Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಕ್ರಿಕೆಟ್ ಲೆದರ್‌ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಫೈನಲ್ ಪಂದ್ಯ : ಯುವ ಸಮೂಹದ ಆರೋಗ್ಯಕರ ಜೀವನಕ್ಕೆ ಕ್ರೀಡೆ ಸಹಕಾರಿ : ಶಾಸಕ ಎ.ಎಸ್.ಪೊನ್ನಣ್ಣ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಕ್ರಿಕೆಟ್ ಲೆದರ್‌ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಫೈನಲ್ ಪಂದ್ಯ : ಯುವ ಸಮೂಹದ ಆರೋಗ್ಯಕರ ಜೀವನಕ್ಕೆ ಕ್ರೀಡೆ ಸಹಕಾರಿ : ಶಾಸಕ ಎ.ಎಸ್.ಪೊನ್ನಣ್ಣ ಅಭಿಮತ*

ಏಪ್ರಿಲ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.13 : ಯುವ ಸಮೂಹ ಹಾದಿ ತಪ್ಪುವುದನ್ನು ತಪ್ಪಿಸಲು ಮತ್ತು ಆರೋಗ್ಯಕರ ಜೀವನ ನಡೆಸಲು ಕ್ರೀಡೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ಆಯೋಜಿಸಿರುವ ಕೊಡವ ಕ್ರಿಕೆಟ್ ಲೆದರ್‌ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಹಾಗೂ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಕೂಟಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿರುವುದಲ್ಲದೆ ಉತ್ತಮ ಬದುಕು ಕಟ್ಟಿಕೊಟ್ಟಿವೆ ಎಂದರು. ಕ್ರೀಡೆಗಳು ಯುವ ಸಮೂಹವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುತ್ತವೆ ಮತ್ತು ಆರೋಗ್ಯವನ್ನು ಕಾಪಾಡುತ್ತದೆ. ಹೆಚ್ಚು ಹೆಚ್ಚು ಕ್ರೀಡಾಕೂಟಗಳು ನಡೆಯುವುದರಿಂದ ಕೊಡಗಿನ ಆಟಗಾರರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ ಎಂದರು. ಜನಪ್ರಿಯ ಕ್ರೀಡೆಯಾಗಿರುವ ಕ್ರಿಕೆಟ್ ಗೆ ಜಿಲ್ಲೆಯಲ್ಲಿ ಉತ್ತೇಜನ ನೀಡುತ್ತಿರುವುದು ಸ್ವಾಗತಾರ್ಹ, ಕೂರ್ಗ್ ಕ್ರಿಕೆಟ್ ಫೌಂಡೇಶನ್ ಯುವ ಸಮೂಹವನ್ನು ಉತ್ತೇಜಿಸಲು ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಪರಿಶ್ರಮದಿಂದ ಆಯೋಜಿಸಿದೆ. ಈ ಬಾರಿಯ ಸೀಸನ್-2 ರಲ್ಲಿ ದೊಡ್ಡ ಸಂಖ್ಯೆಯಲ್ಲಿ ಆಟಗಾರರು ಪಾಲ್ಗೊಂಡಿರುವುದು ಶ್ಲಾಘನೀಯ. ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಪ್ರಯತ್ನಕ್ಕೆ ನನ್ನ ಸಂಪೂರ್ಣ ಪ್ರೋತ್ಸಾಹವಿದೆ ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಅಧ್ಯಕ್ಷ ಪೊರುಕೊಂಡ ಸುನಿಲ್ ಅವರು, ಕೊಡಗಿನಲ್ಲಿ ಲೆದರ್ ಬಾಲ್ ಕ್ರಿಕೆಟ್ ಕ್ರೀಡೆಯನ್ನು ಉತ್ತೇಜಿಸುವ ಮತ್ತು ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಲೆದರ್‌ಬಾಲ್ ಪ್ರೀಮಿಯರ್ ಲೀಗ್ ನ್ನು ನಡೆಸಿಕೊಂಡು ಬರಲಾಗುತ್ತಿದೆ. ಲೆದರ್ ಬಾಲ್ ಕ್ರಿಕೆಟ್ ಗೆ ಜಿಲ್ಲೆಯ ಯುವ ಸಮೂಹವನ್ನು ಸೆಳೆಯುವುದು ನಮ್ಮ ಕನಸಾಗಿತ್ತು, ಅದು ನನಸಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಇಲ್ಲಿಯವರೆಗೆ ಕೊಡವರಿಗೆ ಮಾತ್ರ ಸೀಮಿತವಾಗಿ ಕ್ರೀಡಾಕೂಟವನ್ನು ಆಯೋಜಿಸಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ಜಾತಿ, ಜನಾಂಗದವರನ್ನು ಒಗ್ಗೂಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಪಂದ್ಯಾವಳಿ ನಡೆಸುವುದಾಗಿ ತಿಳಿಸಿದರು. ಮಾಜಿ ಹಾಕಿ ಒಲಿಂಪಿಯನ್ ಲೆಫ್ಟಿನೆಂಟ್ ಕರ್ನಲ್ ಬಾಳೆಯಡ ಸುಬ್ರಮಣಿ ಅವರು ಮಾತನಾಡಿ ದಾನಿಗಳ ಸಹಕಾರವಿದ್ದರೆ ಮಾತ್ರ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಲು ಸಾಧ್ಯ, ಇದರೊಂದಿಗೆ ಯುವ ಸಮೂಹಕ್ಕೆ ಪ್ರೋತ್ಸಾಹದ ಅಗತ್ಯವೂ ಇದೆ ಎಂದರು. ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಮತ್ತಷ್ಟು ನಡೆದು ಜಿಲ್ಲೆಯ ಪ್ರತಿಭೆಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಆಡುವಂತ್ತಾಗಲಿ ಎಂದು ಕರೆ ನೀಡಿದರು. ರಾಜ್ಯ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕ ತೀತಿರ ರೋಶನ್ ಅಪ್ಪಚ್ಚು ಅವರು ಮಾತನಾಡಿ ಕೊಡಗಿನಲ್ಲಿ ಕ್ರೀಡಾ ಸುಗ್ಗಿಯೇ ನಡೆಯುತ್ತಿದೆ. ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಅಗತ್ಯ ಪ್ರೋತ್ಸಾಹ ಮತ್ತು ಸಹಕಾರ ದೊರೆಯುತ್ತಿದೆ ಎಂದು ಹೇಳಿದರು. ರಿಪಬ್ಲಿಕ್ ಟಿವಿ ಮತ್ತು ಆರ್ ಕನ್ನಡದ ಅಧ್ಯಕ್ಷರು ಹಾಗೂ ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಮುಖ್ಯ ಮಾರ್ಗದರ್ಶಕ ಚೇರಂಡ ಕಿಶನ್ ಮಾದಪ್ಪ ಅವರು ಮಾತನಾಡಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಆಯೋಜನೆ ಸಾಧಾರಣ ಕಾರ್ಯವಲ್ಲ, ಇದರ ಹಿಂದೆ ಸಮಾನ ಮನಸ್ಕರ ಕನಸು ಮತ್ತು ಶ್ರಮವಿದೆ. ಕೊಡಗಿನ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಕೆಲಸವನ್ನು ಕೂರ್ಗ್ ಕ್ರಿಕೆಟ್ ಫೌಂಡೇಶನ್ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತಷ್ಟು ಕ್ರೀಡಾಕೂಟಗಳು ಆಯೋಜನೆಗೊಂಡು ಕೊಡಗಿನ ಕ್ರೀಡಾಪ್ರತಿಭೆಗಳಿಗೆ ಅವಕಾಶ ಲಭಿಸುವ ವಿಶ್ವಾಸ ವ್ಯಕ್ತಪಡಿಸಿದರು. ಕ್ಯೂರೆಮಾರ್ವೆಲ್ ನಿರ್ದೇಶಕಿ ಪಾಲಚಂಡ ಪೂಜಿತಾ ಉತ್ತಪ್ಪ ಅವರು ಮಾತನಾಡಿ ಶುಭ ಹಾರೈಸಿದರು. ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ, ಉದ್ಯಮಿ ಕುಪ್ಪಂಡ ಚಿಣ್ಣಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗುಮ್ಮಟ್ಟೀರ ಕಿಲನ್ ಗಣಪತಿ, ಕೂರ್ಗ್ ಕ್ರಿಕೆಟ್ ಫೌಂಡೇಶನ್ ಉಪಾಧ್ಯಕ್ಷ ಪಾಲಚಂಡ ಜಗನ್ ಉತ್ತಪ್ಪ, ಪಂದ್ಯಾವಳಿಯ ಸಂಚಾಲಕ ಚಂಡೀರ ರಚನ್ ಚಿಣ್ಣಪ್ಪ, ವ್ಯವಸ್ಥಾಪಕ ಚೆರುಮಂದAಡ ಸೋಮಣ್ಣ, ನಿರ್ದೇಶಕರಾದ ಮಡ್ಲಂಡ ದರ್ಶನ್ ಪೆಮ್ಮಯ್ಯ, ಕೀತಿಯಂಡ ಗಣಪತಿ, ಅಣ್ಣಳಮಾಡ ರಾಯ್ ಚಿಣ್ಣಪ್ಪ, ಕುಲ್ಲೇಟಿರ ಶಾಂತ ಕಾಳಪ್ಪ, ಬಲ್ಲಂಡ ರೇಣ ಮತ್ತಿತರರು ಉಪಸ್ಥಿತರಿದ್ದರು. ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಲಿವರೇಜ್ ತಂಡಗಳ ನಡುವೆ ನಡೆದ ಅಂತಿಮ ಪಂದ್ಯವನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡುವ ಮೂಲಕ ಉದ್ಘಾಟಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.