Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ : ಶಿಕ್ಷಣ ವ್ಯಕ್ತಿಗಳನ್ನು ದೇಶದ ಸಂಪತ್ತನ್ನಾಗಿ ಪರಿವರ್ತಿಸಬೇಕು : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ : ಶಿಕ್ಷಣ ವ್ಯಕ್ತಿಗಳನ್ನು ದೇಶದ ಸಂಪತ್ತನ್ನಾಗಿ ಪರಿವರ್ತಿಸಬೇಕು : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಮತ*

ಏಪ್ರಿಲ್ 26, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.26 NEWS DESK : ಶಿಕ್ಷಣದ ಗುರಿ ಕೇವಲ ಅಂಕಗಳಿಗೆ, ರ್ಯಾಂಕ್ ಗಳಿಕೆಗೆ ಸಿಮೀತವಾಗಬಾರದು. ಅದರ ಜೊತೆಯಲ್ಲಿ ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಮತ್ತು ದೇಶಕ್ಕೆ ಅಮೂಲ್ಯ ಸಂಪತ್ತಾಗಿ ಪರಿವರ್ತನೆಯಾಗಬೇಕು. ಈ ರೀತಿಯ ಮಾರ್ಪಾಡು ಮಾಡುವವರು ಮತ್ತು ಹೊಂದುವವರು ನಿಜವಾದ ದೇಶಪ್ರೇಮಿಗಳು ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮಹದೇವಪೇಟೆಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದ ಸಂಪರ್ಕದ ಕೊಂಡಿಯಾಗಿರುವ ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ನ ದೊಡ್ಡ ಉದ್ದೇಶ ಯಶಸ್ವಿಯಾಗಲಿ ಎಂದು ಹಾರೈಸಿದರು. ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸರ್ವಜನಾಂಗದವರಿಗೆ ಪ್ರಯೋಜನ ಆಗಬೇಕು, ಈ ಸಂಸ್ಥೆ ಇತರರಿಗೆ ಪ್ರೇರಣೆಯಾಗಬೇಕು. ಸರ್ಕಾರದಿಂದ ಯಾವುದೇ ಸಂದರ್ಭದಲ್ಲಿ ಸಹಕಾರ ಸಿಗಲಿದೆ ಎಂದರು. ಉತ್ತಮ ಸಮಾಜ ದೇಶಕ್ಕೆ ಅತ್ಯಗತ್ಯ, ಯುವ ಜನತೆ ಶಿಕ್ಷಣದ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಮತ್ತು ಪ್ರೀತಿ, ವಿಶ್ವಾಸ ಸಂಪಾದಿಸಬೇಕು. ಸಮಾಜ ಕಟ್ಟುವುದಕ್ಕಾಗಿ ಯುವ ಜನಾಂಗವನ್ನು ಬೆಳೆಸಬೇಕೇ ಹೊರತು ದು:ಖ ಸೃಷ್ಟಿಗಾಗಿ ಅಲ್ಲ. ಯುವಕರಲ್ಲಿ ಸಕರಾತ್ಮಕ ಚಿಂತನೆ ಬರುವಂತೆ ನೋಡಿಕೊಳ್ಳಬೇಕು, ಆಗ ಮಾತ್ರ ನಾವು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಶಿಕ್ಷಣದ ಮೂಲಕ ಒಬ್ಬ ಅಧಿಕಾರಿಯನ್ನು ನೀಡುವುದರ ಜೊತೆಗೆ ಒಬ್ಬ ಉತ್ತಮ ಜನಪ್ರತಿನಿಧಿಯನ್ನು ಕೂಡ ನೀಡುವ ಅನಿವಾರ್ಯತೆ ಇದೆ ಎಂದು ಯು.ಟಿ.ಖಾದರ್ ತಿಳಿಸಿದರು. ನಂತರ ಕಾವೇರಿ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು, ಉಮ್ಮತ್ ಒನ್ ಕೊಡಗು ಸಂಸ್ಥೆ ಸಮಾಜಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಇರಬೇಕು, ಜಾತಿ ಧರ್ಮ, ಬೇಧಭಾವವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯೊಂದಿಗೆ ತಾವು ಇರುವುದಾಗಿ ಭರವಸೆ ನೀಡಿದರು. ಶಿಕ್ಷಣದ ಮೂಲಕ ಉತ್ತಮ ಬದಲಾವಣೆ ತರಲು ಸಾಧ್ಯ, ಹೆಣ್ಣುಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು. ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಮಾತನಾಡಿ, ಮಡಿಕೇರಿ ಕೇಂದ್ರದಲ್ಲಿ ಸುಸಜ್ಜಿತವಾದ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಆರಂಭಗೊಂಡಿದ್ದು, ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮಾಜದ ಸರ್ವರೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ನಿವೃತ್ತ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮಾತನಾಡಿ, ಶಿಕ್ಷಣ ನಮ್ಮನ್ನು ಬಲಿಷ್ಠರನ್ನಾಗಿ ಮಾಡಬೇಕು, ಯಾವುದೇ ಆಕರ್ಷಣೆ, ಆಮಿಷಗಳಿಗೆ ಒಳಗಾಗದೆ ನಿರ್ದಿಷ್ಟ ಗುರಿಯ ಕಡೆಗೆ ಕೊಂಡೊಯ್ಯಬೇಕು ಎಂದು ತಿಳಿಸಿದರು. ಪ್ರಸ್ತುತ ದಿನಗಳಲ್ಲಿ ಸರಸ್ವತಿ ಆರಾಧನೆಗಿಂತ ಲಕ್ಷ್ಮಿ ಆರಾಧನೆ ಹೆಚ್ಚಾಗಿದ್ದು, ಎಲ್ಲವನ್ನು ಹಣದಲ್ಲಿ ಅಳತೆ ಮಾಡುವ ಬದಲು ಸರಸ್ವತಿಯ ಆರಾಧನೆಯ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಪ್ರತಿಯೊಬ್ಬರು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಕಠಿಣ ಪರಿಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ಎಂದರು. ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ಆರಂಭಗೊಂಡಿರುವ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಮುಂದಿನ ದಿನಗಳಲ್ಲಿ ಪ್ರತಿ ತಾಲ್ಲೂಕುಗಳಿಗೂ ವಿಸ್ತರಿಸಲಿ ಎಂದು ಶುಭ ಹಾರೈಸಿದರು.
::: ವಿದ್ಯಾರ್ಹತೆಗೆ ತಕ್ಕ ವರ ಸಿಗುತ್ತಿಲ್ಲ :::
ಈ ಹಿಂದೆ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಘೋಷವಾಕ್ಯವನ್ನು ಹೇಳಲಾಗುತ್ತಿತ್ತು. ಆದರೆ ಇಂದು ಎಲ್ಲಾ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಆದರೆ ಯುವಕರು ಕಾಲಹರಣ, ದುಶ್ಚಟಗಳಿಂದ ತಮ್ಮ ಶಿಕ್ಷಣವನ್ನು ಕುಂಠಿತಗೊಳಿಸುತ್ತಿದ್ದು, ಇದರಿಂದ ಯುವತಿಯರು ವಿದ್ಯಾರ್ಹತೆಗೆ ತಕ್ಕ ವರನನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ದಿನಗಳಲ್ಲಿ ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿದ್ದು, ಯುವಕರೂ ಹೆಚ್ಚಿನ ಶಿಕ್ಷಣ ಪಡೆಯುವಂತಾಗಬೇಕು ಮತ್ತು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಕೊಡುಗೆ ನೀಡಬೇಕು ಎಂದು ಎ.ಬಿ.ಇಬ್ರಾಹಿಂ ಸಲಹೆ ನೀಡಿದರು. ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಮಾತನಾಡಿ, ಉತ್ತಮ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು, ಸ್ವಾರ್ಥವನ್ನು ಬಿಟ್ಟು ಎಲ್ಲಾ ಸಮುದಾಯವನ್ನು ಸೇರಿಸಿಕೊಂಡು ಉತ್ತಮ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ. ಮುಂದಿನ ಯುವ ಪೀಳಿಗೆ ಇದನ್ನು ನೆನಪಿಸಿಕೊಂಡು ಮತ್ತಷ್ಟು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಭಾರಧಿಯಾರ್ ಯನಿವರ್ಸಿಟಿಯ ಸಿಂಡಿಕೇಟ್ ಸದಸ್ಯ ಡಾ.ರಾಶೀದ್ ಗಝಾಲಿ ಮಾತನಾಡಿ, ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಛಲದೊಂದಿಗೆ ಪರಿಶ್ರಮಪಟ್ಟರೆ ಎಲ್ಲವೂ ಸಾಧ್ಯ, ಎಲ್ಲರೂ ದೊಡ್ಡ ಕನಸನ್ನು ಕಾಣಬೇಕು ಮತ್ತು ಸಕಾರಗೊಳಿಸುವ ಕೆಲಸ ಮಾಡಬೇಕು ಎಂದರು.
ಕೇವಲ ತಾತ್ಕಲಿಕ ಬದಲಾವಣೆಯಿಂದ ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯವಿಲ್ಲ. ಇದೊಂದು ನಿರಂತರ ಪ್ರಕ್ರಿಯೆ, ಸೃಜನಾತ್ಮಕ ಬೋಧನೆ ಮತ್ತು ಚಟುವಟಿಕೆಗಳಿಂದ ಮಕ್ಕಳ ಜ್ಞಾನ ವೃದ್ಧಿಯಾಗುತ್ತದೆ. ಚಟುವಟಿಕೆಗಳು ಹೊಸ ವಿಷಯದ ಸುಲಭ ಕಲಿಕೆಗೆ ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪುಣೆಯ ಅನಿಶ್ ಡೆಫೆನ್ಸ್ ಕ್ಯಾರಿಯರ್ ಇನ್ಸಿಟ್ಯೂಟ್‍ನ ಸ್ಥಾಪಕ ನಿರ್ದೇಶಕ ಅನಿಸ್ ಕುಟ್ಟಿ, ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯಾವ ರೀತಿಯ ಪೂರ್ವ ತಯಾರಿ ನಡೆಸಬೇಕು ಮತ್ತು ಆಯ್ಕೆ ಪ್ರಕ್ರಿಯೆಗಳು ಹೇಗೆ ನಡೆಯುತ್ತದೆ ಎನ್ನುವ ಕುರಿತು ಮಾರ್ಗದರ್ಶನ ನೀಡಿದರು. ಅಲ್ಲದೆ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿದರು. ಸಿ.ಎಂ.ಉಸ್ತಾದ್ ಪ್ರಾರ್ಥನೆ ಮಾಡುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಬೀದರ್‍ನ ಶಾಹಿದ್ ಗ್ರೂಫ್ ಆಫ್ ಇನ್ಸ್‍ಟ್ಯೂಟ್ ಸಿಇಓ ಡಾ.ತೌಸೀಫ್ ಅಹಮ್ಮದ್, ಪುತ್ತೂರು ಕಮ್ಯೂನಿಟಿ ಸೆಂಟರ್ ಸ್ಥಾಪಕ ಹನೀಫ್ ಪುತ್ತೂರು, ಎಂ.ಎಫ್.ಐ.ಎಫ್‍ನ ಉಪಾಧ್ಯಕ್ಷ ಕೆ.ಎಂ.ಮುಸ್ತಫ, ಮಂಗಳೂರಿನ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‍ನ ಪ್ರಮುಖ ಕೆ.ಬಿ.ರಿಯಾಝ್ ಅಹಮ್ಮದ್ ಸೇರಿದಂತೆ ಮತ್ತಿರರ ಗಣ್ಯರು, ಒಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್‍ನ ಟ್ರಸ್ಟಿಗಳು, ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಉಮ್ಮತ್ ಓನ್ ಚಾರಿಟೇಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪಿ.ಕೆ.ಖಾಲಿದ್ ಸ್ವಾಗತಿಸಿದರು, ಶಿಕ್ಷಣ ತಜ್ಞ ಮಂಗಳೂರಿನ ರಫೀಕ್ ಮಾಸ್ಟರ್ ನಿರೂಪಿಸಿದರು. ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿಗಳು ಹಾಡಿದರು. ಕಾರ್ಯಕ್ರಮಕ್ಕೂ ಮುನ್ನ ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಹಾಗೂ ಉಮ್ಮತ್ ಒನ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷ ಎಂ.ಬಿ.ಬಶೀರ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.