Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಏಪ್ರಿಲ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಏ.14 NEWS DESK : ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.  ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು. ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್  ಶ್ರಮಿಸಿದ್ದರು  ಎಂದರು. ಮನುವಾದಿಗಳು  ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ  ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ  ಕೆಲವರು  ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು(oತಿಟಿ) ಬಿಂಬಿಸಲು  ಪ್ರಾರಂಭಿಸಿದ್ದಾರೆ. ಮಹಾತ್ಮಾ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’  ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ  ಎಂದು ಪತ್ರ ಬರೆದಿದ್ದರು. ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಅಂಬೇಡ್ಕರ್ ಅವರು   ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲ ::  ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು  ವಿರೋಧಿಸುತ್ತಾರೆ.  ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ,  ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.

ಜಾತಿ ಜನಗಣತಿ :: ಏ.17 ರಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಕರೆಯಲಾಗಿದೆ. ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ. 15 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)…

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.