Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಏ.16 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಏ.16 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*

ಏಪ್ರಿಲ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.14 NEWS DESK : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಏ.16 ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಮಿತಿಯ ಉಪಾಧ್ಯಕ್ಷ ಕೆ.ಎ.ಯಾಕುಬ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಸ್ಲಿಮರ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಒಗ್ಗಟ್ಟಿನ ಹೋರಾಟ ನಡೆಸುವುದಕ್ಕಾಗಿ ಇಬ್ಬರು ಖಾಝಿಗಳ ನೇತೃತ್ವದಲ್ಲಿ ಜಿಲ್ಲಾ ಸುನ್ನಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ಸಾಗಲಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸ್ವಾತಂತ್ರ್ಯ ಪೂರ್ವದಿಂದಲೇ ರಾಜರು, ಬ್ರಿಟಿಷರು ಹಾಗೂ ದಾನಿಗಳು ಮಸೀದಿಗೆ ದಾನವಾಗಿ ಜಾಗವನ್ನು ನೀಡಿದ್ದಾರೆ. ಅಂದಿನಿಂದ ಇಂದಿನವರೆಗೆ ಈ ಆಸ್ತಿಯನ್ನು ಬಳಸಿಕೊಂಡು ವಿದ್ಯಾರ್ಥಿಗಳ ಶಿಕ್ಷಣ, ಸಿಬ್ಬಂದಿಗಳ ವೇತನ ಮತ್ತಿತರ ಕಾರ್ಯಗಳಿಗಾಗಿ ಸದುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಸುಮಾರು 200-300 ವರ್ಷಗಳಿಂದ ಈ ಆಸ್ತಿಯನ್ನು ಸಂರಕ್ಷಿಸಿಕೊಂಡು ಬರಲಾಗುತ್ತಿದ್ದು, ಮಸೀದಿ, ಈದ್ಗಾ ಮೈದಾನ ಮತ್ತು ಖಬರ್ ಸ್ಥಾನಗಳ ವ್ಯವಸ್ಥೆಯಲ್ಲಿ ನಮ್ಮದೇ ತೀರ್ಮಾನಗಳು ಅಂತಿಮವಾಗುತ್ತದೆ. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿರುವ ತಿದ್ದುಪಡಿ ಕಾಯ್ದೆ ಹಳೆಯ ನಿಯಮಗಳಿಗೆ ವ್ಯತಿರಿಕ್ತವಾಗಿದೆ. ದೇವರ ಹೆಸರಿಗೆ ದಾನವಾಗಿ ನೀಡಿದ ಆಸ್ತಿ ದೇವರ ಹೆಸರಿನಲ್ಲೇ ಇರಬೇಕೆನ್ನುವ ನಿಯಮವಿದೆ. ಕೇವಲ ರಾಜಕೀಯಕ್ಕಾಗಿ ಮತ್ತು ಹಿಂದೂ ಹಾಗೂ ಮುಸಲ್ಮಾನರ ನಡುವೆ ಭೇದ ಉಂಟು ಮಾಡುವುದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಕೆ.ಎ.ಯಾಕುಬ್ ಆರೋಪಿಸಿದರು.
ಕೇಂದ್ರ ಸರ್ಕಾರದ ಈ ನಿಲುವು ವಿಷಾದನೀಯ ಮತ್ತು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಿತಿಯ ಉಪಾಧ್ಯಕ್ಷ ಪಿ.ಎಂ.ಲತೀಫ್ ಮಾತನಾಡಿ, ಈ ಹಿಂದೆಯೂ ಮೂರು ಬಾರಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಇದು ವಕ್ಫ್ ಆಸ್ತಿಯ ಸಂರಕ್ಷಣೆಗೆ ತೆಗೆದುಕೊಂಡ ಕಠಿಣ ನಿಲುವಾಗಿತ್ತು. ಆದರೆ ಈಗಿನ ತಿದ್ದುಪಡಿ ಹಿಂದಿನ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು. ವಕ್ಫ್ ಕಾಯ್ದೆ ತಿದ್ದುಪಡಿ ಸಂದರ್ಭ ಕೇಂದ್ರ ಸರ್ಕಾರ ಸರ್ವ ಪಕ್ಷಗಳ ನಿಯೋಗವನ್ನು ಸೇರಿಸಿ 40 ಅಂಶಗಳನ್ನು ಮುಂದಿಟ್ಟಿತ್ತು. ಹಿಂದಿನ ನಿಯಮಕ್ಕೆ ವಿರುದ್ಧವಾದ ಅಂಶಗಳನ್ನು ಕೆಲವು ಪಕ್ಷಗಳು ವಿರೋಧಿಸಿದ್ದರೂ ಇದನ್ನು ತೆಗೆದು ಹಾಕದೆ ಮತ್ತೆ 14 ಅಂಶಗಳನ್ನು ಸೇರಿಸಿ ಒಟ್ಟು 54 ಅಂಶಗಳನ್ನೊಳಗೊಂಡ ಕಾಯ್ದೆಯನ್ನು ರಚಿಸಿ ತಿದ್ದುಪಡಿ ತರಲಾಗಿದೆ. ಇದು ಮುಂಬರುವ ಚುನಾವಣೆಯಲ್ಲಿ ಬಹುಮತ ಪಡೆಯುವುದಕ್ಕಾಗಿ ಮಾಡಿದ ತಿದ್ದುಪಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಿತಿಯ ಮಾಧ್ಯಮ ಸಂಚಾಲಕ ಸಿ.ಎಂ.ಹಮೀದ್ ಮೌಲವಿ ಮಾತನಾಡಿ, ವಕ್ಫ್ ಕಾಯ್ದೆ ತಿದ್ದುಪಡಿಯ ಹಿಂದೆ ದೊಡ್ಡ ಷಡ್ಯಂತ್ರವಿದ್ದು, ದೇಶದ ಸಂವಿಧಾನ ಮತ್ತು ಕಾನೂನಿಗೆ ವಿರುದ್ಧವಾಗಿದೆ. ಇದರಿಂದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಲ್ಲದೆ ಆಸ್ತಿ ಕಬಳಿಸುವ ಹುನ್ನಾರವೂ ಅಡಗಿದೆ ಎಂದು ಆರೋಪಿಸಿದರು. ಸಂವಿಧಾನವನ್ನು ಒಪ್ಪಿಕೊಳ್ಳುವ ಎಲ್ಲಾ ಭಾರತೀಯ ಮುಸಲ್ಮಾನರು ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಈ ಕಾರಣದಿಂದ ಮಡಿಕೇರಿಯಲ್ಲಿ ಕೂಡ ಬುಧವಾರ ಶಾಂತಿಯುತ ಪ್ರತಿಭಟನೆ ನಡೆಯಲಿದೆ. ಸುನ್ನಿ ಸಮನ್ವಯ ಸಮಿತಿಯ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ತಮ್ಮ ತಮ್ಮ ವಾಹನಗಳಲ್ಲಿ ಬೃಹತ್ ಸಂಖ್ಯೆಯಲ್ಲಿ ಮಡಿಕೇರಿಗೆ ಆಗಮಿಸಲಿದ್ದಾರೆ. ಪ್ರತಿಭಟನಾ ಮೆರವಣಿಗೆ ಸಂದರ್ಭ ಯಾವುದೇ ರಾಜಕೀಯ ಪಕ್ಷದ ಧ್ವಜವನ್ನು ಬಳಸುವಂತಿಲ್ಲ. ಸುನ್ನಿ ಸಮನ್ವಯ ಸಮಿತಿ ನೀಡುವ ಧ್ವಜವನ್ನು ಹಾಗೂ ಘೋಷಣೆಯನ್ನು ಮಾತ್ರ ಬಳಸಬೇಕು ಎಂದು ತಿಳಸಿದರು. ಸಮಿತಿಯ ಕಾರ್ಯದರ್ಶಿ ಅಬ್ದುಲ್ ಹಫೀಜ್ ಹಾಜಿ ಮಾತನಾಡಿ, ಕೇಂದ್ರ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಖಜಾಂಚಿ ಮಹಮ್ಮದ್ ಹಾಜಿ ಕುಂಜಿಲ ಹಾಗೂ ಕಾರ್ಯದರ್ಶಿ ಉಮ್ಮರ್ ಫೈಝಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.