
ಮಡಿಕೇರಿ ಏ.21 NEWS DESK : ಭಾರತೀಯ ಜನತಾ ಪಾರ್ಟಿಯ ಎಸ್.ಸಿ ಮೋರ್ಚಾದ ವತಿಯಿಂದ ಇತ್ತೀಚೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರಿಡಾಂಗಣದಲ್ಲಿ “ಸಾಮರಸ್ಯ ಸಂಗಮ” ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾಗಿದ್ದ 4 ವಿಭಾಗಗಳ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳ ಹೆಸರುಗಳನ್ನು ಎಸ್.ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಪಿ.ಎಂ.ರವಿ ಪ್ರಕಟಿಸಿದ್ದಾರೆ. 5 ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಪ್ರಬಂಧ ಬರೆಯುವ ಸ್ಪರ್ಧೆಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ಭೂಮಿಕ ಪಿ.ಪಿ ಪ್ರಥಮ ಹಾಗೂ ಸುಂಟಿಕೊಪ್ಪದ ಸೈಂಟ್ ಮೇರಿ ಇಂಗ್ಲೀμï ಸ್ಕೂಲ್ ನ ಇಜ್ನಾ ಪೆಬಿನ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಧನುಶ್ರೀ ವಿ. ಪ್ರಥಮ ಹಾಗೂ ಮಡಿಕೇರಿಯ ಸಂತ ಮೈಕಲರ ಶಾಲೆಯ ಅಪೂರ್ವ ಕೆ. ದ್ವಿತೀಯ ಸ್ಥಾನ ಪಡೆದಿದ್ದಾರೆ. ಪಿಯುಸಿ ವಿದ್ಯಾರ್ಥಿಗಳಿಗೆ ಅಟಲ್ ಬಿಹಾರಿ ವಾಜಪೇಯಿ ಅವರ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಪೆರಾಜೆ ಕಾಲೇಜ್ ನ ಕುಶಿ ವೈ.ಟಿ ಪ್ರಥಮ, ಮಡಿಕೇರಿಯ ಸಂತ ಮೈಕಲರ ಶಾಲೆಯ ಸೌಜನ್ಯ ಎನ್. ಹಾಗೂ ಕಗ್ಗೋಡ್ಲುವಿನ ಪ್ರಜ್ಞಾ ಎಂ.ಆರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ‘ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ’ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ಮಡಿಕೇರಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಮಂಜುಳ ಎಸ್. ಪ್ರಥಮ ಹಾಗೂ ಸಮೀನ ಎಂ.ಎಸ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೊಡಗು ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ಸುಮಾರು 48 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮುಂದೆ ನಡೆಯುವ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದು ಪಿ.ಎಂ.ರವಿ ತಿಳಿಸಿದ್ದಾರೆ.










