Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : ಏ.26 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಜಾನುವಾರುಗಳ ರಕ್ಷಣೆ ಎಲ್ಲರ ಹೊಣೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ
ಇತ್ತೀಚಿನ ಸುದ್ದಿಗಳು ಪೊಲೀಸ್ ನ್ಯೂಸ್

ಕೊಡಗು : ಏ.26 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಜಾನುವಾರುಗಳ ರಕ್ಷಣೆ ಎಲ್ಲರ ಹೊಣೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ

ಏಪ್ರಿಲ್ 16, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.16 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್, 26 ರಿಂದ 45 ದಿನಗಳ ಕಾಲ 7 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ ಸಂಬಂಧಿಸಿದಂತೆ ಎಲ್ಲರೂ ಎಚ್ಚರವಹಿಸಬೇಕು. ಆ ನಿಟ್ಟಿನಲ್ಲಿ ಶೇಕಡಾವಾರು ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸುವಲ್ಲಿ ಎಲ್ಲರೂ ಮುಂದಾಗಬೇಕು. ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕಾ ಅಭಿಯಾನ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಡಾ.ಲಿಂಗರಾಜ ದೊಡ್ಡಮನಿ ಮಾತನಾಡಿ, ಕಾಲುಬಾಯಿ ರೋಗವು ವೈರಾಣುನಿಂದ ಬರುವ ಅಂಟು ಜಾಡ್ಯವಾಗಿದ್ದು, ಲಸಿಕೆ ಹಾಕುವುದರಿಂದ ಕಾಲುಬಾಯಿ ರೋಗವನ್ನು ನಿಯಂತ್ರಿಸಬಹುದಾಗಿದೆ ಎಂದರು. ಕಾಲುಬಾಯಿ ರೋಗವು ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಿಗೆ ತಗಲುವ ಮಾರಕ ರೋಗವಾಗಿದ್ದು, ಇದನ್ನು ತಡೆಯುವುದು ಅಭಿಯಾನದ ಉದ್ದೇಶವಾಗಿದೆ ಎಂದರು. ವರ್ಷದಲ್ಲಿ ಕನಿಷ್ಠ ಎರಡು ಬಾರಿ ದನ ಮತ್ತು ಎಮ್ಮೆಗಳಿಗೆ ಲಸಿಕೆ ಹಾಕುವುದರಿಂದ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಪ್ಪದೇ ಒಮ್ಮೆ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ 3 ರಿಂದ 5 ವಾರದೊಳಗೆ ಬೂಸ್ಟರ್ ಲಸಿಕೆ ಹಾಕಿಸಬೇಕಿದೆ. ಹಾಗೆಯೇ ಗರ್ಭಧರಿಸಿದ ಹಸು ಮತ್ತು ಎಮ್ಮೆಗಳಿಗೂ ತಪ್ಪದೇ ಲಸಿಕೆ ಹಾಕಿಸಬೇಕಿದೆ ಎಂದು ಕೋರಿದರು. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ಸಹ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಮನವಿ ಮಾಡಿದರು. ‘ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬಾರದಂತೆ ತಡೆಗಟ್ಟಬಹುದಾಗಿರುತ್ತದೆ. 20 ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ 76,920 ಇದ್ದು ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧ್ದತೆ ಮಾಡಿಕೊಳ್ಳಲಾಗಿದ್ದು, 75 ಲಸಿಕಾದಾರರನ್ನೊಳಗೊಂಡ ಲಸಿಕಾದಾರರು ರೈತರ/ ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು.’ ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ 4 ತಿಂಗಳ ಮೇಲ್ಪಟ್ಟ ಎಲ್ಲಾ ದನ/ ಎಮ್ಮೆ ಲಸಿಕೆ ಹಾಕಿಸುವಂತೆ ಕೋರಿದರು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಮಡಿಕೇರಿ 9448647276, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಸೋಮವಾರಪೇಟೆ 9980360200, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ವಿರಾಜಪೇಟೆ 9901303996, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಕುಶಾಲನಗರ 9448422269 ಹಾಗೂ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಪೊನ್ನಂಪೇಟೆ 9740556311 ನ್ನು ಸಂಪರ್ಕಿಸಬಹುದು ಎಂದು ಲಿಂಗರಾಜ ದೊಡ್ಡಮನಿ ವಿವರಿಸಿದರು. ಪಾಲಿಕ್ಲಿನಿಕ್ ಉಪ ನಿರ್ದೇಶಕರಾದ ಡಾ.ತಿಮ್ಮಯ್ಯ, ನೋಡಲ್ ಅಧಿಕಾರಿ ಡಾ.ಶಿಲ್ಪ, ತಾಲ್ಲೂಕು ಪಶು ವೈದ್ಯಾಧಿಕಾರಿಗಳಾದ ಡಾ.ಪ್ರಸನ್ನ, ಡಾ.ರಾಜಶೇಖರ್, ಡಾ.ಗಿರೀಶ್, ಡಾ.ನವೀನ್, ಡಾ.ಶಿಂದೆ, ಸಂಚಾರಿ ಪಶುಚಿಕಿತ್ಸಾ ಘಟಕದ ಡಾ.ಶರತ್, ಹಾಸನ ಕೆಎಂಎಫ್ ಪ್ರಧಾನ ವ್ಯವಸ್ಥಾಪಕರಾದ ಡಾ.ರೂಪೇಶ್ ಕುಮಾರ್ ಇತರರು ಇದ್ದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭಿತ್ತಿಪತ್ರ ಬಿಡುಗಡೆ ಮಾಡಿದರು.
ಮತ್ತಷ್ಟು ಮಾಹಿತಿ: ಕೊಡಗು ಜಿಲ್ಲೆಯಲ್ಲಿ 2025ರ ಏಪ್ರಿಲ್, 26 ರಿಂದ ಜೂನ್, 04 ರವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 07ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ. ಕಾಲುಬಾಯಿ ಜ್ವರವು ಒಂದು ವೈರಾಣುರೋಗವಾಗಿದ್ದು, ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.