Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
  • *ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*
  • *“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*
  • *ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*
  • *ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿಎನ್‍ಸಿಯಿಂದ ಎಡ್ಮ್ಯಾರ್-1 ಹೊಸ ವರ್ಷಾಚರಣೆ : ಬೆಟ್ಟತ್ತೂರು ಗ್ರಾಮದಲ್ಲಿ ಉಳುಮೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿಎನ್‍ಸಿಯಿಂದ ಎಡ್ಮ್ಯಾರ್-1 ಹೊಸ ವರ್ಷಾಚರಣೆ : ಬೆಟ್ಟತ್ತೂರು ಗ್ರಾಮದಲ್ಲಿ ಉಳುಮೆ*

ಏಪ್ರಿಲ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.13 NEWS DESK : ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಎಡ್ಮ್ಯಾರ್-1 ಹೊಸ ವರ್ಷಾಚರಣೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬೇಂಗ್ ನಾಡಿನ ಬೆಟ್ಟತ್ತೂರು ಗ್ರಾಮದಲ್ಲಿ ಉಳುಮೆ ಮಾಡುವ ಮೂಲಕ ಚಾಲನೆ ನೀಡಿತು. ಗ್ರಾಮದ ಕೃಷಿಕ ಕೂಪದಿರ ಎನ್.ಮೋಹನ್ ಅವರ ಗದ್ದೆಯಲ್ಲಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಜೋಡೆತ್ತು ಕೆಂಪಯ್ಯ ಹಾಗೂ ಕರಿಯನ ಮೂಲಕ ಗದ್ದೆ ಉಳುಮೆ ಮಾಡಿ ಭೂಮಿಗೆ ನಮನ ಸಲ್ಲಿಸಿದರು. ಎಡ್ಮ್ಯಾರ್ 1 ಏ.14 ರಂದು ಆದರೂ ಕೊಡವ ಸಂಪ್ರದಾಯದಂತೆ ಕೊಡವರು ಸೋಮವಾರದಂದು ಎತ್ತುಗಳಿಂದ ಉಳುಮೆ ಮಾಡುವುದಿಲ್ಲ. ಈ ಕಾರಣಕ್ಕಾಗಿ ಒಂದು ದಿನ ಮುಂಚಿತವಾಗಿ ಉಳುಮೆ ಮಾಡಿ ಕೊಡವ ಬುಡಕಟ್ಟು ಜನಾಂಗ ಭೂಮಿ ಮತ್ತು ಪ್ರಕೃತಿಯೊಂದಿಗೆ ಹೊಂದಿರುವ ಅವಿನಾಭಾವ ಸಂಬಂಧದ ಕುರಿತು ಸಾಕ್ಷೀಕರಿಸಲಾಯಿತು ಎಂದು ಎನ್.ಯು.ನಾಚಪ್ಪ ತಿಳಿಸಿದರು. ಕೊಡವ ಬುಡಕಟ್ಟು ಜನರು ಸೌರ ಕ್ಯಾಲೆಂಡರ್ ನ್ನು ಅನುಸರಿಸುತ್ತಾರೆ. ಹೊಸ ವರ್ಷದ ಎಡ್ಮ್ಯಾರ್ 1 ಸೇರಿದಂತೆ ಕೊಡವರ ಸಾಂಪ್ರದಾಯಿಕ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವ ಮೂಲಕ ವಿಶಿಷ್ಟ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಸಿಎನ್‍ಸಿ ಸಂಘಟನೆ ಮಾಡಿಕೊಂಡು ಬರುತ್ತಿದೆ ಎಂದರು. ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಸಂವಿಧಾನದ ಆರ್ಟಿಕಲ್ 244, 371 ಆರ್/ಡಬ್ಲ್ಯೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಸ್ವಯಂ ಆಡಳಿತ ನೀಡಬೇಕು. ಕೊಡವ ಪ್ರಾಂತ್ಯದ ಪ್ರಾಚೀನ ಜನಾಂಗೀಯ ಸಮುದಾಯವಾಗಿ ಅಂತರಾಷ್ಟ್ರೀಯ ಸಮಾವೇಶದ ಅಡಿಯಲ್ಲಿ ಕೊಡವರಿಗೆ ವಿಶ್ವ ರಾಷ್ಟ್ರ ಸಂಸ್ಥೆಯಲ್ಲಿ ಮಾನ್ಯತೆ ಕಲ್ಪಿಸಬೇಕು. ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಸೂಕ್ಷ್ಮ ಅಲ್ಪಸಂಖ್ಯಾತ ಕೊಡವ ಸಮುದಾಯವನ್ನು ಸಂವಿಧಾನದ 340 ಮತ್ತು 342 ನೇ ವಿಧಿಗಳ ಅಡಿಯಲ್ಲಿ ಎಸ್‍ಟಿ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಬುಡಕಟ್ಟಿನ “ಕೊಡವ” ಮಾತೃಭಾಷೆಯನ್ನು ಸಂವಿಧಾನದ 8 ನೇ ಶೆಡ್ಯೂಲ್‍ನ ಲ್ಲಿ ಅಳವಡಿಸಬೇಕು. ಕೊಡವ ಸಂಸ್ಕೃತಿ -ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಗಳ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಧಾರ್ಮಿಕ “ಸಂಸ್ಕಾರ” ಗನ್ ವಿನಾಯಿತಿ ಸವಲತ್ತು ಮುಂದುವರೆಯಬೇಕು ಮತ್ತು ಸಿಖ್ಖರ ಕಿರ್ಪಾನ್ ಮಾದರಿಯಲ್ಲಿ ಸಂವಿಧಾನದ 25 ಮತ್ತು 26 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳ ಸಮುದಾಯಕ್ಕೆ “ಸಂಘ” ಅಮೂರ್ತ ಕ್ಷೇತ್ರದ ರೀತಿಯಲ್ಲಿ ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಿ ಇದೇ ಸಂದರ್ಭ ಎನ್.ಯು.ನಾಚಪ್ಪ ಅವರು ಹಕ್ಕೊತ್ತಾಯ ಮಂಡಿಸಿದರು. ಕೂಪದಿರ ಒಕ್ಕದ ಅಧ್ಯಕ್ಷೆ ಕೂಪದಿರ ಪುಷ್ಪ ಮುತ್ತಪ್ಪ, ಕೂಪದಿರ ಗಂಗವ್ವ, ಕೂಪದಿರ ಕಾವೇರಿಯಮ್ಮ, ಕೂಪದಿರ ಭವ್ಯಾ ಮಾಚಯ್ಯ, ಕೂಪದಿರ ನಯನಾ ಯಶವಂತ, ಪಟ್ಟಮಾಡ ಕುಶ, ಕೂಪದಿರ ಮೋಹನ್, ಕೂಪದಿರ ಸಾಬು, ಮಂದಪಂಡ ಮನೋಜ್, ರೋಷನ್, ಕೂಪದಿರ ಪ್ರಣಾಮ್, ಯಶವಂತ ಕುಮಾರ್ ಮತ್ತಿತರರು ಗದ್ದೆ ಉಳುಮೆ ಸಂದರ್ಭ ಹಾಜರಿದ್ದರು.
::: ಏ.14 ರಂದು ಪಂಜಿನ ಮೆರವಣಿಗೆ :::
ಎಡ್ಮ್ಯಾರ್ 1 ಹೊಸ ವರ್ಷಾಚರಣೆ ಪ್ರಯುಕ್ತ ಸಿಎನ್‍ಸಿ ಸಂಘಟನೆ ವತಿಯಿಂದ ಏ.14 ರಂದು ಸಂಜೆ 6.30 ಗಂಟೆಗೆ ಗೋಣಿಕೊಪ್ಪಲಿನ ಆರ್‍ಎಂಸಿ ಯಾರ್ಡ್‍ನಿಂದ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 5: 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ, ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ…

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026

*“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*

ಸೆಪ್ಟೆಂಬರ್ 5, 2026

*ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*

ಸೆಪ್ಟೆಂಬರ್ 5, 2026

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.