
ಕುಶಾಲನಗರ ಏ.25 NEWS DESK : ವಿಶ್ವ ಸಾಕು ಪ್ರಾಣಿಗಳ ಅಂಗವಾಗಿ ಕುಶಾಲನಗರ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಮೇ 4 ರಂದು ಸಾಕು ನಾಯಿ ಮತ್ತು ಬೆಕ್ಕು ಗಳ ಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ. ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಣಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ಕೊಡಗು ಜಿಲ್ಲೆಯ ಎಲ್ಲರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ಎಲ್ಲ ನಾಯಿ, ಬೆಕ್ಕಿಗೆ ಆಕರ್ಷಕ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಚಿತ್ರ ರಮೇಶ್ 9342202405 ಮತ್ತು ನೇಹಾ ಜಗದೀಶ್ 9845044645 ಸಂಪರ್ಕಿಸಬಹದಾಗಿದೆ. ಮೊದಲು ಬಂದ 50 ಸ್ಪರ್ಧಿಗಳಿಗೆ ಮಾತ್ರ ಅವಕಾಶವಿರುತ್ತದೆ. 3 ವಿವಿಧ ರೀತಿಯಲ್ಲಿ ಆಯ್ಕೆ ಮಾಡಿ ನಾಯಿ ಮತ್ತು ಬೆಕ್ಕು ವಿಭಾಗದಲ್ಲಿ ಬಹುಮಾನಗಳನ್ನು ವಿತರಿಸಲಾಗುತ್ತದೆ ಎಂದು ಕ್ಲಬ್ ನ ಅಧ್ಯಕ್ಷೆ ಚಿತ್ರ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









