
ಮಡಿಕೇರಿ ಏ.19 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತ ಕಾರ್ಯಾಗಾರ ನಡೆಯಿತು.
ಕಾಲೇಜು ಸೇಮಿನಾರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ವೃತ್ತಿಪರ ಕೋರ್ಸ್‍ಗಳಲ್ಲಿ ವಿವಿಧ ಸಾಕಷ್ಟು ವಿಪುಲ ಅವಕಾಶಗಳಿದ್ದು, ಗುರುಗಳ ಮಾರ್ಗದರ್ಶನ ಮತ್ತು ಸಲಹೆಗಳನ್ನು ಪಡೆದುಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದರು. ನಿತ್ಯ ಪತ್ರಿಕೆಗಳನ್ನು ಓದುವ ಮೂಲಕ ಹೆಚ್ಚಿನ ವಿಷಯ ಅರಿಯಬೇಕು. ಜೀವನದಲ್ಲಿ ಪರಿಪೂರ್ಣತೆಯನ್ನು ಪಡೆಯಲು ಶಾಲಾ ಹಂತದಲ್ಲಿಯೇ ವೌಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೆ. ಡಾ.ಬಿ.ರಾಘವ, ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಅತ್ಯವಶ್ಯಕ ಎಂದರು. ಮಹಾನಗರಗಳಲ್ಲಿ ವಿದ್ಯಾರ್ಥಿಗಳು ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿರುತ್ತಾರೆ. ಆದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗರ್ಶನದ ಕೊರತೆ ಇದ್ದು, ವಿದ್ಯಾರ್ಥಿಗಳು ಸಂದರ್ಶನ ಎದುರಿಸುವಾಗ ಸಾಕಷ್ಟು ಬಾರಿ ಎಡವುತ್ತಾರೆ. ಇದರಿಂದ ಉತ್ತಮ ಕೆಲಸದ ಅವಕಾಶವನ್ನ ಕಳೆದುಕೊಳ್ಳುವಂತಾಗುತ್ತದೆ. ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಅತ್ಯವಶ್ಯಕ. ಬೆಳೆದಿರುವಂತ ದೊಡ್ಡ ದೊಡ್ಡ ನಗರಗಳಲ್ಲಿ ಅಲ್ಲಿನ ವಿದ್ಯಾರ್ಥಿಗಳು ಅಲ್ಲಿನ ವಾತವರಣಕ್ಕೆ ಹೊಂದಿಕೊಂಡಿರುತ್ತಾರೆ. ಈ ನಿಟ್ಟಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳನ್ನ ಎಜುಕೇಟ್ ಮಾಡುವ ಉದ್ದೇಶದಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು. ವಿದ್ಯಾರ್ಥಿಗಳು ಯಾವ ರೀತಿ ಸಂದರ್ಶನ ಎದುರಿಸಬೇಕು. ಸಂರ್ಶನ ಎದುರಿಸುವಾಗ ಹೇಗೆ ಆತ್ಮವಿಶ್ವಾಸ ಇರಬೇಕು ಎಂಬುದರ ಬಗ್ಗೆ ವೃತ್ತಿ ಪರಿಣಿತರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡ ಹಳೆ ವಿದ್ಯಾರ್ಥಿ ಸಂಘದ ನಿರ್ದೇಶಕ ಹಾಗೂ ಜಿ ಎಂ ಕ್ಲೌಡ್‍ಸ್ಟಾಫಿಂಗ್ ಇಂಡಿಯಾ ಎಲ್‍ಎಲ್‍ಪಿ ಜಗದೀಶ್ ಕುಶಾಲಪ್ಪ ವಿದ್ಯಾರ್ಥಿಳಿಗೆ ಮಾಕ್ ಸಂದರ್ಶನ, ಅಣುಕು ಸಂದರ್ಶನ, ವೃತ್ತಿ ಮಾರ್ಗದರ್ಶನದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹಾಗೂ ಮಡಿಕೇರಿಯ ಕರ್ನಾಟಕ ಕೊಚಿಂಗ್ ಸೆಂಟರ್‍ನ ಸಿಇಓ ಬೊಟ್ಟಂಗಡ ಗಣಪತಿ ವೃತ್ತಿ ಮಾರ್ಗದರ್ಶನ, ವೃತ್ತಿ ಜೀವನದ ಹಾದಿ, ಕೌಶಲ್ಯಾಭಿವೃದ್ಧಿ, ವೃತ್ತಿ ನೇಮಕಾತಿ, ಕೇರಿಯರ್ ಪಾಥ್ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಪ್ರದೀಪ್ ಬಂಡಾರಿ, ವಿದ್ಯಾರ್ಥಿ ಸಂಘದ ನಾಯಕ ಮಹೇಂದ್ರ, ಕಾಲೇಜಿನ ಪ್ರಾಧ್ಯಪಕರಾದ ಶ್ರೀಕಾಂತ್ ನಾಯಕ್, ರಾಜೇಂದ್ರ, ತಿಪ್ಪೆಸ್ವಾಮಿ ಸೇರಿದಂತೆ ಕಾಲೇಜು ಅಧ್ಯಪಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.









