Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮುದ್ದಂಡ ಕಪ್ ಹಾಕಿ ಉತ್ಸವ : ಫೈನಲ್ಸ್ ಗೆ ಶ್ರೇಷ್ಠ ಆಟಗಾರರ ಆಗಮನ : ಉತ್ಸವ ಸಮಿತಿಯಿಂದ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮುದ್ದಂಡ ಕಪ್ ಹಾಕಿ ಉತ್ಸವ : ಫೈನಲ್ಸ್ ಗೆ ಶ್ರೇಷ್ಠ ಆಟಗಾರರ ಆಗಮನ : ಉತ್ಸವ ಸಮಿತಿಯಿಂದ ಸನ್ಮಾನ

ಏಪ್ರಿಲ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.19 NEWS DESK : ಮುದ್ದಂಡ ಕಪ್ ಹಾಕಿ ಉತ್ಸವದ ಫೈನಲ್ ಪಂದ್ಯಾವಳಿ ಮತ್ತು ಸಮಾರೋಪ ಸಮಾರಂಭ ನಡೆಯುವ ಏ.27 ರಂದು ಪ್ರತಿಷ್ಠಿತ ಪ್ರಶಸ್ತಿ ವಿಜೇತ, ಶ್ರೇಷ್ಠ ಆಟಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.  1975ರ ವಿಶ್ವಕಪ್ ಹಾಕಿ ವಿಜೇತ, ವಿಶ್ವದಲ್ಲೇ ಅತಿ ಹೆಚ್ಚು ಪದಕ ಗಳಿಸಿರುವ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ಸಿಡಿಲಮರಿ ಖ್ಯಾತಿಯ ಬಿ.ಪಿ.ಗೋವಿಂದ ಅವರು ಮುದ್ದಂಡ ಹಾಕಿ ಹಬ್ಬಕ್ಕೆ ಆಗಮಿಸಲಿದ್ದಾರೆ. 1972 ಮ್ಯುನಿಚ್ ಒಲಂಪಿಕ್ಸ್, 1973 ವಿಶ್ವಕಪ್, 1976 ಮಾಂಟ್ರಿಲ್ ಒಲಂಪಿಕ್ಸ್ ನ ಎಲ್ಲಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪದಕ ಗಳಿಸಿದ ಖ್ಯಾತಿ ಇವರದ್ದು. ವಿಶ್ವಕಪ್ ಹಾಕಿ ಭೂಪಟದಲ್ಲಿ ಭಾರತ ಹಾಕಿ ತಂಡದ ಹೆಸರನ್ನು ಅಜರಾಮರಗೊಳಿಸಿದ ಕೊಡಗಿನ ವೀರ, 1975 ವಿಶ್ವಕಪ್ ಹಾಕಿ ವಿಜೇತ ತಂಡದ ಆಟಗಾರ ಪೈಕೇರ ಕಾಳಯ್ಯ, 1980 ಮಾಸ್ಕೋ ಒಲಂಪಿಕ್ಸ್ ನಲ್ಲಿ ಚಿನ್ನ ಗೆದ್ದ ನಾಯಕ, ಭಾರತ ತಂಡದ ತರಬೇತುದಾರ, ವಿಶ್ವಕಪ್ ಹಾಗೂ ಒಲಂಪಿಕ್ಸ್ ನಲ್ಲಿ ಹೆಸರು ಗಳಿಸಿದ, ದಕ್ಷಿಣ ರೈಲ್ವೆ ತಂಡದ ಅದ್ಭುತ ಆಟಗಾರ ಪದ್ಮಶ್ರೀ ಪುರಸ್ಕೃತ ವಾಸುದೇವ ಭಾಸ್ಕರ್, 1980 ಮಾಸ್ಕೋ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ, 1984 ಲಾಸ್ ಏಂಜಲೀಸ್ ಒಲಂಪಿಕ್ಸ್, 1988 ಸಿಯೋಲ್ ಒಲಂಪಿಕ್ಸ್ ನ ನಾಯಕ, ವಿಶ್ವಕಪ್ ಚಾಂಪಿಯನ್ಸ್ ಟ್ರೋಫಿ ಹಾಗೂ ಇನ್ನು ಹಲವು ಪಂದ್ಯಾವಳಿಗಳಲ್ಲಿ ಆಡಿದ ಕೊಡಗಿನ ಏಕೈಕ ಆಟಗಾರ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಎಂ.ಎಂ.ಸೋಮಯ್ಯ ಆಗಮಿಸಲಿದ್ದಾರೆ. 1968 ಒಲಂಪಿಕ್ಸ್ ನ ಗೋಲ್ ಕೀಪರ್ ಆಗಿ ಪ್ರತಿನಿಧಿಸಿದ ಆಟಗಾರ. ಒಲಂಪಿಕ್ಸ್, ವಿಶ್ವಕಪ್, ಚಾಂಪಿಯನ್ ಟ್ರೋಫಿ, ಏಷ್ಯನ್ ಗೇಮ್ಸ್ ಗಳಲ್ಲಿ ಟೆಕ್ನಿಕಲ್ ಅಫಿಶಿಯಲ್ ಆಗಿ ಬಹಳಷ್ಟು ವರ್ಷ ಸೇವೆ ಸಲ್ಲಿಸಿದ ಹಾಗೂ ಹಾಕಿ ಪಂದ್ಯಾವಳಿಯ ಬಗ್ಗೆ ಅಪಾರ ಅನುಭವವಿರುವ ಮುನೀರ್ ಸೇಟ್, 1996 ಹಾಗೂ 2000 ಒಲಂಪಿಕ್ಸ್ ಆಟಗಾರ. ಏಷ್ಯನ್ ಗೇಮ್ಸ್, ವಿಶ್ವಕಪ್ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಮಹಮ್ಮದ್ ರಿಯಾಜ್ ಅವರು ಆಗಮಿಸಲಿದ್ದಾರೆ. ಈ ಹಾಕಿ ದಿಗ್ಗಜರನ್ನು ಅರ್ಥಪೂರ್ಣವಾಗಿ ಬರಮಾಡಿಕೊಂಡು ತೆರೆದ ಜೀಪಿನಲ್ಲಿ ಕೊಡಗಿನ ಸಾಂಪ್ರದಾಯಿಕ ದುಡಿಕೊಟ್ ಪಾಟ್ ನೊಂದಿಗೆ ಮೈದಾನದ ಸುತ್ತ ಮೆರವಣಿಗೆ ಮಾಡಲಾಗುವುದು ಎಂದು ರಶಿನ್ ಸುಬ್ಬಯ್ಯ ಮಾಹಿತಿ ನೀಡಿದರು. ಕೊಡವ ಕೌಟುಂಬಿಕ ಹಾಕಿ ಮೂರು ಬಾರಿ ಲಿಮ್ಕಾ ದಾಖಲೆ, ಒಂದು ಬಾರಿ ಗಿನ್ನಿಸ್ ದಾಖಲೆ ನಿರ್ಮಿಸಿದೆ. ಇಂದು ಕೊಡವ ಹಾಕಿ ವಿಶ್ವ ವಿಖ್ಯಾತ ಪಡೆದಿದೆ. ಎಲ್ಲಾ ಕ್ರೀಡಾ ಪ್ರೇಮಿಗಳು ಮುದ್ದಂಡ ಹಾಕಿ ಹಬ್ಬದ ಕೊನೆಯ ದಿನದ ಅದ್ಭುತ ಕ್ಷಣವನ್ನು ವೀಕ್ಷಿಸಬೇಕು ಎಂಬುವುದು ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿಯ ಬಯಕೆ ಎಂದು ಅವರು ಹೇಳಿದರು.
::: ಹಾಕಿ ಜನಕನ ಕನಸು ನನಸು ::: ಕೌಟುಂಬಿಕ ಹಾಕಿಯ ಜನಕ ಪಾಂಡಂಡ ಕುಟ್ಟಪ್ಪ ಅವರು ವಿಶ್ವಕಪ್ ವಿಜೇತರು ಹಾಗೂ ಒಲಂಪಿಕ್ ನಲ್ಲಿ ಚಿನ್ನ ಗೆದ್ದ ಕೊಡಗಿನ ಆಟಗಾರರನ್ನು ಒಂದೇ ವೇದಿಕೆಗೆ ಕರೆತರಬೇಕೆಂಬ ಕನಸು ಕಂಡಿದ್ದರು, ಅದು ಇಂದು ನನಸಾಗುತ್ತಿದೆ. ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ, ವಿಶ್ವಕಪ್ ವಿಜೇತರಾದ ಕಾಳಯ್ಯ ಹಾಗೂ ಗೋವಿಂದ ಅವರು ವಿಶ್ವಕಪ್ ಗೆದ್ದು 50 ವರ್ಷ ತುಂಬಿದ ಸಡಗರದಲ್ಲಿದ್ದಾರೆ. ಇದೇ ಪ್ರಥಮ ಬಾರಿಗೆ ಹಾಕಿ ಪ್ರೇಮಿಗಳ ಸಮ್ಮುಖದಲ್ಲಿ ಇವರನ್ನು ಗೌರವಿಸಬೇಕು ಎಂಬ ತೀರ್ಮಾನವನ್ನು ಕೊಡವ ಹಾಕಿ ಅಕಾಡೆಮಿ ಹಾಗೂ ಮುದ್ದಂಡ ಕುಟುಂಬದವರು ತೆಗೆದುಕೊಂಡಿದ್ದಾರೆ ಎಂದು ರಶಿನ್ ಸುಬ್ಬಯ್ಯ ತಿಳಿಸಿದರು. 1980ರ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು 45 ವರ್ಷಗಳು ತುಂಬಿದ ಸಂಭ್ರಮದಲ್ಲಿರುವ ಪದ್ಮಶ್ರೀ ಪುರಸ್ಕೃತ ವಾಸುದೇವ ಭಾಸ್ಕರನ್ ಹಾಗೂ ಕೊಡಗಿನವರಾದ ಮನೆಯಪಂಡ ಸೋಮಯ್ಯ ಅವರನ್ನು ಕೂಡ ಸನ್ಮಾನಿಸಿ ಗೌರವಿಸಲಾಗುವುದು ಎಂದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಪವಿತ್ರ ಶ್ರೀ ಕಾವೇರಿ ಮಾತೆಯ ತೀರ್ಥವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಧಾರ್ಮಿಕ ಸೇವೆಯನ್ನು…

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.