
ಮಡಿಕೇರಿ ಏ.17 NEWS DESK : ಪೊನ್ನಂಪೇಟೆಯ ಸಿಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾದಕ ದ್ರವ್ಯದ ದುಷ್ಪರಿಣಾಮಗಳು, ಸಂಚಾರ ಸುರಕ್ಷತೆ ಮತ್ತು ಇನ್ನಿತರ ವಿಷಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ನಂತರ ಮಾತನಾಡಿ, ಜಿಲ್ಲೆಯಲ್ಲಿ ರಸ್ತೆ ಅವಘಡಗಳು ಹೆಚ್ಚಾಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಇದೆ. ಇದರೊಂದಿಗೆ ಮದ್ಯ ಸೇವಿಸಿ ವಾಹನ ಚಲಾಯಿಸುವ ಪ್ರಕರಣಗಳು ಅಧಿಕವಾಗುತ್ತಿವೆ. ಈ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದರು.









