Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ* 

ಏಪ್ರಿಲ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.24 NEWS DESK : ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಜನರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ಪ್ರೇರೆಪಿಸುವ ಉದ್ದೇಶದಿಂದ ‘ರನ್ ಫಾರ್ ಸೇಪ್ಟಿ’ ಘೋಷವಾಕ್ಯದೊಂದಿಗೆ ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಓಟ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ, ಮೈಂಡ್ ಎಂಡ್ ಮ್ಯಾಟರ್ ಹಾಗೂ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಮುದ್ದಂಡ ಹಾಕಿ ಉತ್ಸವ ಮೈದಾನವರೆಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಫಲಕಗಳನ್ನು ಹಿಡಿದು ಓಡುವ ಮೂಲಕ ಜಾಗೃತಿ ಮೂಡಿಸಲಾಯಿತು. ಓಟದಲ್ಲಿ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಯ ಸದಸ್ಯರು, ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 140 ಹೆಚ್ಚು ಮಂದಿ ಪಾಲ್ಗೊಂಡು ಜಾಗೃತಿ ಮೂಡಿಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮೈಂಡ್ ಎಂಡ್ ಮ್ಯಾಟರ್ ಸಂಸ್ಥೆಯ ಟ್ರಸ್ಟಿ ಎಂ.ಎ.ದೀಪಿಕಾ ಮಾತನಾಡಿ, ರಸ್ತೆ ಸುರಕ್ಷತಾ ನಿಯಮಗಳನ್ನು ವಿವರಿಸಿದರು. ದ್ವಿಚಕ್ರ ವಾಹನ ಸವಾರರು ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಕಾರು ಚಲಾಯಿಸುವಾಗ ಸೀಟ್‍ಬೆಲ್ಟ್ ಧರಿಸದೆ ಇರುವುದು ಅಪಘಾತಗಳಿಗೆ ಮುಖ್ಯ ಕಾರಣ ಎಂದರು. ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತಾ ಓಟ ಆಯೋಜನೆ ಮಾಡಿದ್ದು, ಓಟದಲ್ಲಿ ಭಾಗವಹಿದ ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು, ಜೊತೆಗೆ ತಮ್ಮ ಸ್ನೇಹಿತರು, ಕುಟುಂಬಸ್ಥರಿಗೆ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು. ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ಮಾತನಾಡಿ, ಸಂಚಾರ ನಿಯಮಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವಿನ ಕೊರತೆ ಮತ್ತು ನಿರ್ಲಕ್ಷ್ಯವೇ ಅವಘಡಗಳಿಗೆ ಕಾರಣ ಎಂದರು. ನಿಯಮವನ್ನು ನಿರ್ಲಕ್ಷ್ಯ ಮಾಡಿರುವುದರಿಂದ ಒಬ್ಬ ಬಾಲಕ ತನ್ನ ಪ್ರಾಣ ಕಳೆದುಕೊಂಡ ಘಟನೆಯನ್ನು ನೆನಪಿಸಿಕೊಂಡರು. ಪ್ರತಿಯೊಬ್ಬರು ವಾಹನ ಚಾಲಯಿಸುವಾಗ ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದರು. ರಾಜ್ಯ ವೀಲ್‍ಚೇರ್ ಕ್ರಿಕೆಟ್ ತಂಡದ ಅಧ್ಯಕ್ಷ ಸಾಗರ್ ಮಾತನಾಡಿ, ತರುಣರು ರಸ್ತೆ ಸುರಕ್ಷತೆಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು. ಸಂಚಾರಿ ಠಾಣಾ ಎಎಸ್‍ಐ ನಂದಾ, ಮೈಂಡ್ ಎಂಡ್ ಮ್ಯಾಟರ್ ಸಂಸ್ಥೆಯ ಟ್ರಸ್ಟಿ ಅಚ್ಚಯ್ಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರ್ಯಪಾಲಕ ಅಭಿಯಂತರ ಗಿರೀಶ್, ವೈದ್ಯ ಕಾಮತ್, ಪ್ರಣವ ಯೋಗ ಕೇಂದ್ರದ ಮುಖ್ಯಸ್ಥೆ ಶಿಲ್ಪಾ ರೈ, ಶಕ್ತಿ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. ಓಟದಲ್ಲಿ ಭಾಗವಹಿಸಿದ ಎಲ್ಲರಿಗೂ ಬೆಣ್ಣೆಹಣ್ಣಿನ ಗಿಡಗಳು ಮತ್ತು ಪ್ರಮಾಣ ಪತ್ರವನ್ನು ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೈಸೂರು, NEWS DESK ಸೆ.05: ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆತನಿಗೆ ಅಕ್ಷರ ತೇರಿನಲ್ಲಿ ಭಾವ…

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.