Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯಮಟ್ಟದ ಕಬಡ್ಡಿ ಸ್ಪರ್ಧೆ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ರಾಜ್ಯಮಟ್ಟದ ಕಬಡ್ಡಿ ಸ್ಪರ್ಧೆ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

ಏಪ್ರಿಲ್ 22, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಏ.22 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ. ಮೈಸೂರಿನ ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್‍ನಲ್ಲಿ ಮ್ಯಾಟ್ ಅಂಕಣದಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಮಂಗಳೂರಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ದ್ವಿತೀಯ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು. ತಂಡದಲ್ಲಿ ಅಂತಿಮ ವರ್ಷದ ಎಂಬಿಎ ವಿಭಾಗದ ಬಬಿತ್‍ರಾಜ್, ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ನಿತ್ಯ.ಎನ್, ಪ್ರಥಮ ಎಲೆಕ್ಟ್ರಾನಿಕ್ಸ್ ವಿಭಾಗದ ತೇಜಸ್ ಪ್ರಥಮ ಮೆಕ್ಯಾನಿಕಲ್ ವಿಭಾಗದ ಹಿತೇಶ್, ವಿಜೇತ್, ಗೌರವ್, ಪ್ರತೀಕ್, ಯಶಸ್, ಪ್ರಥಮ ಎಲೆಕ್ಟ್ರಾನಿಕ್ಸ್ ವಿಭಾಗದ ವಂಶಿಕ್, ದ್ವಿತೀಯ ಮೆಕ್ಯಾನಿಕಲ್ ವಿಭಾಗದ ಭುವನ್‍ರಾಮ್, ಅಂತಿಮ ಎಲೆಕ್ಟ್ರಾನಿಕ್ಸ್ ವಿಭಾಗದ ಗುರುಚರಣ್ ಮತ್ತು ಅಂತಿಮ ಎಐಎಂಎಲ್ ವಿಭಾಗದ ಪ್ರಫುಲ್ ವಿಜೇತ ತಂಡದ ಆಟಗಾರರಾಗಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಕಬಡ್ಡಿ ಆಟಗಾರ ಸತ್ಯನ್ ದೊಡ್ಡಮನೆ ಹಾಗೂ ಕಬಕ ಮಹಾದೇವಿ ಕ್ಲಬ್‍ನ ಹಿರಿಯ ಕಬಡ್ಡಿ ಆಟಗಾರ ವಸಂತ ಗೌಡ ತಂಡಕ್ಕೆ ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ. 15 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)…

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.