Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಸಾಧಕ-ಬಾಧಕಗಳ ಕುರಿತು ಸಂವಾದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಸಾಧಕ-ಬಾಧಕಗಳ ಕುರಿತು ಸಂವಾದ*

ಏಪ್ರಿಲ್ 23, 20255 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.23 NEWS DESK : ಸರ್ಕಾರದಿಂದ ಕೊಡಗಿಗೆ ಒದಗಿಬಂದ ಸೌಲಭ್ಯವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕೆ ಹೊರತು ಅದನ್ನು ಯಾವುದೇ ಕಾರಣಕ್ಕೂ ಕೈಬಿಡುವ ಕೆಲಸ ಆಗಬಾರದು ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ ಸಾಧಕ-ಬಾಧಕ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ರಾಜ್ಯದಲ್ಲಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಚಿಂತನೆ ನಡೆಸಿದ್ದು, ಅದರಲ್ಲಿ ಕೊಡಗು ವಿಶ್ವವಿದ್ಯಾಲಯವೂ ಒಂದು. ನೂರಾರು ಎಕರೆ ಪ್ರದೇಶದಲ್ಲಿ ಈ ವಿವಿ ಸ್ಥಾಪನೆಯಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಿರುವ ಸುಸಜ್ಜಿತ ವ್ಯವಸ್ಥೆ ಹೊಂದಿರುವ ವಿವಿಯನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ.  ಈ ಹಿಂದೆ ಸರ್ಕಾರ ಎಲ್ಲಾ ವಿಶ್ವವಿದ್ಯಾಲಯಗಳಿಗೆ 2 ಕೋಟಿ ಅನುದಾನ ನೀಡವುದಾಗಿ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಅನುದಾನವನ್ನು ನೀಡದೆ ವಿವಿಯನ್ನು ಮುಚ್ಚುವ ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಆಂತಕ ಹೆಚ್ಚಾಗಲಿದೆ ಎಂದರು. ದೇಶ ಮುಂದಕ್ಕೆ ಬರಬೇಕಾದರೆ ಶಿಕ್ಷಣ ಮುಖ್ಯ. ಇಂತಹ ಸಂದರ್ಭದಲ್ಲಿ ನಮಗೆ ಒದಗಿಬಂದ ಕೊಡಗು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳುವಂತಾಗಬೇಕು ಎಂದರು. ನಮ್ಮ ಜಿಲ್ಲೆ ಗುಡ್ಡಗಾಡು ಪ್ರದೇಶ, ಕ್ರೀಡೆ ಮತ್ತು ಸೈನ್ಯಕ್ಕೆ ಒತ್ತು ಕೊಟ್ಟ ಜಿಲ್ಲೆ. ಅಲ್ಲದೇ ಪರಿಸರಕ್ಕೆ ದೊಡ್ಡ ಕೊಡುಗೆ ನೀಡಲಾಗಿದೆ. ಹೀರಿಗರುವ ಶಿಕ್ಷಣ ಕ್ಷೇತ್ರಕ್ಕೂ ಕೊಡುಗೆ ನೀಡುವ ನಿಟ್ಟಿನಲ್ಲಿ ಸರ್ಕಾರದಿಂದ ಬಂದ ಸೌಲಭ್ಯಗಳನ್ನು ಯಾವುದೇ ಕಾರಣಕ್ಕೂ ಕೈ ಬಿಡುವ ಕೆಲಸ ಆಗಬಾರದು ಎಂದು ಹೇಳಿದರು. ಶಿಕ್ಷಣ ತಜ್ಞ ಬಾಚರಣಿಯಂಡ ಪಿ.ಅಪ್ಪಣ್ಣ ಮಾತನಾಡಿ, ಕೊಡಗಿನ ಪ್ರಾದೇಶಿಕ, ಬೌಗೋಳಿಕ, ಸಂಸ್ಕೃತಿ, ಆಚಾರ, ವಿಚಾರಗಳು ತಳಮಟ್ಟದಿಂದಲೇ ಸಂಶೋಧನೆಯಾಗಬೇಕು. ಆ ನಿಟ್ಟಿನಲ್ಲಿ ಕೊಡಗು ವಿಶ್ವವಿದ್ಯಾಲಯ ಉಳಿಯಬೇಕು ಎಂದರು. ಹಿಂದೆ ಧಾರ್ಮಿಕ ವಿಚಾರಕ್ಕೆ, ಅಕ್ಷರಭ್ಯಾಸಕ್ಕೆ ಪ್ರಮುಖ್ಯತೆ ಪಡೆದುಕೊಂಡಿತ್ತು. ಆದರೆ ಇಂದು ಸಂಶೋಧನೆಯಲ್ಲಿ ವಿಶ್ವವಿದ್ಯಾಲಯಗಳು ಮುಂಚುಣಿಯಲ್ಲಿದೆ. ಆದ್ದರಿಂದ ಸರ್ಕಾರದಿಂದ ವಿವಿಧ ಧನಸಹಾಯ, ಪ್ರೋತ್ಸಾಹ ದೊರೆತ್ತಲ್ಲಿ ಮಾತ್ರ ಸಂಶೋಧನೆ ನಡೆಸಲು ಸಾಧ್ಯ. ಆ ನಿಟ್ಟಿನಲ್ಲಿ ಕೊಡಗು ವಿವಿ ಉಳಿವಿಗೆ ಎಲ್ಲರೂ ಒಮ್ಮನಸಿನಿಂದ ಹೋರಾಟ ಮಾಡಿ ಸರ್ಕಾರವನ್ನು ಎಚ್ಚರಿಸಬೇಕು ಎಂದು ಹೇಳಿದರು. ಗೊಂದಲದ ಹೇಳಿಕೆ ಬೇಡ :: ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕೊಡಗು ವಿಶ್ವವಿದ್ಯಾಲಯವನ್ನು ಮಂಗಳೂರು ವಿಶ್ವವಿದ್ಯಾಲಯಕ್ಕೆ ವಿಲೀನಗೊಳಿಸಲಾಗುವುದೆಂದು ಹೇಳಲಾಗುತ್ತಿದೆ. ಆದರೆ ಮಂಗಳೂರು ವಿವಿಯ ಪರಿಸ್ಥಿತಿ ಏನು ಎಂಬುದನ್ನು ಅವಲೋಕ ಮಾಡಬೇಕಾಗಿದೆ. ಇಲ್ಲಿಯ ವಿದ್ಯಾರ್ಥಿಗಳಿಗೆ ಸುಲಭದ ಶಿಕ್ಷಣ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಕೊಡಗು ವಿಶ್ವವಿದ್ಯಾಲಯವನ್ನು ಮುಂದುವರೆಸುವ ಪ್ರಯತ್ನ ನಡೆಯಬೇಕೆ ಹೊರತು, ವಿವಿಗಳಲ್ಲಿ ದಾಖಲಾತಿ ಆರಂಭವಾಗುತ್ತಿರುವ ಸಂದರ್ಭದಲ್ಲಿ ಗೊಂದಲದ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ರಾಜ್ಯ ಸರ್ಕಾರದಿಂದ ಅನುದಾನ ನೀಡದಿದ್ದರೂ ಪರವಾಗಿಲ್ಲ, ಕೊಡಗು ವಿವಿಯನ್ನು ಉಳಿಸಿಕೊಂಡು ಗೊಂದಲ ಹೇಳಿಕೆಗಳಿಗೆ ಕಡಿವಾಣ ಹಾಕಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಗೆ ನಂಬರ್ ಒನ್ ವಿಶ್ವವಿದ್ಯಾಲಯ ಎನಿಸಿಕೊಳ್ಳುವುದರಲ್ಲಿ ಸಂಶವಿಲ್ಲ ಎಂದರು.  ಕೊಡಗು ವಿಶ್ವವಿದ್ಯಾಲಯದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕೃಷ್ಣೆ ಗೌಡ ಮಾತನಾಡಿ, ಜಿಲ್ಲೆಗೊಂದು ವಿಶ್ವವಿದ್ಯಾಲಯ ಆಗಬೇಕು ಎಂಬ ನಿಟ್ಟಿನಲ್ಲಿ ಕೊಡಗಿನಲ್ಲಿ ಕೊಡಗು ವಿಶ್ವವಿದ್ಯಾಲಯ ಆರಂಭಗೊಂಡಿದ್ದು, 10 ಶಿಕ್ಷಣ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಉತ್ತಮ ಸಂಸ್ಥೆಯಾಗಿ ನಡೆಯುತ್ತಿದೆ.  ಆದರೆ ಕೆಲವರು ಉಪಮುಖ್ಯಮಂತ್ರಿಗಳನ್ನು ಪದೇ ಪದೇ ಭೇಟಿ ಮಾಡುವ ಮೂಲಕ ಸರ್ಕಾರಕ್ಕೆ ತಪ್ಪು ಮಾಹಿತಿಗಳನ್ನು ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯ ನಮ್ಮ ಅಸ್ಮಿತೆ. ಇಲ್ಲಿ ಪ್ರತಿಯೊಬ್ಬರು ಸೈನಿಕರಂತೆ ಹೋರಾಡಿ ವಿವಿ ಉಳಿವಿಗೆ ಪಣತೊಟ್ಟಿದ್ದಾರೆ. ಸುಮಾರು 50 ಜನರ ತಂಡ ಶಾಸಕರ ನೇತೃತ್ವದಲ್ಲಿ ಬೆಂಗಳೂರಿಗೆ ನಿಯೋಗ ತೆರಳಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಜನ ಸಚಿವರಿಗೆ ಕೊಡಗು ವಿವಿಯ ಸಾಧಕ-ಬಾಧಕಗಳನ್ನು ಮನವಿರಿಕೆ ಮಾಡಿಕೊಡಲಾಗಿದೆ. ಕೊಡಗು ವಿವಿ ಆರಂಭಗೊಂಡು ಕೇವಲ ಎರಡುವರ್ಷಗಳಾಗಿದ್ದು, ಎಲ್ಲವನ್ನು ಮಾಡಲು ಸಾಧ್ಯವಿಲ್ಲ. ಉತ್ತಮ ವಾತಾವರಣದಲ್ಲಿ ಇರುವ ವಿಶ್ವವಿದ್ಯಾಲಯವನ್ನು ಇಬ್ಬರು ಶಾಸಕರು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಕೊಡಗು ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಕೊಡಗು ಜಿಲ್ಲೆ ಹಿಂದಿನಿಂದಲೂ ಶೈಕ್ಷಿಣಿಕವಾಗಿ ಬೇರೆ ಬೇರೆ ಹಂತದಲ್ಲಿ ಪ್ರಗತಿಯಲ್ಲಿದೆ. ಕೊಡಗು ಶೈಕ್ಷಣಿಕ ಜಿಲ್ಲೆ ಎಂದು ಹೇಳಿಕೊಂಡಿದ್ದರೂ ಹಲವರು ಶಿಕ್ಷಣದಿಂದ ವಂಚಿತರಾಗಿದ್ದರು. ಆದರೆ ಕೆಲವು ವರ್ಷಗಳಿಂದ ಉನ್ನತ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆ ಹಾಗೂ ಆಡಳಿತಾತ್ಮಕವಾಗಿ ಜಿಲ್ಲೆಗೆ ವಿಶ್ವವಿದ್ಯಾಲಯ ಬೇಕು ಎಂಬ ನಿಟ್ಟಿನಲ್ಲಿ ಕೊಡಗು ಜಿಲ್ಲೆಗೆ ನೂತನ ಸರ್ಕಾರದಿಂದ ಲಭಿಸಿದೆ. ಇದೀಗ ವಿವಿಗೆ ಬೇಕಾದ ಮೂಲಭೂತ ಸೌಲಭ್ಯಗಳು ದೊರೆತ್ತಿದೆ. ಆದದೂ ಒಂದು ಬಾರಿ ಕೊಟ್ಟಿದ್ದನ್ನು ಹಿಂದೆ ಪಡೆಯುವುದು ಯಾಕೆ ಎಂದು ಪ್ರಶ್ನಿಸಿದರು.  ವಿಶ್ವವಿದ್ಯಾಲಯದ ಪ್ರಗತಿಗೆ ಸ್ವಲ್ಪ ಕಾಲವಕಾಶ ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ವಿವಿ ಎನಿಸಿಕೊಳ್ಳುವುದರಲ್ಲಿ ಸಂಶವಿಲ್ಲ. ಇದೀಗ ಬಡವರಿಗೆ, ನಿರ್ಗತಿಕರಿಗೆ, ಆದಿವಾಸಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಕೊಡಗು ವಿವಿ ಉತ್ತಮ ಅವಕಾಶವಾಗಿದ್ದು, ಭಾಷೆ, ಸಂಸ್ಕೃತಿಯ ಅಧ್ಯಯನ ಹಾಗೂ ಸ್ಥಳೀಯ ವಿಷಯಗಳನ್ನು ಪರಿಚಯಿಸಲು ಸಹಕಾರಿಯಾಗಿದೆ. ಅಲ್ಲದೇ ಸರ್ಕಾರದ ಹಲವು ಯೋಜನೆಗಳ ವೃತ್ತಿಪರ ಕೋರ್ಸುಗಳಿಗೂ ಅವಕಾಶ ಕಲ್ಪಿಸುವಂತಾಗುತ್ತದೆ ಎಂದರು. ಈ ಹಿಂದಿನ ಸರ್ಕಾರ ಜಾಗ, ಕಟ್ಟಡ ಒದಗಿಸಿಕೊಟ್ಟಿದ್ದು, ಇಂದಿನ ಸರ್ಕಾರ ಮೂಲಭೂತ ಸೌಲಭ್ಯಗಳ ನಿರ್ವಹಣೆಗೆ ಅಗತ್ಯ ಅನುದಾನವನ್ನು ಒದಗಿಸಲು ಜವಾಬ್ದಾರಿ ವಹಿಸಿಕೊಳ್ಳುವ ಮೂಲಕ ಕೊಡಗು ವಿವಿಯನ್ನು ಒಟ್ಟಾಗಿ ಉಳಿಸಿಕೊಳ್ಳುವ ಪ್ರಯತ್ನ ನಡೆಯಬೇಕು ಎಂದು ಹೇಳಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ ಮಾತನಾಡಿ, ಕೊಡಗು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಾದರೆ ಅಲ್ಲಿನ ಸಾಧಕ ಬಾಧಕಗಳನ್ನು ಪರಿಶೀಲಿಸಬೇಕು. ಈಗಾಗಲೇ ಸಂಪುಟದ ಉಪಸಮಿತಿಗಳನ್ನು ರಚಿಸಿ ಕೊಡಗು ವಿಶ್ವವಿದ್ಯಾಲಯದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ವರದಿ ನೀಡುವಂತೆ ಹೇಳಲಾಗಿದೆ. ಆದರೆ ಈಗಾಗಲೇ ಜಿಲ್ಲೆಯಲ್ಲಿರುವ ಕಾರ್ಯಪ್ಪ ಕಾಲೇಜಿನಲ್ಲಿ ಕೆಲವು ವಿಷಯವಾರು ಕೋರ್ಸುಗಳು ಮುಚ್ಚಿಹೋಗಿದೆ. ಹೀಗಿರುವಾಗ ಇಂದಿನ ಆಧುನಿಕರಣದ ವ್ಯವಸ್ಥೆಗೆ ತಕ್ಕಂತೆ ಉಪನ್ಯಾಸಕರ ಕೊರತೆ ಇದೆ. ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕ್ಷೀಣತೆ, ಮಾರುಕಟ್ಟೆಯಲ್ಲಿರುವ ಮೌಲ್ಯಧಾರಿತ ಶಿಕ್ಷಣಕ್ಕೆ ಒತ್ತು, ಉದ್ಯೋಗಾವಕಾಶಗಳು, ಕೈಗೆಟುವ ಶಿಕ್ಷಣ ನೀಡವಂತಾಗಬೇಕು. ಅಲ್ಲದೇ ಕೊಡಗು ವಿವಿ ಇದೀಗ ಪ್ರಾರಂಭವಾಗಿದ್ದರಿಂದ ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯದಲ್ಲಿ ಅವಕಾಶ ಪಡೆಯಲು ಕಷ್ಟವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳಿಗ ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಒಂದಷ್ಟು ಕಾಲವಕಾಶ ಅಗತ್ಯ ಇದೆ ಎಂದರು.  ಸಮಾಜ ಸೇವಕ ನಾಪಂಡ ಮುತ್ತಪ್ಪ ಮಾತನಾಡಿ, ಸಧ್ಯದಲ್ಲಿ ಮುಚ್ಚುವ ಮತ್ತು ವಿಲೀನಗೊಳಿಸುವ ಯಾವುದೇ ಪ್ರಕ್ರಿಯೆ ಆಗಲ್ಲ. ಇದಕ್ಕೆ ಬೇಕಾದ ಅನುದಾನವನ್ನು ಓದಗಿಸುವ ಕೆಲಸ ಸರ್ಕಾರ ಮಾಡಬೇಕು. ಯಾವ ಸರ್ಕಾರ ಇದ್ದರೂ ಕೊಡಗಿಗೆ ಬಂದಿದನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದು ಎಂದರು. ಈ ಹಿಂದೆ ಕೊಡಗಿನಲ್ಲಿ ಬಡವರು, ನಿರ್ಗತಿಕರಿಗೆ ಕೈಗೆಟಕುವ ದರದಲ್ಲಿ ಉನ್ನತ ಶಿಕ್ಷಣ ನೀಡಲು ಸಾಧ್ಯವಾಗುತ್ತಿರಲಿಲ್ಲ. ಹೆಣ್ಣು ಮಕ್ಕಳನ್ನು ಹೊರಗೆ ಕಳುಹಿಸಲು ಆರ್ಥಿಕ, ಸದೃಢತೆ ಮತ್ತು ಸುರಕ್ಷತೆ ಅಗತ್ಯ ವಿತ್ತು. ಇದರಿಂದ ಬಡವರು, ಹಿಂದುಳಿದವರು, ಆದಿವಾಸಿಗಳಿಗೆ ಉನ್ನತ ಶಿಕ್ಷಣ ನೀಡಲು ಸಾಧ್ಯವಾಗುತ್ತಿರಲಿಲ್ಲ. ಪ್ರಸ್ತುತ ದಿನಗಳಲ್ಲಿ ಎಲ್ಲರಿಗೂ ಪರಿಣಾಮಕಾರಿಯಾಗಿ ಶಿಕ್ಷಣ ನೀಡುವಂತಾಗಬೇಕು. ಆದ್ದರಿಂದ ಕೊಡಗು ವಿಶ್ವ ವಿದ್ಯಾನಿಲಯ  ಉಳಿಯಬೇಕು. ಆ ನಿಟ್ಟಿನಲ್ಲಿ ಸರ್ಕಾರಕ್ಕೆ ಒತ್ತಡ ತಂದು ಅನುದಾನವನ್ನು ತರುವಂತಗಬೇಕು ಮತ್ತು ನಾಗರಿಕರು ಪಕ್ಷಾತೀತವಾಗಿ ಒಗ್ಗೂಡಬೇಕು. ಇದು ಕೊಡಗಿನ ಸ್ವಾಭಿಮಾನದ ಪ್ರಶ್ನೆ, ವಿಶ್ವವಿದ್ಯಾನಿಲಯ ಕೊಡಗು ಹೆಸರಿನಲ್ಲಿಯೇ ಇರಬೇಕು, ಆಗ ವಿವಿಯನ್ನು ವ್ಯಾಪಕವಾಗಿ ವಿಸ್ತರಿಸುವ ಕೆಲಸ ಮಾಡಬಹುದು ಹೇಳಿದರು. ಕಾಂಗ್ರೆಸ್ ಮುಖಂಡ ವಿ.ಪಿ.ಶಶಿಧರ್ ಮಾತನಾಡಿ, ಯಾವುದೇ ಕಾರಣಕ್ಕೂ ಕೊಡಗಿನ ವಿವಿ ಮುಚ್ಚದಂತೆ  ಮುಚ್ಚಲು ಬಿಡುವುದಿಲ್ಲ. ಯುವ ಜನರ ಓದಿಗೆ ಅಗತ್ಯವಾದ ವಿವಿ ಕಳೆದುಕೊಂಡರೆ ಭವಿಷ್ಯದಲ್ಲಿ ವಿದ್ಯಾರ್ಥಿಗಳು ದೂರದ ಊರಿಗೆ ತೆರಳಬೇಕಾಗತ್ತದೆ. ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಇದರಿಂದ ಹೆಚ್ಚಿನ ಹೊರೆಯಾಗಲಿದೆ. ಇದನೆಲ್ಲ ಗಮನದಲ್ಲಿಟ್ಟುಕೊಂಡ ಕೊಡಗಿನ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ಬಗ್ಗೆ ಹೋರಾಟ ನಡೆಯಲಿದೆ ಎಂದು ತಿಳಿಸಿದರು. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಲಿ :: ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಇತರ ಜಿಲ್ಲೆಗಳಿಗೆ ತೆರಳಿ ಶಿಕ್ಷಣ ಪಡೆಯಲು ಕಷ್ಟ ಪಡುವ ವಿದ್ಯಾರ್ಥಿಗಳಿಗೆ ನಮ್ಮದೇ ಜಿಲ್ಲೆಯಲ್ಲಿ ಉತ್ತಮ ಉನ್ನತ ಶಿಕ್ಷಣ ಪಡೆಯಲು ಕೊಡಗು ವಿಶ್ವವಿದ್ಯಾಲಯ ಸಹಕಾರಿಯಾಗಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಶಿಕ್ಷಣಕ್ಕೆ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯವಾಗಿದ್ದು, ಶಿಕ್ಷಣವೇ ದೇಶ ಆಸ್ತಿ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹೆಚ್ಚು ಅನುದಾನ ನೀಡುವಂತಾಗಬೇಕು. ಶಿಕ್ಷಣ ಇದ್ದರೆ ದೇಶ ಮುಂದೆ ಬರಲು ಸಾಧ್ಯ ಎಂದರು.  ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ ಜಮೀರ್ ಅಹಮ್ಮದ್ ಮಾತನಾಡಿ, ಖಾಸಗಿ ವಿವಿಗಳಿಗೆ ಸಿಗುವ  ಪ್ರೋತ್ಸಾಹ ಸರ್ಕಾರಿ ವಿಶ್ವವಿದ್ಯಾಲಗಳಿಗೆ ಏಕೆ ನೀಡಲಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಕೆಲವು ಆತಂರಿಕ ಕಾರಣದಿಂದ ವಿದ್ಯಾರ್ಥಿಗಳ ಕೊರತೆ ಇದ್ದು, ಕೌಶಲ್ಯಾಧರಿತ ಶಿಕ್ಷಣ ಇಂದು ಅಗತ್ಯವಾಗಿದ್ದು, ಕೊಡಗು ವಿಶ್ವವಿದ್ಯಾಲಯದಲ್ಲಿ ಎಲ್ಲವನ್ನೂ ನೀಡಲಾಗುತ್ತಿದೆ. ಕೊಡಗು ವಿವಿಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದ್ದು, ವಿವಿಯ ಅಶ್ಮಿತೆಯನ್ನು ಕಳೆಯಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಸರ್ಕಾರ ಶೀಘ್ರ ನಿರ್ಧರ ಕೈಗೊಳ್ಳಬೇಕು ಮತ್ತು ಉಪನ್ಯಾಸಕರ ವರ್ಗವಣೆ ಪೂರ್ಣಗೊಳಿಸಬೇಕು ಎಂದು ಹೇಳಿದರು.  ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಮೋಹನ್ ಮತ್ತು ಕೆ.ಎಸ್.ಮೂರ್ತಿ ಮಾತನಾಡಿ, ಕೊಡಗು ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕ್ರಮ ಕೈಗೊಂಡು ಮುಖ್ಯಮಂತ್ರಿಗಳ ಗಮನ ಸೆಳೆಯುವಂತಾಗಲಿ ಎಂದರು. ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ರಾಜಕೀಯವನ್ನು ಬದಿಗೊತ್ತಿದಾಗ ಮಾತ್ರ ಶಿಕ್ಷಣ ಕ್ಷೇತ್ರ ಸುಧಾರಣೆ ಕಾಣಲು ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ ಶಿಕ್ಷಣದಲ್ಲಿ ಹಿಂದುಳಿದ ಜಿಲ್ಲೆಗಳಿಗೆ ಮಾತ್ರ ವಿಶ್ವವಿದ್ಯಾಲಯವನ್ನು ನೀಡಲಾಗಿದ್ದು, ಇಲ್ಲಿಯವರೆಗೆ ಕರ್ನಾಟಕದಲ್ಲಿ ಆರ್ಥಿಕ ಕಾರಣವನ್ನು ನೀಡಿ ಯಾವುದೇ ವಿಶ್ವವಿದ್ಯಾಲಯಗಳು ಮುಚ್ಚಿರುವ ಸಂದರ್ಭ ಇಲ್ಲ. ಆದ್ದರಿಂದ ಕೊಡಗು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳುವಂತಾಗಬೇಕು ಎಂದರು.  ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಉಪಾಧ್ಯಕ್ಷರು ಹಾಗೂ ಕಾರ್ಯಕ್ರಮದ ಸಂಚಾಲಕರಾದ ವನಿತಾ ಚಂದ್ರಮೋಹನ್, ಪ್ರಧಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್, ನಿರ್ದೇಶಕ ಲೋಹಿತ್ ಸೇರಿದಂತೆ ಮತ್ತಿತರು ಹಾಜರಿದ್ದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಆನಂದ್ ನಿರೂಪಿಸಿದರು. ಕುಶಾಲನಗರದ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಮೋಹನ್ ಸ್ವಾಗತಿಸಿದರು. ಪ್ಲೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.