತುದಾರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ ಮುಗಿಲು ಮುಟ್ಟಿದೆ. ಸಂಪ್ರದಾಯದಂತೆ ಪೇಟೆ…

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.