Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಕಾವೇರಿ ನದಿಗೆ 171ನೇ ಮಹಾಆರತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಕಾವೇರಿ ನದಿಗೆ 171ನೇ ಮಹಾಆರತಿ*

ಏಪ್ರಿಲ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಏ.13 NEWS DESK :  ನದಿ ಮೂಲ, ಜಲ ಮೂಲಗಳ ಸಂರಕ್ಷಣೆಗೆ ಕಠಿಣ ಕಾನೂನಿನ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ದೀಪಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಮಾಮಿ ಕಾವೇರಿ ತಂಡದ ಸಹಯೋಗದೊಂದಿಗೆ ನಡೆದ 171ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳ ನಡುವೆ ದಕ್ಷಿಣ ಭಾರತದ ಜೀವನದಿ ಕಾವೇರಿ ಬರಡಾಗುತ್ತಿದೆ. ಪ್ರಮುಖವಾಗಿ ಮೂಲದಲ್ಲಿಯೇ ಕಾವೇರಿ ನೇರವಾಗಿ ಕಲುಷಿತಗೊಂಡು ಹರಿಯುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ ಎಂದರು. ಕಾರ್ಯಕ್ರಮಗಳ ಮೂಲಕ ನದಿ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುತ್ತಿರುವ ಕಾವೇರಿ ಮಹಾ ಆರತಿ ಬಳಗದ ಜೊತೆ ಕರ್ನಾಟಕ ರಕ್ಷಣಾ ವೇದಿಕೆ ಕೈ ಜೋಡಿಸುವುದರೊಂದಿಗೆ ಸ್ವಚ್ಛ ಕಾವೇರಿ ಅಭಿಯಾನದಲ್ಲಿ ನಿರಂತರವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ಕಾವೇರಿ ಮಹಾ ಆರತಿ ಕಾರ್ಯಕ್ರಮದ ಉದ್ದೇಶ ಗುರಿ ಬಗ್ಗೆ ಮಾತನಾಡಿದ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಸಹಯೋಗದೊಂದಿಗೆ ನಮಾಮಿ ಕಾವೇರಿ ತಂಡದ ಮೂಲಕ ಭಾಗಮಂಡಲ ಸಂಗಮದಿಂದ ರಾಮನಾಥಪುರ ತನಕ ಕಾವೇರಿ ಹರಿಯುವ ಸುಮಾರು 25 ಕ್ಕೂ ಅಧಿಕ ಗ್ರಾಮಗಳ ನದಿ ತಟಗಳಲ್ಲಿ ಕಾವೇರಿ ನದಿಗೆ ಆರತಿ ಬೆಳಗುವ ಮೂಲಕ ನದಿ ಸ್ವಚ್ಛತೆಯ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಪ್ರತಿಯೊಬ್ಬರೂ ಈ ಕಾರ್ಯದಲ್ಲಿ ಕೈಜೋಡಿಸುವಂತೆ ಮನವಿ ಮಾಡಿದರು.
ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಕುಂಕುಮಾರ್ಚನೆ ,ಅಷ್ಟೋತ್ತರ ನಂತರ ಕಾವೇರಿಗೆ ಆರತಿ ಬೆಳಗಿದರು. ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ಮೇಲ್ವಿಚಾರಕರಾದ ಪೂರ್ಣಿಮಾ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಕಾವೇರಿ ಆರತಿ ಬಳಗದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಬಳಗದ ಪ್ರಮುಖರಾದ ಚೈತನ್ಯ ಧರಣಿ ಕುಶಾಲನಗರ ತಾಲೂಕು ಕರವೇ ಘಟಕದ ಅಧ್ಯಕ್ಷ ಬಿಜೆ ಅಣ್ಣಯ್ಯ ಕಾರ್ಯದರ್ಶಿ ಆರ್ ಕುಮಾರ್ ಡಿ ಆರ್ ಯೋಗೀಶ್ ಮುರಳಿ ಸಂದೀಪ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಗಳು ಕಾರ್ಯಕರ್ತರು ಬಳಗದ ಸದಸ್ಯರು ಇದ್ದರು. ಹುಣ್ಣಿಮೆ ಅಂಗವಾಗಿ ನಮಾಮಿ ಕಾವೇರಿ ತಂಡದ ಸದಸ್ಯರಿಂದ ಕೊಡಗು ಜಿಲ್ಲೆಯ ಭಾಗಮಂಡಲ ತ್ರಿವೇಣಿ ಸಂಗಮ, ಕುಂದಚೇರಿ, ಕರಡಿಗೋಡು, ಗುಹ್ಯ, ಗೂಡ್ಗದ್ದೆ ಮುಳ್ಳುಸೋಗೆ, ಗುಮ್ಮನ ಕೊಲ್ಲಿ, ಕೂಡ್ಲೂರು, ನೆರೆಯ ದೊಡ್ಡ ಹೊಸೂರು, ಚಿಕ್ಕ ಹೊಸೂರು, ಕೊಪ್ಪ ಗ್ರಾಮಗಳು ಸೇರಿದಂತೆ 20 ಕ್ಕೂ ಅಧಿಕ ಕಡೆಗಳಲ್ಲಿ ಏಕಕಾಲದಲ್ಲಿ ಕಾವೇರಿ ನದಿಗೆ ಮಹಾ ಆರತಿ ಬೆಳಗುವ ಕಾರ್ಯಕ್ರಮಗಳು ನಡೆದವು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.