
ಮಡಿಕೇರಿ ಏ.21 NEWS DESK : ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದ ಅನ್ವಾರುಲ್ ಉದಾ ಶಾಲೆಯ ಸಮೀಪ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯರು ಹಾಗೂ ಶಾಲಾ ಮಕ್ಕಳ ಅನುಕೂಲಕ್ಕಾಗಿ ನಿರ್ಮಿಸಿದ ಈ ರಸ್ತೆಯ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,ಪುರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.









