Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ*

ಏಪ್ರಿಲ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17 NEWS DESK : ಮಡಿಕೇರಿಯಲ್ಲಿ ನಡೆಯುತ್ತಿರುವ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಇಂದು ಶ್ವಾನ ಪ್ರದರ್ಶನ ಮೆರುಗು ನೀಡಿತು. ವಿವಿಧ ತಳಿಯ ಶ್ವಾನಗಳು ಹಾಕಿ ಮೈದಾನದಲ್ಲಿ ಆಕರ್ಷಣೆ ಮತ್ತು ಚಾಕಚಕ್ಯತೆಯಿಂದ ನೋಡುಗರ ಗಮನ ಸೆಳೆದವು.  ಪಶುವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ನಡೆದ ಶ್ವಾನ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಮಾನವನ ವಿಶ್ವಾಸ, ನಂಬಿಕೆಗೆ ಅರ್ಹವಾದ ನಿಷ್ಠಾವಂತ ಸಾಕು ಪ್ರಾಣಿಗಳಲ್ಲಿ ಶ್ವಾನ ಅಗ್ರ ಸ್ಥಾನ ಪಡೆದಿದೆ. ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದರಿಂದ ನಿಷ್ಕಲ್ಮಶವಾದ ಪ್ರೀತಿ ಬೆಳೆಯುತ್ತದೆ. ಪ್ರತಿಯೊಬ್ಬರು ಪ್ರಾಣಿಗಳನ್ನು ಉತ್ತಮ ರೀತಿಯಲ್ಲಿ ಪೋಷಣೆ ಮಾಡಬೇಕು ಎಂದರು. ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಡಾ.ಲಿಂಗರಾಜು ಹಾ.ದೊಡ್ಡಮನಿ ಮಾತನಾಡಿ, ಪ್ರಾಣಿಗಳನ್ನು ರೇಬಿಸ್ ಕಾಯಿಲೆಯಿಂದ ರಕ್ಷಿಸಲು ಲಸಿಕೆ ಏಕೈಕ ಮಾರ್ಗವಾಗಿದ್ದು, ಜಿಲ್ಲೆಯ ಎಲ್ಲಾ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತ ಲಸಿಕೆ ನೀಡಲಾಗುತ್ತಿದೆ. ಸಾರ್ವಜನಿಕರು ತಮ್ಮ ಪ್ರಾಣಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಮಾರಣಾಂತಿಕ ಕಾಯಿಲೆಯಿಂದ ರಕ್ಷಿಸುವಂತೆ ಸಲಹೆ ನೀಡಿದರು. ಪ್ರಾಣಿಗಳನ್ನು ಉತ್ತಮ ರೀತಿಯಲ್ಲಿ ಪಾಲನೆ, ಪೋಷಣೆ ಮಾಡಬೇಕು. ಮನೆಗಳಲ್ಲಿ ಮುದ್ದಾದ ಶ್ವಾನಗಳನ್ನು ಸಾಕುವ ಮೂಲಕ ಮುಂದಿನ ದಿನಗಳಲ್ಲಿ ನಡೆಯುವ ಶ್ವಾನ ಪ್ರದರ್ಶನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.  ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ಅವರು ಮಾತನಾಡಿ, ಶ್ವಾನಪ್ರಿಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿವಿಧ ತಳಿಯ ಶ್ವಾನಗಳನ್ನು ನೋಡಲು ಅವಕಾಶವಾಗಿದೆ. ಪ್ರಸ್ತುತ ದಿನಗಳಲ್ಲಿ ರಾಷ್ಟ್ರ ಅಂತರಾಷ್ಟೀಯ ಮಟ್ಟದಲ್ಲಿ ಶ್ವಾನಗಳಿಗೆ ಹೆಚ್ಚು ಬೇಡಿಕೆ ಇದೆ. ಮನುಷ್ಯನಿಗೆ ಅತೀ ಆತ್ಮೀಯವಾದ ಮತ್ತು ನಂಬಿಕೆ ಪ್ರಾಣಿ ಶ್ವಾನವಾಗಿದ್ದು, ಮುಂದಿನ ವರ್ಷಗಳಲ್ಲಿ ನಡೆಯುವ ಹಾಕಿ ಹಬ್ಬಗಳಲ್ಲೂ ಶ್ವಾನ ಪ್ರದರ್ಶನ ನಡೆಸುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದರು.  ಪಾಲಿಕ್ಲಿನಿಕ್ ಜಿಲ್ಲಾ ಉಪನಿರ್ದೇಶಕ ಕ್ಯಾಪ್ಟನ್ ಡಾ.ಸಿ.ಪಿ.ತಿಮ್ಮಯ್ಯ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಶ್ವಾನವನ್ನು ಸಾಕುವವರ ಸಂಖ್ಯೆ ಹೆಚ್ಚಾಗಿದೆ. ನಮ್ಮಿಂದ ಯಾವುದೇ ಪ್ರಾಣಿಗಳನ್ನು ಸಾಕಲು ಸಾಧ್ಯವಾಗದೇ ಇದ್ದಲ್ಲಿ ಶ್ವಾನವನ್ನು ಸಾಕುವಂತೆ ಸಲಹೆ ನೀಡಿದರು. ಶ್ವಾನಗಳ ಒಡನಾಟದಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ, ಶ್ವಾನಗಳನ್ನು ದತ್ತು ಪಡೆದು ಆರೈಕೆ ಮಾಡುವಂತೆ ತಿಳಿಸಿದರು. ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಪ್ರಸನ್ನ, ನಿವೃತ್ತ ಉಪನಿರ್ದೇಶಕ ಡಾ.ಕೆ.ಪಿ.ಅಯ್ಯಪ್ಪ, ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಕಾರ್ಯದರ್ಶಿ ಮುದ್ದಂಡ ಆದ್ಯ ಪೂವಣ್ಣ, ಉಪಾಧ್ಯಕ್ಷ  ಡೀನ್ ಬೋಪಣ್ಣ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

::: ವಿವಿಧ ತಳಿಯ ಶ್ವಾನಗಳ ಆಕರ್ಷಣೆ ::: ಶ್ವಾನ ಪ್ರದರ್ಶನದಲ್ಲಿ ರಾಟ್ ವಿಲ್ಲರ್, ಗ್ರೇಟ್‍ಡೇನ್, ಮ್ಯಾಸ್ಟಿಫ್, ಸೈಬೀರಿಯನ್ ಹಸ್ಕಿ, ಪಗ್, ಬುಲ್‍ಡಾಗ್, ಗೋಲ್ಡನ್ ರೆಟ್ರೀವರ್, ಬೀಗಲ್, ಲ್ಯಾರ್ಬಡರ್, ಜರ್ಮನ್ ಶಫರ್ಡ್, ಮುಧೋಳ್ ಹೌಂಡ್ ಸೇರಿದಂತೆ 17 ವಿವಿಧ ತಳಿಯ ಅಧಿಕ ಸಂಖ್ಯೆಯ ಶ್ವಾನಗಳು ಆಕರ್ಷಿಸಿದವು.

::: ವಿಜೇತ ಶ್ವಾನಗಳು ::: ಶ್ವಾನ ಪ್ರದರ್ಶನದಲ್ಲಿ ಕೇಚೇಟಿರ ಮದನ್ ಅವರ ಗ್ರೇಟ್ ಡೇನ್ ತಳಿ ಪ್ರಥಮ, ಕುಶಾಲನಗರದ ಶರಣ್ ಕುಮಾರ್ ಅವರ ರಾಟ್ ವಿಲ್ಲರ್ ದ್ವಿತೀಯ, ಅರೆಕಾಡು ಎ.ಕೆ.ಸೋಮಣ್ಣ ಅವರ ಮಿನಿ ಪಿಚ್ಛರ್ ತೃತೀಯ, ಮಡಿಕೇರಿಯ ಎಂ.ಐ.ರಾಹುಲ್ ಅವರ ಜರ್ಮನ್ ಶಫರ್ಡ್ ನಾಲ್ಕನೇ ಸ್ಥಾನ ಹಾಗೂ ತಾನ್ಯ ತಂಗಮ್ಮ ಅವರ ಸೈಬೀರಿಯನ್ ಹಸ್ಕಿ 5ನೇ ಸ್ಥಾನ ಪಡೆದುಕೊಂಡಿತು. ವಿಜೇತರ ಶ್ವಾನಗಳಿಗೆ ಆಕರ್ಷಕ ಟ್ರೋಫಿ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಅಲ್ಲದೇ ಭಾಗವಹಿಸಿದ್ದ ಎಲ್ಲಾ ಶ್ವಾನಗಳಿಗೆ ಪ್ರಮಾಣ ಪತ್ರ ನೀಡಲಾಯಿತು.  ಎಲ್ಲಾ ಶ್ವಾನಗಳಿಗೆ ಜಿಲ್ಲಾ ಪಶುವೈದ್ಯಕೀಯ ಇಲಾಖೆಯಿಂದ ಉಚಿತ ರೇಬಿಸ್ ಲಸಿಕೆ ಹಾಗೂ ಔಷಧಿ, ಪಾಲಿಕ್ಲಿನಿಕ್ ನಿಂದ ಜಂತು ನಾಶಕ ಲಸಿಕೆ ಹಾಕಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೈಸೂರು, NEWS DESK ಸೆ.05: ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆತನಿಗೆ ಅಕ್ಷರ ತೇರಿನಲ್ಲಿ ಭಾವ…

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.